ಬಾಗೂರಿಗೆ ನೀರು ಶುದ್ಧೀಕರಣ ಘಟಕ ಮಂಜೂರು: ಗೂಳಿಹಟ್ಟಿ
Team Udayavani, Apr 26, 2020, 5:28 PM IST
ಹೊಸದುರ್ಗ: ತಾಲೂಕಿನ ಬಾಗೂರು ಗ್ರಾಮದಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಶುದ್ಧ ಕುಡಿಯುವ ನೀರಿನ ಘಟಕ ಪರಿಶೀಲಿಸಿದರು
ಹೊಸದುರ್ಗ: ಬಾಗೂರು ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿದೆ. ಹಾಗಾಗಿ ಎರಡು ಕುಡಿಯುವ ನೀರು ಶುದ್ಧೀಕರಣ ಘಟಕಗಳನ್ನು ಮಂಜೂರು ಮಾಡುವುದಾಗಿ ಶಾಸಕ ಗೂಳಿಹಟ್ಟಿ ಶೇಖರ್ ಭರವಸೆ ನೀಡಿದರು.
ಬಾಗೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಬಹು ದಿನಗಳಿಂದ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಯಲ್ಲಿರುವ ಕಾರಣ ಬಹು ಬೇಡಿಕೆಯಾದ ಶುದ್ಧ ಕುಡಿಯುವ ನೀರಿನ ಘಟಕ ಶೀಘ್ರದಲ್ಲಿ ಸ್ಥಾಪಿಸುವುದಾಗಿ ಹೇಳಿದರು. ಗ್ರಾಮದಲ್ಲಿ ಎರಡು ಕಡೆ ನೀರು ಕೆರೆ ಇರುವುದರಿಂದ ಭದ್ರಾ ಮೇಲ್ದಂಡೆ ಯೋಜನೆ ಅಡಿ ನೀರು ತುಂಬಿಸಲಾಗುವುದು.ನೀರು ಬಸಿಯುವಿಕೆಯಿಂದ ಬರುವ ನೀರನ್ನು ಹೊರ ಹಾಕಲು ರಾಜಕಾಲುವೆ ನಿರ್ಮಾಣ ಮಾಡಲಾಗುವುದು. ಗ್ರಾಮದ ಮೂಡಲ ಕೆರೆ ಏರಿ ದುರಸ್ತಿ ಅಗತ್ಯವಿದ್ದು ಸಣ್ಣ ನೀರಾವರಿ ಇಲಾಖೆಯಿಂದ ಮಣ್ಣು ಹಾಕುವುದು, ಕಲ್ಲು ಪಿಚ್ಚಿಂಗ್ ಮಾಡಿಸುವ ಮೂಲಕ ಏರಿ ಭದ್ರತೆಗೆ ಆದ್ಯತೆ ನೀಡುವುದಾಗಿ ತಿಳಿಸಿದರು.
ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದ ಆಶಾ ಕಾರ್ಯಕರ್ತೆಯರಾದ ಶೋಭಾ ಹಾಗೂ ಪದ್ದಮ್ಮ ಅವರನ್ನು ಅಭಿನಂದಿಸಿದ ಶಾಸಕರು, ಅವರಿಂದ ಬಾಗೂರು ಗ್ರಾಮದ ಮಾಹಿತಿ ಪಡೆದರು. ನಿಮ್ಮೆಲ್ಲರ ಸೇವೆಯನ್ನು ದೇಶದ ಜನತೆ ಅಭಿನಂದಿಸುತ್ತಿದೆ ಎಂದರು. ಇದೇ ಸಂದರ್ಭದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಬಾಗೂರಿನ ನೀರಗಂಟಿ ರಾಘವೇಂದ್ರ ಮನೆಗೆ ಭೇಟಿ ನೀಡಿದ ಗೂಳಿಹಟ್ಟಿ, ಚಿಕಿತ್ಸೆಗಾಗಿ 50 ಸಾವಿರ ರೂ. ನೀಡಿದರು. ಪರಪ್ಪಸ್ವಾಮಿ ಗ್ರಾಮಾಂತರ ಪ್ರೌಢಶಾಲೆ ಅಧ್ಯಕ್ಷ ವಾಸುದೇವ್, ಮುಖಂಡರಾದ ಪುರುಷೋತ್ತಮ, ವಿಜಯಕುಮಾರ್, ಭಜರಂಗದಳದ ಅರುಣ್, ಬಿ.ಟಿ. ಸುರೇಶ್, ಆಂಜಿನಪ್ಪ, ರುದ್ರೇಶ್, ರಾಜು ಹೋವಳೆ, ಮಧು, ರಂಗನಾಥ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್ ಡೇಂಜರ್ ಸ್ಪಾಟ್
Brijesh Chowta: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್ ಚೌಟ
Royal Movie; ಜ.24ರಿಂದ ʼರಾಯಲ್ʼ; ಟ್ರೇಲರ್ ರಿಲೀಸ್‌ಗೆ ತಂಡ ರೆಡಿ
Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.