ಜಾತಿ-ಧರ್ಮಕ್ಕಿಂತ ಮಾನವೀಯತೆ ದೊಡ್ಡದು; ಲೇಖಕ ಎಚ್‌.ಆನಂದಕುಮಾರ್‌

ಸಂವಿಧಾನದಲ್ಲಿ ಯಾರೂ ಮೇಲು-ಕೀಳಲ್ಲ. ಎಲ್ಲರಿಗೂ ಸಮಾನ ಅವಕಾಶವಿದೆ.

Team Udayavani, Nov 28, 2022, 6:00 PM IST

ಜಾತಿ-ಧರ್ಮಕ್ಕಿಂತ ಮಾನವೀಯತೆ ದೊಡ್ಡದು; ಲೇಖಕ ಎಚ್‌.ಆನಂದಕುಮಾರ್‌

ಚಿತ್ರದುರ್ಗ: ಯಾವುದೇ ಒಂದು ಜಾತಿ ಧರ್ಮಕ್ಕಿಂತ ತ್ಯಾಗ, ಕರುಣೆ, ಅನುಕಂಪ, ಮಾನವೀಯತೆ ದೊಡ್ಡದು ಎಂದು ಲೇಖಕ ಎಚ್‌.ಆನಂದಕುಮಾರ್‌ ಅಭಿಪ್ರಾಯಪಟ್ಟರು.

ಕರ್ನಾಟಕ ರಾಜ್ಯ ನಿರ್ಗತಿಕರ ಮತ್ತು ಮಕ್ಕಳ ಹಿತರಕ್ಷಣಾ ಸಮಿತಿ ಹಾಗೂ ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಹಮ್ಮಿಕೊಂದಿದ್ದ ಬಡ ಕುಟುಂಬಗಳಿಗೆ ಉಚಿತ ಕುಟುಂಬ ಉಳಿತಾಯ ಸೇವಾ ಕಾರ್ಡ್‌ ವಿತರಣೆ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನದಡಿ ಪ್ರತಿಯೊಬ್ಬರಿಗೂ ಮೂಲ ಸೌಲಭ್ಯ ಸಿಗಬೇಕು. ಆದರೆ ಈಗ ಹೋರಾಟದ ಮೂಲಕ ಹಕ್ಕು ಪಡೆಯಬೇಕಾಗಿದೆ. ಬಡತನದಿಂದ ಹೊರಗೆ ಬರಬೇಕಾದರೆ ಕಡ್ಡಾಯವಾಗಿ ಮಕ್ಕಳಿಗೆ ಶಿಕ್ಷಣ ಕೊಡಿಸಿ. ಉಚಿತ ಕುಟುಂಬ ಉಳಿತಾಯ ಸೇವಾ ಕಾರ್ಡ್‌ನ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ಉಳಿತಾಯ ಕಾರ್ಡ್‌ನಿಂದ ಆಸ್ಪತ್ರೆ, ಮೆಡಿಕಲ್‌ ಸ್ಟೋರ್‌, ಕಿರಾಣಿ ಅಂಗಡಿ, ಹಾರ್ಡ್‌ವೇರ್‌, ಹೀಗೆ ಹತ್ತು ಹಲವಾರು ಅಂಗಡಿಗಳಲ್ಲಿ ಶೇ. 2ರಿಂದ 50ರಷ್ಟು ಉಳಿತಾಯವಾಗುತ್ತದೆ. ವಿಧಾನಪರಿಷತ್‌ ಮಾಜಿ ಸದಸ್ಯ ರಘು ಆಚಾರ್‌ ಇದಕ್ಕೆ ನೆರವು ನೀಡಿದ್ದಾರೆ. ಕೋವಿಡ್‌ನ‌ಂತಹ ಸಂಕಷ್ಟದಲ್ಲಿ ಕರ್ನಾಟಕ ರಾಜ್ಯ ನಿರ್ಗತಿಕರ ಮತ್ತು ಮಕ್ಕಳ ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಎಚ್‌.ಎಚ್‌. ಮಂಜುನಾಥ್‌ ಜಿಲ್ಲಾಸ್ಪತ್ರೆಯಲ್ಲಿನ ಬಡ ರೋಗಿಗಳಿಗೆ ರೈಲು ನಿಲ್ದಾಣ, ಬಸ್‌ನಿಲ್ದಾಣ ರಸ್ತೆ ಬದಿಯಲ್ಲಿರುವ ಭಿಕ್ಷುಕರ ಬಳಿ ಹೋಗಿ ಊಟ ಹಾಗೂ ನೀರಿನ ಬಾಟಲ್‌ಗ‌ಳನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ ಎಂದು ಬಣ್ಣಿಸಿದರು.

ಮಹಾರಾಣಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ| ಸಂಜೀವಕುಮಾರ್‌ ಪೋತೆ ಮಾತನಾಡಿ, ಎಲ್ಲಾ ರಂಗದಲ್ಲಿಯೂ ಮಹಿಳೆ ಮುಂದೆ ಬಂದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಸಂವಿಧಾನದಲ್ಲಿ ಯಾರೂ ಮೇಲು-ಕೀಳಲ್ಲ. ಎಲ್ಲರಿಗೂ ಸಮಾನ ಅವಕಾಶವಿದೆ. ಬಡತನದ ಕಾರಣವಿಟ್ಟುಕೊಂಡು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಬೇಡಿ. ಬಡತನದಿಂದ ಹೊರಬರಬೇಕಾದರೆ ಶಿಕ್ಷಣ ಮುಖ್ಯ.

ದುಶ್ಚಟಗಳಿಂದ ದೂರವಿದ್ದು, ದುಡಿದ ಹಣವನ್ನು ಉಳಿಸಿ ಜೀವನ ಮಟ್ಟವನ್ನು ಸುಧಾರಣೆ ಮಾಡಿಕೊಳ್ಳಿ. ಸಂವಿಧಾನವನ್ನು ಪ್ರತಿಯೊಬ್ಬರೂ ಓದಿ ಕಾನೂನು ಅರಿವು ಮೂಡಿಸಿಕೊಳ್ಳುವಂತೆ ಮಹಿಳೆಯರಲ್ಲಿ ಮನವಿ ಮಾಡಿದರು. ನ್ಯಾಯವಾದಿ ಎಚ್‌.ಒ. ಜಗದೀಶ್‌ ಗುಂಡೇರಿ ಮಾತನಾಡಿ, ಕೊಳಗೇರಿಯಲ್ಲಿದ್ದೇವೆಂಬ ಕೀಳರಿಮೆ ಬಿಟ್ಟು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿದಾಗ ಮಾತ್ರ ಸಂವಿಧಾನದ ಆಶಯಗಳು ಈಡೇರಲು ಸಾಧ್ಯ ಎಂದು ತಿಳಿಸಿದರು.

ಎನ್‌ಎಸ್‌ಯುಐ ರಾಷ್ಟ್ರೀಯ ಕಾರ್ಯದರ್ಶಿ ಮಮತಾ ನೇರ್ಲಗಿ, ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಎಚ್‌.ಎಚ್‌. ಮಂಜುನಾಥ್‌, ಉಪ ತಹಶೀಲ್ದಾರ್‌ ಲೋಹಿತಾಶ್ವ, ರಂಗ ನಿರ್ದೇಶಕ ಕೆಪಿಎಂ ಗಣೇಶಯ್ಯ ಮಾತನಾಡಿದರು.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.