ನೂರು ಹಾಸಿಗೆಗಳ ಆಸ್ಪತ್ರೆಗೆ ನೂರೆಂಟು ಸಮಸ್ಯೆ
Team Udayavani, Jun 25, 2018, 12:33 PM IST
ಎಸ್. ರಾಜಶೇಖರ
ಮೊಳಕಾಲ್ಮೂರು: ಪಟ್ಟಣದಲ್ಲಿರುವ ನೂರು ಹಾಸಿಗೆಗಳ ಸರ್ಕಾರಿ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಎದುರಿಸುತ್ತದೆ.
ಹಲವು ದಶಕಗಳ ಹಿಂದೆ ಕೇವಲ 45 ಹಾಸಿಗೆಗಳ ಸರ್ಕಾರಿ ಆಸ್ಪತ್ರೆಯಾಗಿತ್ತು. ಎನ್.ವೈ. ಗೋಪಾಲಕೃಷ್ಣ
ಶಾಸಕರಾಗಿದ್ದಾಗ ನೂರು ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗಿತ್ತು. ಸುಸಜ್ಜಿತ ಕಟ್ಟಡವನ್ನು ನಿರ್ಮಾಣ ಮಾಡಲಾಗಿತ್ತು. ಬಿಜೆಪಿ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ಹಾಗೂ ಪ್ರಸ್ತುತ ಮೊಳಕಾಲ್ಮೂರು ಕ್ಷೇತ್ರದ ಶಾಸಕ ಬಿ. ಶ್ರೀರಾಮುಲು, ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಜಿ. ಕರುಣಾಕರ ರೆಡ್ಡಿ ನೂರು ಹಾಸಿಗಳ ಆಸ್ಪತ್ರೆಯನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಿದ್ದರು. ಆಸ್ಪತ್ರೆಗೆ ವೈದ್ಯರು ಮತ್ತು ಸಿಬ್ಬಂದಿ ನೇಮಕ ಮಾಡಲಾಗುವುದು ಎಂದು ಶ್ರೀರಾಮುಲು ಭರವಸೆ ನೀಡಿದ್ದರು.
ಆಸ್ಪತ್ರೆಯ ಉದ್ಘಾಟನೆ ನೆರವೇರಿಸಿ ಹೋದ ಬಳಿಕ ಶ್ರೀರಾಮುಲು ಇತ್ತ ತಿರುಗಿಯೂ ನೋಡಿರಲಿಲ್ಲ.
ನಂತರ ಬಂದ ಕಾಂಗ್ರೆಸ್ ಸರ್ಕಾರ ಕೂಡ ಆಸ್ಪತ್ರೆಗೆ ವೈದ್ಯರು ಮತ್ತು ಸಿಬ್ಬಂದಿ ನೇಮಕ ಮಾಡುವಲ್ಲಿ
ನಿರ್ಲಕ್ಷ್ಯ ತಾಳಿತು.
ಹೆಸರಿಗೆ ಮಾತ್ರ ನೂರು ಹಾಸಿಗೆಗಳ ಆಸ್ಪತ್ರೆಯಾಗಿದ್ದು ವೈದ್ಯರು ಮತ್ತು ಸಿಬ್ಬಂದಿ ನೇಮಕ ಮಾತ್ರ ಆಗಿಯೇ
ಇಲ್ಲ. ಸತತ ಬರಗಾಲದ ಬೇಗೆಗೆ ಸಿಲುಕಿರುವ ತಾಲೂಕಿನ ಜನರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವಂತಾಗಿದೆ. ಇಲ್ಲಿ ತಜ್ಞ ವೈದ್ಯರಿಲ್ಲದ ಕಾರಣ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೆಂಗಳೂರು , ಮಣಿಪಾಲ ಸೇರಿದಂತೆ ದೂರದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಹೋಗಬೇಕಿದೆ.
ಆಸ್ಪತ್ರೆಗೆ ಔಷಧ ಮತ್ತು ಪರಿಕರಗಳು ಸರ್ಕಾರದಿಂದ ಸರಬರಾಜಾಗುತ್ತಿವೆ. ಆದರೆ ಸಾರ್ವಜನಿಕರು ಈ
ಸೌಲಭ್ಯಗಳಿಂದ ವಂಚಿತವಾಗುವಂತಾಗಿದೆ. ಮಹಿಳಾ ಮತ್ತು ಮಕ್ಕಳ ತಜ್ಞೆ ಡಾ| ಶಾರದಾ ಒಂದು ವರ್ಷಕ್ಕೂ
ಹೆಚ್ಚು ಕಾಲ ರಜೆ ಮೇಲೆ ತೆರಳಿರುವುದರಿಂದ ಸಮಸ್ತೆ ಮತ್ತಷ್ಟು ಬಿಗಡಾಯಿಸಿದೆ. ಸರ್ಕಾರಿ ಆಸ್ಪತ್ರೆಗೆ 82
ವೈದ್ಯರು ಸಿಬ್ಬಂದಿ ಹುದ್ದೆ ಮಂಜೂರಾಗಿದೆ. ಪ್ರಸ್ತುತ 30 ಜನರಷ್ಟೇ ಕಾರ್ಯನಿರ್ವಹಿಸುತ್ತಿದ್ದಾರೆ. 52 ವೈದ್ಯರು
ಮತ್ತು ಸಿಬ್ಬಂದಿಗಳ ಹುದ್ದೆಗಳು ಖಾಲಿ ಉಳಿದಿವೆ.
ಈ ಆಸ್ಪತ್ರೆ ಹಲವು ಸಮಸ್ಯೆ ಎದುರಿಸುತ್ತಿದ್ದರೂ ಜಿಲ್ಲಾ ಆರೋಗ್ಯಾಧಿಕಾರಿ ಸಮಸ್ಯೆ ಬಗೆಹರಿಸಲು
ಮುಂದಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ. ದಿನನಿತ್ಯ ಒಳ ಮತ್ತು ಹೊರ ರೋಗಿಗಳ ಸಂಖ್ಯೆ
ಹೆಚ್ಚುತ್ತಿದೆ. ಕಾಯಂ ವೈದ್ಯರಾದ ಡಾ| ಮಂಜುನಾಥ, ಡಾ| ಪದ್ಮಾ, ನಿಯೋಜನೆಗೊಂಡ ಡಾ| ಅಚ್ಯುತ
ನಾಯಕ ಹಾಗೂ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಹಲವು ವೈದ್ಯರನ್ನು ನಿಯೋಜಿಸಿ
ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಆದರೆ ರೋಗಿಗಳ ಸಂಖ್ಯೆಗೆ ತಕ್ಕಷ್ಟು ವೈದ್ಯರಿಲ್ಲದೇ ಇರುವುದರಿಂದ ಇರುವ ವೈದ್ಯರ ಕಾರ್ಯದೊತ್ತಡ ಹೆಚ್ಚುತ್ತಿದೆ. ಅಲ್ಲದೆ ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಅಭಾವವಿದೆ. ರೋಗಿಗಳು ಮತ್ತು ಅವರ ಸಂಬಂಧಿಗಳು ಹೊರಗಿನಿಂದ ನೀರು ತರಬೇಕಾದ ಪರಿಸ್ಥಿತಿ ಇದೆ. ಅಂದು ಆರೋಗ್ಯ ಸಚಿವರಾಗಿದ್ದ ಬಿ. ಶ್ರೀರಾಮುಲು ಅವರೇ ಇಂದು ಮೊಳಕಾಲ್ಮೂರು ಕ್ಷೇತ್ರದ ಶಾಸಕರಾಗಿದ್ದಾರೆ. ಇನ್ನಾದರೂ ಆಸ್ಪತ್ರೆಗೆ ಅಗತ್ಯವಿರುವ ವೈದ್ಯರು ಮತ್ತು ಸಿಬ್ಬಂದಿ ನೇಮಕಕ್ಕೆ ಮುಂದಾಗಬೇಕಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ನೇಮಕ ಮಾಡಲು ಕಾರಣಾಂತರದಿಂದ ಆಗಲಿಲ್ಲ. ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಲಿಸುತ್ತೇನೆ. ವೈದ್ಯರು ಮತ್ತು ಸಿಬ್ಬಂದಿ ನೇಮಕಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.
ಬಿ. ಶ್ರೀರಾಮುಲು, ಶಾಸಕರು.
ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯರನ್ನು ನಿಯೋಜಿಸಿದರೂ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ. ಇದರಿಂದ ವೈದ್ಯರ ಕೊರತೆ ಎದುರಾಗಿದೆ. ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರು ಮತ್ತು ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು.
ಡಾ| ಬಿ.ವಿ. ನೀರಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ
Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ
THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್’ ವ್ಯವಸ್ಥೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.