ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ: ಡಿಕೆಶಿ
Team Udayavani, Nov 22, 2020, 3:53 PM IST
ಚಿತ್ರದುರ್ಗ: ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ. ಕಳೆದ 30 ವರ್ಷದ ರಾಜಕಾರಣ ಹಾಗೂ ಮಂತ್ರಿಯಾದಾಗಲೂ ನನ್ನ ಮೇಲೆ ಆರೋಪಗಳಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಚಿತ್ರದುರ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನನ್ನ ಮೇಲೆ ಯಾವ ಕಮಿಷನ್ ತನಿಖೆಯೂ ನಡೆದಿಲ್ಲ. ಮಾಡಿರುವ ತನಿಖೆಗಳೆಲ್ಲವೂ ಕೂಡಾ ಮುಗಿದಿವೆ ಎಂದರು.
ಆದಾಯಕ್ಕಿಂತ ಆಸ್ತಿ ಜಾಸ್ತಿಯಾಗಿದೆ ಎಂದು ಕರ್ನಾಟಕದಲ್ಲಿ ಒಂದೇ ಒಂದು ಕೇಸ್ ಸಿಬಿಐಗೆ ನೀಡಿದ್ದಾರೆ. ಈ ಕಾರಣಕ್ಕೆ ದಾಳಿ ಮಾಡಿದ್ದರು, ಈಗ ಸಮನ್ಸ್ ನೀಡಿದ್ದಾರೆ, ಕಾನೂನಿಗೆ ಗೌರವ ನೀಡಿ ಉತ್ತರಿಸುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ: BSY ಒತ್ತಡಕ್ಕೆ ಮಣಿದು ಅಂದು ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಲಾಗಿತ್ತು: ರೇಣುಕಾಚಾರ್ಯ
ಪ್ರಹ್ಲಾದ್ ಜೋಶಿಗೆ ತಿರುಗೇಟು:
ಕಾಂಗ್ರೆಸ್ ದೇಶ ವಿರೋಧಿ ಎಂಬ ಪ್ರಹ್ಲಾದ್ ಜೋಷಿ ಹೇಳಿಕೆಗೆ ಪ್ರತಿಕ್ರಿಯಿಸಿ, ಹೆಗಲ ಮೇಲಿನ ಶಾಲು ತೋರಿಸಿ ಇದು ಬಾವುಟ. ಕಾಂಗ್ರೆಸ್ ನವರಿಗೆ ಮಾತ್ರ ಇದು ಇರುವುದು ಬೇರೆ ಯಾರಿಗೂ ಇಲ್ಲ. ಇದೊಂದೆ ಉತ್ತರ ಎಂದು ತಿರುಗೇಟು ನೀಡಿದರು.
ಈ ಸಂದರ್ಭದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಕೈ ಟಿಕೇಟ್ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.
ಈ ವೇಳೆ ಶಾಸಕ ಟಿ. ರಘುಮೂರ್ತಿ, ಮಾಜಿ ಶಾಸಕ ಡಿ. ಸುಧಾಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜಪೀರ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಎಸ್. ಮಂಜುನಾಥ್ ಮತ್ತಿತರರಿದ್ದರು.
ಇದನ್ನೂ ಓದಿ: ರಾಜಕೀಯ ಖೈದಿ: ಸೌದಿಯ ಮಹಿಳಾ ಹಕ್ಕು ಹೋರಾಟಗಾರ್ತಿ ಲೌಜೈನ್ ಅಲ್-ಹಥ್ಲೌಲ್ ರ ಬಗ್ಗೆ ಗೊತ್ತಾ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.