ರೈತಪರ ಕಾಳಜಿ ಇದ್ದಲ್ಲಿ ಸಾಲ ಮನ್ನಾ ಮಾಡಿ’
Team Udayavani, Jun 27, 2017, 3:45 AM IST
ಹೊಳಲ್ಕೆರೆ: ಕೇಂದ್ರ ಸರ್ಕಾರಕ್ಕೆ ರೈತಪರ ಕಾಳಜಿ ಇದ್ದಲ್ಲಿ ಕೂಡಲೇ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲವನ್ನು ಮನ್ನಾ ಮಾಡಬೇಕೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ಒತ್ತಾಯಿಸಿದರು.
ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿದ್ದಕ್ಕೆ ಕೇಂದ್ರ ಸಚಿವರೊಬ್ಬರು “ಸಾಲ ಮನ್ನಾ ಎಂಬುದು ಫ್ಯಾಷನ್
ಆಗಿಬಿಟ್ಟಿದೆ’ ಎಂದು ಟೀಕಿಸಿದ್ದಾರೆ. ಈ ಮೂಲಕ ರೈತರಿಗೆ ಅವಮಾನ ಮಾಡಿದ್ದಾರೆ. ಇಂತಹ ರೈತ ವಿರೋಧಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು ರೈತರು ಮುಂದಾಗಬೇಕು ಎಂದರು.
ಪಟ್ಟಣದ ಬಯಲು ರಂಗಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ಸರ್ಕಾರಿ ನೌಕರರ ಭವನಕ್ಕೆ ಶಂಕುಸ್ಥಾಪನೆ, ಉಚಿತ ಅರೋಗ್ಯ ತಪಾಸಣೆ, ರಕ್ತದಾನ ಶಿಬಿರ ಹಾಗೂ ಪ್ರತಿಭಾ ಪುರಸ್ಕಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ರಾಜ್ಯದಲ್ಲಿ ಬರ ಇರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನರಿತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರೈತರು ಸಹಕಾರ ಸಂಘಗಳಲ್ಲಿ ಪಡೆದಿದ್ದ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಿದ್ದಾರೆಂದು ಸಮರ್ಥಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.