ಸ್ವದೇಶಿ ವಸ್ತು-ಸಾವಯವ ಗೊಬ್ಬರ ಬಳಕೆ ಹೆಚ್ಚಾಗಲಿ

Team Udayavani, Feb 23, 2021, 6:14 PM IST

swadesi

ಚಳ್ಳಕೆರೆ: ಆಧುನಿಕತೆ ಹೆಸರಿನಲ್ಲಿ ನಾವೆಲ್ಲರೂ ನಮ್ಮ ಆರೋಗ್ಯವೂ ಸೇರಿದಂತೆ ಹಲವಾರು ವಿಷಯಗಳಲ್ಲಿ ಹಿನ್ನಡೆ ಅನುಭವಿಸುತ್ತಿದ್ದೇವೆ. ಆದ್ದರಿಂದ ಭವಿಷ್ಯವನ್ನು ಉತ್ತಮ ಪಡಿಸಿಕೊಳ್ಳಲು ಸದೃಢ ಆರೋಗ್ಯ ಮುಖ್ಯ. ಈ ನಿಟ್ಟಿನಲ್ಲಿ ಸ್ವದೇಶಿ ವಸ್ತುಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಎಲ್ಲರೂ ಬೆಂಬಲಿಸಬೇಕೆಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್‌ ಬಾಬು ಹೇಳಿದರು.

ನಗರದ ಬೆಂಗಳೂರು ರಸ್ತೆಯಲ್ಲಿ ಆರಂಭಗೊಂಡ ಸ್ವದೇಶಿ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟಿಸಿ ಕಂಬಳಿ ಮಾರುಕಟ್ಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾವು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಯಾರಾದರೂ ಶತಾಯುಷಿಗಳು ಇದ್ದಾರೆಯೇ ಎಂದು ನೋಡುವಂತಹ ಸ್ಥಿತಿ ಉಂಟಾಗಿದೆ. ಈ ಹಿಂದೆ ನಮ್ಮ ಪೂರ್ವಜರು 100 ರಿಂದ 120 ವರ್ಷಗಳ ತನಕ ಬದುಕಿದ ನಿದರ್ಶನಗಳಿವೆ. ಆರೋಗ್ಯವಂತರಾಗಿ, ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದ್ದರು.ಇಂದು ನಾವು ತುಂಬಾ ಅಶಕ್ತರಂತೆ ಕಾಣಲು ಮೂಲ ಕಾರಣ ಆಧುನಿಕ ವಸ್ತುಗಳು. ಆದ್ದರಿಂದ ಸ್ವದೇಶಿ ನಿರ್ಮಿತ ವಸ್ತುಗಳು ಹಾಗೂ ಸಾವಯವ ಗೊಬ್ಬರ ಬಳಕೆಯ ಬಗ್ಗೆ ಗಮನ ಹರಿಸಬೇಕಿದೆ ಎಂದರು.

ಮಂಜುನಾಥ ಸಾವಯವ ಮತ್ತು ಆರ್ಯುವೇದ ಕೇಂದ್ರದ ಮುಖ್ಯಸ್ಥ ಆರ್‌. ಮಲ್ಲೇಶಪ್ಪ ಮಾತನಾಡಿ, ಕಳೆದ ಒಂದು ವರ್ಷಗಳಿಂದ ಸ್ವದೇಶಿ ಗೃಹೋಪಯೋಗಿ ವಸ್ತುಗಳ ಬಳಕೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ. ಪ್ರತಿ ನಿತ್ಯ ಈ ವಸ್ತುಗಳ ಉಪಯೋಗದಿಂದ ಆರೋಗ್ಯ ಬದಲಾವಣೆಯ ಜೊತೆಗೆ ನೆಮ್ಮದಿಯ ಜೀವನ ನಡೆಸಬಹುದು ಎಂದು ತಿಳಿಸಿದರು.

ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಸುರೇಶ್‌ ಮಾತನಾಡಿ, ಪ್ರಾರಂಭದ ಹಂತದಲ್ಲಿ ಸ್ವದೇಶಿ ವಸ್ತುಗಳ ಉತ್ಪಾದನೆಗೆ ಎಲ್ಲೆಡೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದಾಗ್ಯೂ ನಾವು ನಮ್ಮಲ್ಲೇ ಲಭ್ಯವಿರುವ ವಸ್ತುಗಳನ್ನು ಬಳಸಿಕೊಂಡು ಸ್ವದೇಶಿ ವಸ್ತುಗಳ ಉತ್ಪಾದನೆಗೆ ಮುಂದಾದೆವು. ಇಂದು ರಾಜ್ಯ ಮಟ್ಟದಲ್ಲಿ ಬೆಳೆದಿದ್ದು, ಲಕ್ಷಾಂತರ ಜನರ ಆರೋಗ್ಯ ಸುಧಾರಣೆಯಲ್ಲಿ ದೃಢ ಹೆಜ್ಜೆ ಇಟ್ಟಿದೆ ಎಂದರು.

ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ. ಭೂತಯ್ಯ, ಜಿಪಂ ಸದಸ್ಯ ಬಿ.ಪಿ. ಪ್ರಕಾಶ್‌ಮೂರ್ತಿ, ತಾಪಂ ಅಧ್ಯಕ್ಷ ಕೆ.ತಿಪ್ಪೇಸ್ವಾಮಿ, ನಗರಸಭಾ ಸದಸ್ಯೆ ಮಂಜುಳಾ ಪ್ರಸನ್ನಕುಮಾರ್‌, ಬಿ.ಎಸ್‌. ಅನುಸೂಯಮ್ಮ, ಕಂದಿಕೆರೆ ಸುರೇಶ್‌ಬಾಬು, ಎನ್‌. ಜಯರಾಂ, ಟಿ. ಮಲ್ಲಿಕಾರ್ಜುನ್‌, ಗಂಗಾಧರ, ಡಾ| ತಿಮ್ಮಾರೆಡ್ಡಿ, ಧನಂಜಯ, ಸಿ. ಲೋಕೇಶ್‌, ತ್ರಿಮೂರ್ತಿ ಮಾತನಾಡಿದರು.

ನಗರಸಭೆ ಅಧ್ಯಕ್ಷೆ ಸಿ.ಬಿ. ಜಯಲಕ್ಷ್ಮೀ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಕುರುಗುಂಟೇಶ್ವರ ಸಾವಯವ ಕೃಷಿ ಕೇಂದ್ರದ ಅಧ್ಯಕ್ಷ ಎಂ. ಪಾತಲಿಂಗಪ್ಪ ಸ್ವಾಗತಿಸಿದರು. ಎಂ. ಸಂದೀಪ್‌ ವಂದಿಸಿದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.