ಬಿಸಿಯೂಟ ತಯಾರಕರ ವೇತನ ಹೆಚ್ಚಿಸಿ
•ಒಂದೂವರೆ ದಶಕದಿಂದ ಕೆಲಸ ಮಾಡುತ್ತಿದ್ದರೂ ಬೇಡಿಕೆ ಈಡೇರಿಕೆಗೆ ಸರ್ಕಾರದ ನಿರ್ಲಕ್ಷ್ಯ
Team Udayavani, Aug 4, 2019, 12:56 PM IST
ಚಿತ್ರದುರ್ಗ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ತಯಾರಕರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಚಿತ್ರದುರ್ಗ: ಬಿಸಿಯೂಟ ವ್ಯವಸ್ಥೆಯನ್ನು ಖಾಸಗಿಯವರಿಗೆ ವಹಿಸುವುದನ್ನು ವಿರೋಧಿಸಿ ಹಾಗೂ ಬಿಸಿಯೂಟ ತಯಾರಕರಿಗೆ ಕನಿಷ್ಠ ವೇತನ ಜಾರಿಗೊಳಿಸಲು ಆಗ್ರಹಿಸಿ ಎಐಟಿಯುಸಿ ನೇತೃತ್ವದಲ್ಲಿ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಮುಖ್ಯ ರಸ್ತೆಯಿಂದ ಮೆರವಣಿಗೆ ಆರಂಭಿಸಿ ಜಿಲ್ಲಾಧಿಕಾರಿ ಕಚೇರಿ ತಲುಪಿದ ಬಿಸಿಯೂಟ ತಯಾರಕರು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಒಂದೂವರೆ ದಶಕದಿಂದ ಕೆಲಸ ಮಾಡುತ್ತಿದ್ದಾರೆ. ಅಡುಗೆ ತಯಾರಕರಿಗೆ ಮಾಸಿಕ 2,700 ರೂ. ಹಾಗೂ ಸಹಾಯಕಿಯರಿಗೆ 2,600 ರೂ. ಗೌರವಧನ ನೀಡಲಾಗುತ್ತಿದೆ. ಇದರಿಂದ ಕುಟುಂಬ ನಿರ್ವಹಣೆ ತುಂಬಾ ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು.
ರಾಜ್ಯದ ಸರ್ಕಾರಿ ಶಾಲೆಗಳ ಬಿಸಿಯೂಟ ಪೂರೈಕೆಯನ್ನು ಇಸ್ಕಾನ್ ಹಾಗೂ ಇತರೆ ಖಾಸಗಿ ಸಂಸ್ಥೆಗಳಿಗೆ ಕೊಡುವ ನಿರ್ಧಾರ ಕೈಬಿಡಬೇಕು. ಬಿಸಿಯೂಟ ತಯಾರಕರಿಗೆ ಕೆಲಸದ ಭದ್ರತೆ ಒದಗಿಸಬೇಕು. ಜತೆಗೆ ಶಾಲಾ ಸಿಬ್ಬಂದಿಯಾಗಿ ಪರಿವರ್ತಿಸಬೇಕು. ನಮ್ಮನ್ನು ಕಾರ್ಮಿಕರಾಗಿ ಪರಿಗಣಿಸಿ ಕಾರ್ಮಿಕ ಕಾಯ್ದೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಎಐಟಿಯುಸಿ ಮುಖಂಡರಾದ ಬಿ. ಬಸವರಾಜಪ್ಪ, ಜಿ.ಸಿ. ಸುರೇಶ್‌ಬಾಬು, ಟಿ.ಆರ್. ಉಮಾಪತಿ, ಕೆ.ಇ. ಸತ್ಯಕೀರ್ತಿ, ಗಣೇಶ್, ಸುವರ್ಣಮ್ಮ, ರಜೀಯಾ, ಪರ್ವೀನ್ ತಾಜ್, ಶಾರದಮ್ಮ, ಲತಾ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರಮುಖ ಬೇಡಿಕೆಗಳು: ಬಿಸಿಯೂಟ ತಯಾರಕರಿಗೆ ಪಿಎಫ್-ಇಎಸ್‌ಐ ಸೌಲಭ್ಯ ಜಾರಿಗೆ ತರಬೇಕು. ಬಿಸಿಯೂಟ ಯೋಜನೆ ಬದಲಿಗೆ ಬಿಸಿಯೂಟ ನಿರಂತರ ಕಾರ್ಯಕ್ರಮವಾಗಿ ಬದಲಿಸಬೇಕು. 60 ವರ್ಷ ದಾಟಿದ ಬಿಸಿಯೂಟ ತಯಾರಕರನ್ನು ಕೆಲಸದಿಂದ ಬಿಡುಗಡೆಗೊಳಿಸಿದಾಗ 2 ಲಕ್ಷ ರೂ. ಇಡಿಗಂಟು ನೀಡಬೇಕು. ಜತೆಗೆ ಮಾಸಿಕ 3 ಸಾವಿರ ರೂ. ಪಿಂಚಣಿ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು. ನಾಲ್ಕು ತಿಂಗಳಿನಿಂದಲೂ ವೇತನ ಇಲ್ಲದೇ ಜೀವನ ನಿರ್ವಹಣೆ ಕಷ್ಟಕರವಾಗಿದ್ದು, ಕೂಡಲೇ ವೇತನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
ನುಡಿ ನಮನ: ಸಾಮಾಜಿಕ ಚಿಂತಕ, ಎಲ್ಲರ ಮನಗೆದ್ದ ಶ್ರೇಷ್ಠ ಪ್ರಾಧ್ಯಾಪಕ ಪ್ರೊ.ಅಸ್ಸಾದಿ
Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ
BBK11: ಕೋಪದಿಂದ ಅರ್ಧದಲ್ಲೇ ಬಿಗ್ ಬಾಸ್ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.