ಆಯುಷ್ ವೈದ್ಯನಿಗೆ ಸೋಂಕು ದೃಢ
Team Udayavani, Jun 25, 2020, 9:37 AM IST
ಚಿತ್ರದುರ್ಗ: ಹಿರಿಯೂರಿನ 27 ವರ್ಷದ ಆಯುಷ್ ವೈದ್ಯರಿಗೆ ಕೋವಿಡ್ ಸೋಂಕು ತಗುಲಿರುವುದು ಬುಧವಾರದ ವರದಿಯಲ್ಲಿ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 46ಕ್ಕೆ ಏರಿಕೆಯಾಗಿದೆ.
ಕೆಮ್ಮು, ನೆಗಡಿ ಕಾಣಿಸಿಕೊಂಡಿದ್ದರಿಂದ, ಜೂ. 20 ರಂದು ಇವರ ಗಂಟಲುದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಜೂ. 22 ರಂದು ಇವರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಆನಂತರ ಎರಡು ಬಾರಿ ಪರೀಕ್ಷೆ ನಡೆಸಿದಾಗಲೂ ಪಾಸಿಟಿವ್ ಆಗಿದೆ. ಸದ್ಯ ವೈದ್ಯರನ್ನು ಚಿತ್ರದುರ್ಗದ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಚೌಳಹಿರಿಯೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯೂರು ನಗರದ ಆಯುಷ್ ವೈದ್ಯ, ಹಿರಿಯೂರಿನಿಂದ ಚೌಳಹಿರಿಯೂರಿಗೆ ನಿತ್ಯ ಕಾರಿನಲ್ಲಿ ಹೋಗಿ ಬರುತ್ತಿದ್ದರು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಎರಡು ಕಡೆ ಕ್ವಾರಂಟೈನ್ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಬಗ್ಗೆ ಮಾಹಿತಿ ದೊರೆತಿದೆ. ಹೀಗಾಗಿ ವೈದ್ಯರಿಗೆ ಕೋವಿಡ್ ಸೋಂಕು ತಗುಲಿರುವ ಸಾಧ್ಯತೆ ಇದೆ.
ಕಡೂರು ತಾಲೂಕಿನಲ್ಲಿಯೇ 70 ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದೆ. ಹಿರಿಯೂರಿನಲ್ಲಿ 8 ಜನ ಪ್ರಾಥಮಿಕ ಸಂಪರ್ಕಿತರು ಹಾಗೂ 7 ಜನ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಬುಧವಾರ 79 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದು, 75 ಜನರ ವರದಿ ನೆಗೆಟಿವ್ ಬಂದಿದೆ. 4 ಮಾದರಿಗಳ ವರದಿ ಬಾಕಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಾಧ್ಯಕ್ಷರಾಗಿ ಬಿವೈವಿ ಅವಧಿ ವಿಸ್ತರಣೆ ಹೇಳಲು ಆಗಲ್ಲ: ಯದುವೀರ ಒಡೆಯರ್
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Chitradurga: ನಾವು ದರ್ಶನ್‌ರಿಂದ 10 ಪೈಸೆಯೂ ಪಡೆದಿಲ್ಲ..: ರೇಣುಕಾಸ್ವಾಮಿ ತಂದೆ ಸ್ಪಷ್ಟನೆ
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್