ಬಹುರಾಷ್ಟ್ರೀಯ ಕಂಪನಿಗಳಿಂದ ಅನ್ಯಾಯ

ಕೋಳಿ ಸಾಕಾಣಿಕೆ ಉದ್ಯಮ ಸಂಕಷ್ಟದಲ್ಲಿದ್ದರೂ ಸರ್ಕಾರದಿಂದ ಕ್ರಮವಿಲ್ಲ: ದೇವರಾಜ್‌

Team Udayavani, Oct 16, 2020, 6:49 PM IST

cd-tdy-1

ಚಿತ್ರದುರ್ಗ: ಕೋಳಿ ಮಾಂಸದ ಉದ್ಯಮ ಬಹುರಾಷ್ಟ್ರೀಯ ಕಂಪನಿಗಳು ಹಾಗೂ ಬಂಡವಾಳಶಾಹಿಗಳ ಕಪಿಮುಷ್ಟಿಯಲ್ಲಿ ಸಿಲುಕಿದೆ. ಇದರಿಂದ ರೈತರಿಗೂ ಲಾಭವಾಗುತ್ತಿಲ್ಲ. ಸರ್ಕಾರಕ್ಕೂತೆರಿಗೆ ಬರುತ್ತಿಲ್ಲ ಎಂದು ಮಧ್ಯ ಕರ್ನಾಟಕ ಕೋಳಿ ಸಾಕಾಣಿಕೆ ಮತ್ತು ಮಾರಾಟಗಾರರ ಸಂಘದ ಅಧ್ಯಕ್ಷ ಮಲ್ಲಾಪುರ ದೇವರಾಜ್‌ ಆರೋಪಿಸಿದರು.

ಪತ್ರಿಕಾಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಬಹುರಾಷ್ಟ್ರೀಯ ಕಂಪನಿಗಳು ಮಾಡುತ್ತಿರುವ ವಂಚನೆಯಿಂದ ರೈತರು ಹಾಗೂ ಗ್ರಾಹಕರ ಶೋಷಣೆಯಾಗುತ್ತಿದೆ. 13 ರೂ. ಗಳಿಗೆ ವಿತರಣೆ ಮಾಡಬೇಕಾದ ಒಂದು ಕೋಳಿಮರಿಯನ್ನು 50 ರೂ.ಗೆ ಮಾರುತ್ತಿದ್ದಾರೆ. ಮತ್ತೆ 15 ದಿನಗಳ ನಂತರ ಆಹಾರ ನೀಡಿ ಸಾಕಿದಾಗ ಪ್ರತಿ ಕೆಜಿಗೆ 80 ರೂ. ತಗುಲುತ್ತದೆ. ಇದರಿಂದ ಮಧ್ಯವರ್ತಿಗಳು ಹಾಗೂ ಕಂಪನಿಗಳಿಗೆ ಲಾಭವಾಗುವುದೇ ವಿನಃರೈತರಿಗಾಗಲೀ, ಕೋಳಿ ಸಾಕಾಣಿಕೆದಾರರಿಗಾಗಲೀ ಪ್ರಯೋಜನವಿಲ್ಲ ಎಂದರು.

ರೈತರ ಹೆಸರು ಹೇಳಿಕೊಂಡು ಕೋಳಿ ಉದ್ಯಮದಲ್ಲಿತೊಡಗಿರುವ ಬಹುರಾಷ್ಟ್ರೀಯ ಕಂಪನಿಗಳು ಅತ್ತ ಸರ್ಕಾರಕ್ಕೂ ತೆರಿಗೆ ಕಟ್ಟದೆ, ಇತ್ತ ಗ್ರಾಹಕರಿಗೂಅನುಕೂಲ ಮಾಡದೆ ವಂಚಿಸುತ್ತಿದೆ. ಇದರಿಂದ ಕೋಳಿ ಸಾಕಾಣಿಕೆ ಉದ್ಯಮ ಸಂಕಷ್ಟದಲ್ಲಿದೆ. ಈ ಅಕ್ರಮ ದಂಧೆಗೆ ಕಡಿವಾಣ ಹಾಕಲು ಸರ್ಕಾರ ಹಾಗೂ ಪಶುಸಂಗೋಪನಾ ಇಲಾಖೆಗೆ ದೂರು ನೀಡಿದ್ದರೂ ಯಾವ ಪ್ರಯೋಜನವೂ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮತ್ತೋರ್ವ ಕೋಳಿ ಸಾಕಾಣೆದಾರ ಕಾಚಾಪುರ ರಂಗಪ್ಪ ಮಾತನಾಡಿ, ಮೆಕ್ಕೆಜೋಳಕ್ಕೂ ಕೋಳಿ ಉದ್ಯಮಕ್ಕೂ ನಂಟಿದೆ. ಮೆಕ್ಕೆಜೋಳದಿಂದಲೇ ಕೋಳಿಗೆ ಆಹಾರ ತಯಾರಿಸಲಾಗುತ್ತಿದೆ. ಹಾಗಾಗಿ ಮೆಕ್ಕೆಜೋಳಬೆಳೆದ ರೈತನಿಗೂ ಬೆಂಬಲ ಬೆಲೆ ಸಿಗುತ್ತಿಲ್ಲ. ಅತ್ತ ಕೋಳಿ ಮಾರಾಟದಲ್ಲಿಯೂ ಲಾಭವಿಲ್ಲ. ಕೋಳಿ ಉದ್ಯಮ ನಿಂತು. ಮೆಕ್ಕೆಜೋಳ ಮಾಫಿಯಾ ತಲೆ ಎತ್ತಿದೆ. ಬಹುರಾಷ್ಟ್ರೀಯ ಕಂಪನಿಗಳು ಮಾರುಕಟ್ಟೆಯಲ್ಲಿ ಹಿಡಿತ ಸಾಧಿಸಲು ಹೊರಟಿವೆ. ಸೆಂಟ್ರಲ್‌ ಪೌಲ್ಟ್ರಿ ಡೆವಲಪ್‌ಮೆಂಟ್‌ ಆರ್ಗನೈಸೇಷನ್‌ ಅನ್ವಯ ಕೋಳಿಗಳಿಗೆ ದರ ನಿಗ ಯಾಗಬೇಕು. ವಿಜ್ಞಾನಿಗಳು ಕಂಪನಿಗಳಿಗೆ ಮಾರಾಟವಾಗಿ ರೈತರು ಹಾಗೂ ಕೋಳಿ ಸಾಕಾಣಿಕೆದಾರರನ್ನು ಬಲಿಕೊಡುತ್ತಿದ್ದಾರೆ ಎಂದು ದೂರಿದರು.

ಸುದ್ದಿಗೋಷ್ಠಿಯಲ್ಲಿ ಕೋಳಿ ಸಾಕಾಣೆದಾರರಾದ ಲೋಹಿತ್‌, ಶ್ರೀನಿವಾಸ್‌, ರಘು ಇದ್ದರು

ಟಾಪ್ ನ್ಯೂಸ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.