ಸಿಎಂ ಸಿದ್ದರಾಮಯ್ಯರಿಂದ ವೀರಶೈವ ಲಿಂಗಾಯತರಿಗೆ ದ್ರೋಹ: ಆರೋಪ
Team Udayavani, May 10, 2018, 6:35 AM IST
ಮೊಳಕಾಲ್ಮೂರು: ಚುನಾವಣೆಯಲ್ಲಿ ಮತ ಗಳಿಕೆ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯ ವೀರಶೈವ ಲಿಂಗಾಯತ ಸಮುದಾಯವನ್ನು ಒಡೆದು ದ್ರೋಹ ಎಸಗಿದ್ದಾರೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಆರೋಪಿಸಿದರು.
ಪಟ್ಟಣ ಸಮೀಪದ ತೋಟದ ಮನೆಯೊಂದರಲ್ಲಿ ಲಿಂಗಾಯತ ಸಮುದಾಯ ಮುಖಂಡರ ಸಭೆ ನಡೆಸಿ ಅವರು ಮಾತನಾಡಿದರು.
ವೀರಶೈವ ಲಿಂಗಾಯತ ಸಮುದಾಯದಲ್ಲಿ ದ್ವೇಷ ಹುಟ್ಟಿಸುವಂತಹ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ.
ಈ ಚುನಾವಣೆಯಲ್ಲಿ ಅದಕ್ಕೆ ತಕ್ಕ ಫಲ ಅನುಭವಿಸಲಿದ್ದಾರೆ ಎಂದರು. ಮುಂದಿನ ದಿನಗಳಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಆಗ ವೀರಶೈವ ಲಿಂಗಾಯತರನ್ನು ಒಗ್ಗೂಡಿಸಲಾಗುವುದು. ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ವೀರಶೈವ ಲಿಂಗಾಯತ ಸೇರಿದಂತೆ ಎಲ್ಲಾ ಸಮುದಾಯಗಳ ಅಭಿವೃದ್ಧಿ ಸಾಧ್ಯ ಎಂದು ಪ್ರತಿಪಾದಿಸಿದರು.
ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನುಗಳಿಸಿ ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ನಿಶ್ಚಿತ. ಅದೇ ರೀತಿ
ಮೊಳಕಾಲ್ಮೂರು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಕೂಡ ಅಭೂತಪೂರ್ವ ಗೆಲುವು ಸಾಧಿಸಿ ಉಪಮುಖ್ಯಮಂತ್ರಿಯಾಗಲಿದ್ದಾರೆ. ಇವರಿಬ್ಬರಿಂದ ರಾಜ್ಯದಲ್ಲಿ ಹಿಂದೆಂದೂ ಕಾಣದ ಅಭಿವೃದ್ಧಿ ಕಾರ್ಯಗಳು
ಆಗಲಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.