ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ
Team Udayavani, Jun 26, 2021, 12:58 PM IST
ಚಿತ್ರದುರ್ಗ: ಜನರಿಗೆ ನೀಡಿದ್ದ ಆಶ್ವಾಸನೆ ಈಡೇರಿಸದೆ, ಅಗತ್ಯ ವಸ್ತಗಳ ಬೆಲೆ ಏರಿಕೆ ಮಾಡಿ ಜನವಿರೋಧಿ ನೀತಿ ಅನುಸರಿಸುತ್ತಿರುವ ಕೇಂದ್ರ ಮತ್ತು ರಾಜ್ಯಸರ್ಕಾರಗಳ ವಿರುದ್ಧ ಜೆಡಿಎಸ್ ಜಿಲ್ಲಾಘಟಕದಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಲಾಯಿತು.
ಜೆಡಿಎಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿದ ನೂರಾರು ಜೆಡಿಎಸ್ ಕಾರ್ಯಕರ್ತರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾಧ್ಯಕ್ಷ ಡಿ.ಯಶೋಧರ ಮಾತನಾಡಿ, 2014 ರ ಲೋಕಸಭಾ ಚುನಾವಣೆಪೂರ್ವದಲ್ಲಿ ಪೊಳ್ಳು ಆಶ್ವಾಸನೆ ನೀಡಿ ಆಯ್ಕೆಯಾಗಿದ್ದ ಪ್ರಧಾನಿ ನರೇಂದ್ರ ಮೋದಿ, ಈಗ ಎರಡನೇ ಅವಧಿಯಲ್ಲೂ ತಾವು ನೀಡಿದ್ದ ಭರವಸೆ ಈಡೇರಿಸದೆ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ನೇತೃತ್ವದ ಸರ್ಕಾರ ಕೋವಿಡ್ ಲಾಕ್‌ಡೌನ್ ಸಂಕಷ್ಟದ ಪರಿಸ್ಥಿತಿಯಲ್ಲಿ ಬಡವರಿಗೆ ಗಾಯದ ಮೇಲೆ ಬರೆ ಎಳೆದಿದೆ. ರಾಮ ಮಂದಿರ, ಧರ್ಮವನ್ನು ಮುಂದಿಟ್ಟುಕೊಂಡು ಭಾವನಾತ್ಮಕ ರಾಜಕಾರಣ ಮಾಡುತ್ತಿರುವ ಬಿಜೆಪಿ ಜಾತಿ-ಧರ್ಮಗಳ ನಡುವೆ ಗಲಭೆ ಸೃಷ್ಟಿಸುತ್ತಿದ್ದಾರೆ ಎಂದು ದೂರಿದರು.
ವಿದೇಶಗಳಲ್ಲಿರುವ ಕಪ್ಪು ಹಣ ತಂದು ಪ್ರತಿಯೊಬ್ಬರ ಬ್ಯಾಂಕ್ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಹೇಳಿ ದೇಶದ ಜನರನ್ನು ನಂಬಿಸಿ ವಂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಉದ್ಯೋಗ ಕೇಳಿದ ಯುವಕರಿಗೆ ಪಕೋಡಾ ಮಾರಿಎಂದು ಹೇಳಿದ್ದು ದುರಂತ ಎಂದು ಬೇಸರ ವ್ಯಕ್ತಪಡಿಸಿದರು.
ಕೋವಿಡ್ ಲಾಕ್‌ಡೌನ್‌ನಿಂದ ಹೈರಾಣಾಗಿರುವ ಬಡವರು, ಕಾರ್ಮಿಕರು, ಶ್ರಮಿಕರು, ಮಧ್ಯಮ ವರ್ಗದವರ ಜತೆ ಸರ್ಕಾರಗಳು ಚೆಲ್ಲಾಟವಾಡುತ್ತಿವೆ. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ ಮಾಡುವಲ್ಲಿ ಸಂಪೂರ್ಣ ವಿಳಂಬವಾಗಿವೆ. ಕೂಡಲೇ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಬೇಕು. ದಿನಸಿ ಪದಾರ್ಥಗಳ ಬೆಲೆ ಜನಸಾಮಾನ್ಯರ ಕೈಗೆಟುವಂತೆ ಮಾಡಬೇಕು. ಕೋವಿಡ್‌ನಿಂದ ಮೃತಪಟ್ಟವರ
ಕುಟುಂಬಗಳಿಗೆ ಐದು ಲಕ್ಷ ರೂ. ಪರಿಹಾರ ನೀಡಬೇಕು. ಜಿಲ್ಲೆಯ ಜನರ ಬಹುದಿನಗಳ ಬೇಡಿಕೆ ಭದ್ರಾ ಮೇಲ್ದಂಡೆ ಯೋಜನೆಯನ್ನುರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ ಹಣ ಬಿಡುಗಡೆಗೊಳಿಸಿ ನಿಗ ದಿತ ಅವಧಿಯೊಳಗೆ ಕಾಮಗಾರಿ ಮುಗಿಸಿ ಜಿಲ್ಲೆಗೆ ನೀರು ಹರಿಸಿ ರೈತನ ಬದುಕು ಹಸನು ಮಾಡಬೇಕು. ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್, ಜಿಪಂ ಮಾಜಿ ಅಧ್ಯಕ್ಷ ಎಂ.ಜಯಣ್ಣ, ಮುಖಂಡರಾದ ಗೋಪಾಲಸ್ವಾಮಿ ನಾಯಕ, ಪ್ರತಾಪ್ ಜೋಗಿ, ಸಣ್ಣತಿಮ್ಮಪ್ಪ, ಜೆ.ಬಿ.ಶೇಖರ್, ಎಚ್.ವೀರಣ್ಣ, ಪಿ.ತಿಪ್ಪೇಸ್ವಾಮಿ, ಪಟೇಲ್ ತಿಪ್ಪೇಸ್ವಾಮಿ, ಪರಮೇಶ್ವರಪ್ಪ, ಗಣೇಶ್‌ಕುಮಾರ್,ಹನುಮಂತರಾಯಪ್ಪ, ಶಿವಪ್ರಸಾದ್‌ಗೌಡ,ಶಂಕರ್‌ಮೂರ್ತಿ, ಕಿರಣ್, ಮಲ್ಲಿಕಾರ್ಜುನ,ಲಲಿತ ಕೃಷ್ಣಮೂರ್ತಿ, ಗೀತ, ರಾಧಮ್ಮ, ಯೋಗೇಶ್, ನಿಶಾನಿ ಶಂಕರ್, ಪ್ರಸನ್ನ,ನಸ್ರುಲ್ಲಾ, ಸಲಾವುದ್ದೀನ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.