ಕಾಟನಾಯಕನಹಳ್ಳಿ ಕಂಟೇನ್ಮೆಂಟ್‌ ಝೋನ್‌


Team Udayavani, Jul 1, 2020, 9:36 AM IST

ಕಾಟನಾಯಕನಹಳ್ಳಿ ಕಂಟೇನ್ಮೆಂಟ್‌ ಝೋನ್‌

ಮೊಳಕಾಲ್ಮೂರು: ತಾಲೂಕಿನ ಕಾಟನಾಯಕನಹಳ್ಳಿ ಗ್ರಾಮದಲ್ಲಿ 2 ಕೋವಿಡ್ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿರುವುದರಿಂದ ಆ ಗ್ರಾಮವನ್ನು 2 ಕಂಟೇನ್‌ಮೆಂಟ್‌ ಝೋನ್‌ಗಳಾಗಿ ಮಾಡಲಾಗಿದೆ ಎಂದು ಕೋವಿಡ್‌-19ನ ತಾಲೂಕು ನೋಡಲ್‌ ಅಧಿಕಾರಿ ಡಿ. ಚಿದಾನಂದಪ್ಪ ಹೇಳಿದರು.

ಪಟ್ಟಣದ ತಾಲೂಕು ಪಂಚಾಯತ್‌ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಕಾಟನಾಯಕನಹಳ್ಳಿ ಗ್ರಾಮದಲ್ಲಿ ಪತ್ತೆಯಾದ ಇಬ್ಬರು ಕೋವಿಡ್ ಪಾಸಿಟಿವ್‌ ಪ್ರಕರಣದ ಇಬ್ಬರು ವ್ಯಕ್ತಿಗಳು ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌ನಲ್ಲಿ ಹಣ್ಣಿನ ವ್ಯಾಪಾರಿಗಳಾಗಿದ್ದರು. ಇವರು ಜೂ. 24 ರಂದು ಈ ಗ್ರಾಮಕ್ಕೆ ಬಂದಿದ್ದರು. ಇವರ ಕೋವಿಡ್‌ ಪ್ರಕರಣದ ಐಡಿ ನಂ. 4883 ಮತ್ತು 4885 ಆಗಿದೆ. 200 ಮೀಟರ್‌ ಅಂತರದಲ್ಲಿರುವ ಮನೆಗಳಲ್ಲಿ ವಾಸಿಸುವ ಜನರಿಗೆ ಸಮೀಕ್ಷಾ ಕಾರ್ಯ ಮಾಡಲು 6 ತಂಡಗಳಾಗಿ ವಿಂಗಡಿಸಲಾಗಿದೆ.

ಮುಂದಿನ 28 ದಿನಗಳಲ್ಲಿ ಸಮೀಕ್ಷೆ ಮಾಡಲಾಗುವುದು. ಈ ಸಮೀಕ್ಷೆ ಮಾಡುವಾಗ ಜ್ವರ, ಕೆಮ್ಮು, ಶೀತ ಮತ್ತು ತೀವ್ರ ತರ ಉಸಿರಾಟದ ತೊಂದರೆಯುಳ್ಳ 60 ವರ್ಷ ಮೇಲ್ಪಟ್ಟವರ ಮಾಹಿತಿಯನ್ನು ಪಡೆದು ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗುವುದು. ಕೋವಿಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಸಂಪರ್ಕ ಹೊಂದಿರುವವರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗುವುದೆಂದು ತಿಳಿಸಿದರು.

ತಹಶೀಲ್ದಾರ್‌ ಎಂ. ಬಸವರಾಜ್‌ ಮಾತನಾಡಿ, ಗ್ರಾಮಕ್ಕೆ ರಾಸಾಯನಿಕ ಔಷಧ ಸಿಂಪರಣೆ ಮಾಡಲಾಗುವುದು. ಈ ಗ್ರಾಮದ ಸುತ್ತ ಬ್ಯಾರಿಕೇಡ್‌ ಅಳವಡಿಸಿ ಜನರಿಗೆ ದಿನನಿತ್ಯ ಬಳಸುವ ಹಾಲು ತರಕಾರಿ ಇತರೆ ಅಗತ್ಯ ವಸ್ತುಗಳನ್ನು ಪ್ರತಿದಿನ ವಿತರಣೆ ಮಾಡಲು ಗ್ರಾಮ ಪಂಚಾಯಿತಿ ಹಾಗೂ ತಾಲೂಕು  ಆಡಳಿತದಿಂದ ಸೌಲಭ್ಯವನ್ನು ಒದಗಿಸಲಾಗುವುದು. ಗ್ರಾಮದ ಜನರು ಕಡ್ಡಾಯವಾಗಿ ಮನೆಯಲ್ಲಿಯೇ ಇರಬೇಕು. ಗ್ರಾಪಂನಿಂದ 3,000 ಮಾಸ್ಕ್ಗಳನ್ನು ವಿತರಿಸಲಾಗುವುದು. ವಲಸೆ ಬಂದವರನ್ನು ಹೋಂ ಕ್ವಾರಂಟೈನ್‌ ಮಾಡಲಾಗುವುದೆಂದು ಹೇಳಿದರು.

ತಾಲೂಕು ಆರೋಗ್ಯಾಧಿಕಾರಿ ಡಾ| ಪದ್ಮಾವತಿ ಮಾತನಾಡಿ, ತಾಲೂಕಿನಲ್ಲಿ ಕೋವಿಡ್‌-19 ಪ್ರಕರಣಗಳು ಕಂಡು ಬಂದಿರುವುದರಿಂದ ಗ್ರಾಮಗಳಲ್ಲಿ ಆಶಾ ಕಾರ್ಯಕರ್ತೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಪ್ರತಿನಿತ್ಯ ಸಮೀಕ್ಷೆ ಮಾಡಿ ಐಎಲ್‌ಐ, ಸ್ಯಾರಿಗಳ ಬಗ್ಗೆ ವರದಿ ನೀಡಬೇಕಾಗಿದೆ. ಪಟ್ಟಣದಲ್ಲಿ 10 ತಂಡಗಳಾಗಿ 2,850 ಮನೆಗಳಿಗೆ 5 ದಿನಗಳಲ್ಲಿ ಭೇಟಿ ನೀಡಿ ಸಮೀಕ್ಷೆ ಕಾರ್ಯವನ್ನು ಮುಗಿಸಬೇಕೆಂದು ತಿಳಿಸಿದರು.

ಸಭೆಯಲ್ಲಿ ಪಿಎಸ್‌ಐ ಎಂ.ಕೆ. ಬಸವರಾಜ್‌, ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಎಚ್‌. ಕಾಂತರಾಜ್‌, ತಾಪಂ ಸಹಾಯಕ ನಿರ್ದೇಶಕ ಸದಾಶಿವ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಟಿ. ಗುರುಮೂರ್ತಿ, ಆರ್‌.ಆರ್‌. ತಂಡದ ಶ್ರೀನಿವಾಸ್‌, ವೈ. ತಿಪ್ಪೇಸ್ವಾಮಿ, ಗ್ರಾಮ ಪಂಚಾಯತ್‌ ಅಧ್ಯಕ್ಷ ಶಿವಣ್ಣ, ಶಿರಸ್ತೇದಾರ ಏಳುಕೋಟಿ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

10-thirthahalli

Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?

3

Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.