ಕಾವಾಡಿಗರಹಟ್ಟಿ ಕಲುಷಿತ ನೀರಿನ ಪ್ರಕರಣ; ಸಾವಿನ ಸಂಖ್ಯೆ ಐದಕ್ಕೆ ಏರಿಕೆ
Team Udayavani, Aug 4, 2023, 12:35 PM IST
ಚಿತ್ರದುರ್ಗ: ಇಲ್ಲಿನ ಕಾವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರುದ್ರಪ್ಪ(50) ಹಾಗೂ ಪಾರ್ವತಮ್ಮ (75) ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಮೃತಪಟ್ಟಿದ್ದಾರೆ.
ಆ.1 ರಿಂದ ಈವರೆಗೆ ಐವರು ಮೃತಪಟ್ಟಿದ್ದು, ಶುಕ್ರವಾರವೇ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಪ್ರಕರಣ ಬೆಳಕಿಗೆ ಬಂದ ನಾಲ್ಕನೇ ದಿನವೂ ಮೂವರಲ್ಲಿ ವಾಂತಿ ಭೇದಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪಾರ್ಶ್ವವಾಯು ಪೀಡಿತರಾಗಿದ್ದ ಪಾರ್ವತಮ್ಮ ನೀರು ಕುಡಿದು ಅಸ್ವಸ್ಥರಾಗಿದ್ದರು. ಇವರಿಗೆ ಗುರುವಾರ ವಾಂತಿ ಭೇದಿ ಕಾಣಿಸಿಕೊಂಡು ತಾತ್ಕಾಲಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಕುಟುಂಬದ ಎಲ್ಲ ಹತ್ತು ಸದಸ್ಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಇದನ್ನೂ ಓದಿ:ಪ್ರಚೋದನಾಕಾರಿ ಭಾಷಣ: ಶರಣ್ ಪಂಪ್ ವೆಲ್ ಸೇರಿ ಮೂವರ ವಿರುದ್ಧ ಎಫ್ಐಆರ್
ಕಾವಾಡಿಗರಹಟ್ಟಿಯ ಮಂಜುಳಾ, ರಘು ಆ.1ರಂದು ಹಾಗೂ ವಡ್ಡರ ಸಿದ್ಧವ್ವನಹಳ್ಳಿಯ ಪ್ರವೀಣ್ ಆ.2ರಂದು ಮೃತಪಟ್ಟಿದ್ದರು. ಶುಕ್ರವಾರ ನಸುಕಿನಲ್ಲಿ ರುದ್ರಪ್ಪ ಕೊನೆಯುಸಿರೆಳೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUDA CASE: ರಾಜಕೀಯ ಸುದ್ದಿಗಾಗಿ ಇ.ಡಿ. ಯತ್ನ : ಹರಿಪ್ರಸಾದ್ ಆರೋಪ
ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.