ಬಿಜೆಪಿ ಸರ್ಕಾರದ ತೀರ್ಮಾನದಲ್ಲಿ ಕಾಂಗ್ರೆಸ್ ನೆರಳು : ಕೋಡಿಹಳ್ಳಿ ಟೀಕೆ
Team Udayavani, Mar 21, 2021, 7:45 PM IST
ಚಿತ್ರದುರ್ಗ : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಳ್ಳುತ್ತಿರುವ ಹಲವು ತೀರ್ಮಾನಗಳಲ್ಲಿ ಕಾಂಗ್ರೆಸ್ ನೆರಳಿದೆ. ಜಾಗತೀಕರಣ, ಜಿಎಸ್‌ಟಿ ಮತ್ತಿತರೆ ಕಾಯ್ದೆಗಳು ಕಾಂಗ್ರೆಸ್ ಅವ ಧಿಯಲ್ಲೇ ರೂಪುಗೊಂಡಿವೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಟೀಕಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಈಗ ರೈತ ಚಳವಳಿ ಬೆಂಬಲಿಸುವ ನಾಟಕವಾಡಿದರೆ ಸಾಲದು. ಕಾಯ್ದೆಗಳ ಬಗ್ಗೆ ಸ್ಪಷ್ಟ ನಿಲುವು ಪ್ರಕಟಿಸಬೇಕು ಎಂದು ಒತ್ತಾಯಿಸಿದರು. ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ರೂಪಿಸಿ ಉದ್ಯಮಿಗಳಿಗೆ ಅನುಕೂಲ ಮಾಡಿಕೊಟ್ಟಿದೆ. ಇದರ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟ ದೇಶಕ್ಕೆ ವಿಸ್ತರಣೆಯಾಗಲಿದೆ.
ಕರ್ನಾಟಕದಲ್ಲಿಯೂ ರೈತರ ಧ್ವನಿ ಮೊಳಗುತ್ತಿದೆ ಎಂದರು. ದೇಶವನ್ನು ಖಾಸಗಿ ಕಂಪನಿಗಳ ಆಡಳಿತಕ್ಕೆ ಒಪ್ಪಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡಿರುವ ತೀರ್ಮಾನ ಸ್ವಾತಂತ್ರÂ ಹರಣದ ಪ್ರಯತ್ನ. ಇದರ ವಿರುದ್ಧ ರೈತರು ನಡೆಸುತ್ತಿರುವ ಚಳವಳಿ ಎರಡನೇ ಸ್ವಾತಂತ್ರÂ ಹೋರಾಟ ಎಂದು ವಿಶ್ಲೇಷಿಸಿದರು.
ಸರ್ಕಾರಿ ವಲಯದ ಉದ್ದಿಮೆಗಳನ್ನು ಖಾಸಗಿ ಕಂಪನಿಗಳ ಮಾಲೀಕತ್ವಕ್ಕೆ ಒಪ್ಪಿಸಲು ಮುಂದಾಗಿರುವುದು ಅಪಾಯಕಾರಿ ಬೆಳವಣಿಗೆ. ಬಹುರಾಷ್ಟ್ರೀಯ ಕಂಪನಿಗಳಿಗೂ ಹಾಗೂ ನೂರಾರು ವರ್ಷ ದೇಶವನ್ನು ಆಳಿದ ಈಸ್ಟ್ ಇಂಡಿಯಾ ಕಂಪನಿಗೂ ವ್ಯತ್ಯಾಸವಿಲ್ಲ ಎಂದು ಹೇಳಿದರು. ದೇಶ ಅಪಾಯದ ಹಾದಿಯಲ್ಲಿ ಸಾಗುತ್ತಿದೆ. ಮಂಗಳೂರಿನ ವಿಮಾನ ನಿಲ್ದಾಣವನ್ನು ಅದಾನಿಗೆ ಅಡ ಇಡಲಾಗಿದೆ. ಅಂಬಾನಿಯ ರೈಲುಗಳು ಸಂಚಾರ ಆರಂಭಿಸಿವೆ. ಎಲ್‌ಐಸಿ, ಬ್ಯಾಂಕ್, ಬಸ್ ಸೇರಿ ಎಲ್ಲ ಸರ್ಕಾರಿ ಉದ್ದಿಮೆಗಳನ್ನು ಖಾಸಗೀಕರಣ ಮಾಡಲು ಸರ್ಕಾರ ಮುಂದಾಗಿದೆ. ಇಂತಹ ಸಂದರ್ಭದಲ್ಲಿ ನಡೆಯುತ್ತಿರುವ ರೈತ ಚಳವಳಿ ದೇಶಕ್ಕೆ ಹೊಸ ದಿಕ್ಕು ತೋರಲಿದೆ ಎಂದು ಕೋಡಿಹಳ್ಳಿ ಪ್ರತಿಪಾದಿಸಿದರು.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತಪ್ಪು ತೀರ್ಮಾನಗಳನ್ನು ಕೈಗೊಳ್ಳುತ್ತಿದೆ. ಇಡೀ ದೇಶವನ್ನು ಖಾಸಗೀಕರಣ ಮಾಡಲು ಮುಂದಾಗಿರುವ ಬಿಜೆಪಿ, ಕೃಷಿ ವಲಯಕ್ಕೆ ಮೊದಲು ಕೈಹಾಕಿದೆ. ಮೂರು ಕೃಷಿ ಕಾಯ್ದೆಗಳನ್ನು ಕಾರ್ಪೋರೆಟ್ ಕಂಪನಿಗಳ ಪರವಾಗಿ ತಿದ್ದುಪಡಿ ಮಾಡಲಾಗಿದೆ. ರೈತರೊಂದಿಗೆ ಚರ್ಚಿಸಲು ಸಮಯ ಇಲ್ಲದಂತೆ ವರ್ತಿಸುತ್ತಿರುವ ಸರ್ಕಾರ, ಚುನಾವಣೆ ಬಗ್ಗೆ ಹೆಚ್ಚು ಗಮನ ನೀಡುತ್ತಿದೆ ಎಂದು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಮುಖಂಡರಾದ ಬೈರೇಗೌಡ, ರವಿಚಂದ್ರ, ಚಿಕ್ಕಬ್ಬಿಗೆರೆ ನಾಗರಾಜ, ಸುರೇಶ್, ಜಯಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.