ಕೈ ಮುಗಿತೀವಿ, ನಮ್ಮೂರಿಗೆ ಬರಬೇಡ್ರಪ್ಪಾ
Team Udayavani, Apr 26, 2020, 5:52 PM IST
ಕೊಂಡ್ಲಹಳ್ಳಿ: ಆಂಧ್ರಪ್ರದೇಶದ ಗಡಿ ಗ್ರಾಮವೊಂದರಿಂದ ಬಂದಿದ್ದ ಆಂಧ್ರಪ್ರದೇಶದ ಟ್ರ್ಯಾಕ್ಟರ್.
ಕೊಂಡ್ಲಹಳ್ಳಿ: ಆಂಧ್ರಪ್ರದೇಶದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು. ಅಲ್ಲಿನ ಜನರು ಗಡಿ ಭಾಗದ ಗ್ರಾಮಗಳಿಗೆ ಆಗಮಿಸುತ್ತಿರುವುದು ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ.
ಕೃಷಿ ಪರಿಕರ, ದಿನಸಿ, ತರಕಾರಿ ಮಾರಾಟ, ಖರೀದಿ ಸೇರಿದಂತೆ ಹಲವು ಚಟುವಟಿಕೆಗಳಿಗಾಗಿ ಆಂಧ್ರದವರು ಕರ್ನಾಟಕಕ್ಕೆ, ಇಲ್ಲಿನವರು ಅಲ್ಲಿಗೆ ಭೇಟಿ ನೀಡುವುದು ವಾಡಿಕೆಯಾಗಿತ್ತು. ಆದರೆ ಕೋವಿಡ್-19 ವೈರಸ್ ಕಾಟ ಎರಡೂ ರಾಜ್ಯಗಳ ಜನರ ನಡುವಿನ ಬಾಂಧವ್ಯಕ್ಕೆ ಅಡ್ಡಿಯನ್ನುಂಟು ಮಾಡಿದೆ. ಆಂಧ್ರಕ್ಕೆ ಹೋದ ಸ್ನೇಹಿತರು ಹಾಗೂ ಸಂಬಂ ಧಿಕರಿಗೆ ಸದ್ಯಕ್ಕೆ ಊರಿಗೆ ಬರಬೇಡಿ ಎಂದು ಗಡಿ ಭಾಗ ಕೊಂಡ್ಲಹಳ್ಳಿ ಸೇರಿದಂತೆ ಹಲವಾರು ಗ್ರಾಮಗಳ ಜನರು ಮನವಿ ಮಾಡುತ್ತಿದ್ದಾರೆ.
ಹಿಂದೆಲ್ಲ ಆಂಧ್ರದ ಜನ ಬಂದರೆ ವಾತ್ಸಲ್ಯದಿಂದ ಕಾಣುತ್ತಿದ್ದ ನಮ್ಮವರು, ಈಗ ಅವರನ್ನು ಕಂಡರೂ ಕಾಣದಂತೆ ಮರೆಯಾಗುತ್ತಿದ್ದಾರೆ. ನಿಮಗೆ ಕೈ ಮುಗೀತಿವಿ, ನಮ್ಮೂರಿಗೆ ಬರಬೇಡಿ ಎಂದು ಬೇಡಿಕೊಳ್ಳುವ ಸನ್ನಿವೇಶ ಸೃಷ್ಟಿಯಾಗಿದೆ. ಆಂಧ್ರದ ಜನರು ದಿನಸಿ ಮತ್ತಿತರ ವಸ್ತುಗಳ ಖರೀದಿಗೆ ಬೆಳಗಾಗುವುದರೊಳಗೆ ಬೈಕ್, ಆಟೋ ಇತರೆ ವಾಹನಗಳಲ್ಲಿ ಬರುತ್ತಿರುವುದು ತಲೆನೋವಿಗೆ ಕಾರಣವಾಗಿದೆ. ಆಂಧ್ರದವರು ಈಸಲು ಹೊಸಹಳ್ಳಿ ಸಂಪರ್ಕ ರಸ್ತೆಯಿಂದ ಕೊಂಡ್ಲಹಳ್ಳಿಗೆ ಬರುತ್ತಾರೆ. ನೆರೆ ರಾಜ್ಯದ ಜನರ ಆಗಮನವನ್ನು ತಡೆಗಟ್ಟಲು ಗಡಿ ಭಾಗದಲ್ಲಿನ ಚೆಕ್ಪೋಸ್ಟ್ನಲ್ಲಿ ತಪಾಸಣೆಯನ್ನು ಬಿಗಿಗೊಳಿಸಿ ಅಲ್ಲಿನವರು ಇಲ್ಲಿಗೆ ಬಾರದಂತೆ ನೋಡಿಕೊಳ್ಳಬೇಕು ಎಂಬುದು ಗ್ರಾಮಸ್ಥರ ಒತ್ತಾಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.