Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ
Team Udayavani, Sep 30, 2024, 10:23 AM IST
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಬಸ್ಸೊಂದು ಪಲ್ಟಿಯಾಗಿ ವಿದ್ಯಾರ್ಥಿಗಳು ಸೇರಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಓಬಳಾಪುರ ತಾಂಡದಲ್ಲಿ ಸೋಮವಾರ (ಸೆ. 30) ಬೆಳಿಗ್ಗೆ ಸಂಭವಿಸಿದೆ.
ಬಸ್ಸಿನಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗಿದ್ದು ಓಬಳಾಪುರ ತಾಂಡ ವಾಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ, ಕೂಡಲೇ ಅಲ್ಲಿದ್ದ ಸ್ಥಳೀಯರು ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳನ್ನು ಹಾಗೂ ಇತರ ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ, ಘಟನೆಯಿಂದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳನ್ನು ಹಿರಿಯೂರು ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.