ಜಾನುವಾರು ಸಂಖ್ಯೆಯಲ್ಲಿ ಭಾರೀ ಕುಸಿತ
Team Udayavani, Aug 30, 2017, 3:48 PM IST
ಚಿತ್ರದುರ್ಗ: ಸತತ ಬರದಿಂದಾಗಿ ಜಿಲ್ಲೆಯಲ್ಲಿ ಜಾನುವಾರುಗಳ ಸಂಖ್ಯೆಯಲ್ಲಿ ತೀವ್ರ ಕುಸಿತ ಕಂಡಿರುವ ಕಳವಕಾರಿ ಅಂಶ ಪಶು ಸಂಗೋಪನಾ ಇಲಾಖೆ ನಡೆಸಿದ ಜಾನುವಾರು ಗಣತಿ ವರದಿಯಲ್ಲಿ ಬಹಿರಂಗವಾಗಿದೆ. ಇದೇ ಸಂದರ್ಭದಲ್ಲಿ ಹಾಲು ನೀಡುವಂತಹ ಸೀಮೆ ಹಸುಗಳ ಸಂಖ್ಯೆಯಲ್ಲಿ ಹೆಚ್ಚಳ ಉಂಟಾಗಿದೆ ಎಂದು ವರದಿಯಲ್ಲಿ ಸೂಚಿಸಿರುವುದು ಸಮಾಧಾನದ ಅಂಶ.
ಈ ವರ್ಷ ನಡೆಸಿದ ಜಾನುವಾರುಗಳ ಗಣತಿಯಂತೆ ಜಿಲ್ಲೆಯಲ್ಲಿ 10.66 ಲಕ್ಷ ಜಾನುವಾರುಗಳಿವೆ. ಆದರೆ 2012ರ ಗಣತಿ ಪ್ರಕಾರ ಜಿಲ್ಲೆಯಲ್ಲಿ 16 ಲಕ್ಷ ಜಾನುವಾರುಗಳಿದ್ದುವು. ಅದರಲ್ಲಿ ಈಗ 5.33 ಲಕ್ಷದಷ್ಟು ಜಾನುವಾರುಗಳ ಸಂಖ್ಯೆ ಕಡಿಮೆಯಾಗಿದ್ದು ರೈತರು ಪಶುಪಾಲನೆಯಿಂದ ವಿಮುಖರಾಗುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿ. 5 ಲಕ್ಷ ಜಾನುವಾರು ಕಡಿಮೆ: 2017ರ ಗಣತಿ ಪ್ರಕಾರ ಜಾನುವಾರುಗಳ ಅಂಕಿ ಅಂಶಗಳ ಪ್ರಕಾರ ದನ, ಎಮ್ಮೆ, ಕುರಿ ಮತ್ತು ಮೇಕೆಗಳ ಸಂಖ್ಯೆ 10,66,252 ಇದೆ. 2012ರಲ್ಲಿ 16,00,058 ಜಾನುವಾರುಗಳಿದ್ದವು. ಅಂದರೆ 5,33,806
ಜಾನುವಾರುಗಳು ಕಡಿಮೆಯಾಗಿವೆ. ಕೇವಲ ಐದು ವರ್ಷಗಳ ಅವಧಿಯಲ್ಲಿ ಈ ಪ್ರಮಾಣದಲ್ಲಿ ಜಾನುವಾರುಗಳ ಸಂಖ್ಯೆ ಕಡಿಮೆಯಾಗಿರುವುದು ಆತಂಕದ ಸಂಗತಿ. ಇದೇ ಪರಿಸ್ಥಿತಿ ಮುಂದುವರೆದರೆ ಮುಂದಿನ 10 ವರ್ಷಗಳಲ್ಲಿ ಜಾನುವಾರುಗಳ ಸಂಖ್ಯೆ ವಿರಳವಾಗುವ ಸಾಧ್ಯತೆಯನ್ನು
ತಳ್ಳಿಹಾಕುವಂತಿಲ್ಲ.
2017ರ ಗಣತಿ ಪ್ರಕಾರ 2,25,916 ಆಕಳುಗಳಿವೆ. 2012ರ ಗಣತಿಯಂತೆ 2,75,889 ಆಕಳುಗಳಿದ್ದವು. ಈಗ ಅವುಗಳ ಸಂಖ್ಯೆ 49,973ಕ್ಕೆ ಕುಸಿದಿದೆ. ಕಳೆದ ಬಾರಿ ಇದ್ದ 1,52,852 ಎಮ್ಮೆಗಳ ಸಂಖ್ಯೆ ಈ ಬಾರಿ 1,09, 928 ಆಗಿ 42,924 ಎಮ್ಮೆಗಳು ಕಡಿಮೆಯಾಗಿವೆ. ಹಿಂದೆ ಇದ್ದ 9,40,038 ಕುರಿಗಳ ಸಂಖ್ಯೆ ಈಗ 8,22,399 ಆಗಿದೆ. ಅಂದರೆ 1,17,639 ಕುರಿಗಳು ಕಡಿಮೆಯಾಗಿವೆ. 2,31,279 ಮೇಕೆಗಳ ಪೈಕಿ 2,07,736 ಉಳಿದಿದ್ದು, 23,543 ಮೇಕೆಗಳು ಕಡಿಮೆಯಾಗಿವೆ.
ರೈತರಿಗೆ ಸಂಕಷ್ಟ: ರೈತರು ಕೃಷಿ ಚಟುವಟಿಕೆ ಜೊತೆಗೆ ಪಶುಪಾಲನೆ ಮತ್ತು ಹೈನುಗಾರಿಕೆಯನ್ನು ಉಪ ಕಸುಬಾಗಿ ಮಾಡಿಕೊಂಡು ಬರುತ್ತಿದ್ದರು. ಕೃಷಿಯಲ್ಲಿನ ನಷ್ಟವನ್ನು ಹೈನುಗಾರಿಕೆ, ಪಶುಪಾಲನೆಯಲ್ಲಿ ತುಂಬಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದರು. ಆದರೆ ಜಾನುವಾರುಗಳ ಸಂಖ್ಯೆಯಲ್ಲಿ ಇಳಿಮುಖವಾಗಿರುವುದರಿಂದ ರೈತರಿಗೂ ಸಂಕಷ್ಟ ಬಂದೊದಗಿದೆ. ಮುಂದಿನ ಪೀಳಿಗೆಗೆ ಎಮ್ಮೆ, ದನ, ಕುರಿ, ಮೇಕೆ ಈ ರೀತಿ ಇದ್ದವು ಎನ್ನುವುದನ್ನು ಚಿತ್ರಗಳ ಮೂಲಕ ತೋರಿಸುವ ಕಾಲ ದೂರವಿಲ್ಲ. ಇಡೀ ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆ ಕುರಿ, ಮೇಕೆ, ಆಕಳು, ಎಮ್ಮೆಗಳ
ಸಾಕಾಣಿಕೆಯಲ್ಲಿ ಪ್ರಮುಖ ಸ್ಥಾನ ಪಡೆದಿತ್ತು. ಎಂಥಹ ಸಂದರ್ಭದಲ್ಲೂ ರೈತರು ಜಾನುವಾರು ಸಾಕಾಣಿಕೆಯಿಂದ ವಿಮುಖರಾಗಿರಲಿಲ್ಲ. ಕಳೆದ ಮಾರ್ಚ್ ತಿಂಗಳಿನಲ್ಲಿ ಜಿಲ್ಲೆಯಲ್ಲಿನ ಜಾನುವಾರುಗಳ ಸಮೀಕ್ಷೆ ನಡೆಸಲಾಗಿದೆ. ಅದರ ಪ್ರಕಾರ ಕುರಿ ಮತ್ತು ಮೇಕೆ ಹೊರತುಪಡಿಸಿ 3,35,844
ಜಾನುವಾರುಗಳು ಜಿಲ್ಲೆಯಲ್ಲಿವೆ. ಇದರಲ್ಲಿ ಚಿತ್ರದುರ್ಗ ತಾಲೂಕಿನಲ್ಲಿ 68,829, ಚಳ್ಳಕೆರೆ 68,951, ಮೊಳಕಾಲ್ಮೂರು 32,801, ಹಿರಿಯೂರು 34,482, ಹೊಸದುರ್ಗ 69,319 ಹಾಗೂ ಹೊಳಲ್ಕೆರೆ ತಾಲೂಕಿನಲ್ಲಿ 61,423 ಜಾನುವಾರುಗಳಿವೆ. ಈ ಅಂಕಿ ಅಂಶದ ಪ್ರಕಾರ ಜಿಲ್ಲೆಯಲ್ಲಿ
ಹೈನುಗಾರಿಕೆ ಮತ್ತು ಪಶುಪಾಲನೆ ಬಗ್ಗೆ ರೈತರು ನಿರಾಸಕ್ತಿ ತಾಳುತ್ತಿದ್ದಾರೆ.
ಜಾನುವಾರುಗಳಿಗೆ ಕಾಡುತ್ತಿರುವ ರೋಗಗಳು, ಬರ, ಮೇವು ಮತ್ತು ನೀರಿನ ಕೊರತೆ, ನಿರ್ವಹಣೆ ದುಬಾರಿ ಆಗುತ್ತಿರುವುದು ಜಾನುವಾರುಗಳ ಸಂಖ್ಯೆ ಕಡಿಮೆಯಾಗಲು ಮುಖ್ಯ ಕಾರಣ ಎನ್ನಲಾಗುತ್ತಿದೆ.
ಐದು ವರ್ಷಗಳ ಅವಧಿಯಲ್ಲಿ ನಾನಾ ಕಾರಣಗಳಿಂದ ಜಾನುವಾರುಗಳ ಸಂಖ್ಯೆ ಕಡಿಮೆಯಾಗಿರುವುದು ಆತಂಕದ ವಿಚಾರ. ಜಾನುವಾರುಗಳ ಹೆಚ್ಚಳ ಮತ್ತು ರಕ್ಷಣೆಗೆ ಹೆಚ್ಚಿನ ಗಮನ ನೀಡುವಂತೆ ಪಶುವೈದ್ಯರಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಹೆಚ್ಚಿನ ಗೋಶಾಲೆ ತೆರೆದು ಜಾನುವಾರುಗಳ ರಕ್ಷಣೆ ಮಾಡುವಂತೆ ಜಿಲ್ಲಾಧಿಕಾರಿಯವರಿಗೆ ಸೂಚಿಸಲಾಗಿದೆ.
ಎಚ್. ಆಂಜನೇಯ, ಜಿಲ್ಲಾ ಉಸ್ತುವಾರಿ ಸಚಿವರು
ಹರಿಯಬ್ಬೆ ಹೆಂಜಾರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.