ಸಿಇಟಿ ಅರ್ಜಿ ಭರ್ತಿ ವಿಧಾನ ಅರಿಯಿರಿ

Team Udayavani, Feb 22, 2019, 7:27 AM IST

dvg-3.jpg

ಚಿತ್ರದುರ್ಗ: ತಮ್ಮ ಮಕ್ಕಳು ಸಿಇಟಿ ಪರೀಕ್ಷೆ ಬರೆಯುವ ಕುರಿತು ಪೋಷಕರಲ್ಲಿ ಆತಂಕ ಮೂಡುವುದು ಸಹಜ. ಆದರೆ, ಸರಿಯಾದ ಕ್ರಮದಲ್ಲಿ ಸಿಇಟಿ ಅರ್ಜಿಗಳನ್ನು ಭರ್ತಿ ಮಾಡುವ ವಿಧಾನ ತಿಳಿದುಕೊಂಡರೆ ಪೋಷಕರು ತಮ್ಮ ಆತಂಕ ನಿವಾರಿಸಿಕೊಳ್ಳಬಹುದು ಎಂದು ದಾವಣಗೆರೆ ಮತ್ತು ಚಿತ್ರದುರ್ಗ ಸಿಇಟಿ ವಿಭಾಗದ ಮುಖ್ಯಸ್ಥ ಜಿ.ಸಿ. ನಿರಂಜನ್‌ ತಿಳಿಸಿದರು.

ಇಲ್ಲಿನ ತರಾಸು ರಂಗಮಂದಿರದಲ್ಲಿ ಇನ್ಪೋಸಿಸ್ಟಮ್‌ ಸಂಸ್ಥೆ ವತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ ಅರ್ಜಿ ಸಲ್ಲಿಕೆ ಗೊಂದಲ ನಿವಾರಣೆಗಾಗಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಂದು ಅಂತರ್ಜಾಲ ಬಳಸುವ ವಿದ್ಯಾರ್ಥಿಗಳು ಹೆಚ್ಚಾಗಿದ್ದಾರೆ. ಹಾಗಾಗಿ ಆನ್‌ ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಸುಲಭವಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಹಾಕುವ ಕಾರಣ ನಿಗದಿತ ಸಮಯದಲ್ಲಿ ಅರ್ಜಿ ಹಾಕುವ ಪ್ರಕ್ರಿಯೆ ಮುಗಿಸಬೇಕು. ಫೆ. 28 ಸಿಇಟಿಗೆ ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ ಎಂದರು. 

 ಹಣ ಪಾವತಿಸಲು ಅರ್ಜಿ ಸಲ್ಲಿಸಿದ ನಂತರ ಹಣ ಪಾವತಿ ರಸೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಂಡು ದಾಖಲೆ ಪರೀಶೀಲನೆ ಸಮಯದಲ್ಲಿ ಅರ್ಜಿ ಸಲ್ಲಿಸಿ ಪ್ರಾಶುಂಪಾಲರಿಂದ ದೃಢೀಕರಿಸಿದ ಅರ್ಜಿ, ಹಣ ಪಾವತಿ ರಸೀದಿ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಒಂದರಿಂದ 10 ನೇ ತರಗತಿಯವರೆಗಿನ ವ್ಯಾಸಂಗ ಪ್ರಮಾಣ ಪತ್ರ,  ಕೃಷಿಯರಿದ್ದರೆ ಕೃಷಿಗೆ ಸಂಬಂಧಿಸಿದ ದಾಖಲೆ ಹಾಗೂ ತಹಶೀಲ್ದಾರರಿಂದ ಪಡೆದ ದಾಖಲೆಗಳನ್ನು ಒದಗಿಸಬೇಕಾಗಿರುತ್ತದೆ. ಅರ್ಜಿ ಹಾಕುವ ಸಂದರ್ಭದಲ್ಲಿ ನಿಮ್ಮ ಮೀಸಲಾತಿ ಹಾಗೂ ಆದಾಯ ಪ್ರಮಾಣಪತ್ರದ ಸಂಖ್ಯೆ ಸರಿಯಾಗಿದೆ ಎಂದು ಪರೀಕ್ಷಿಸಿಕೊಳ್ಳಬೇಕು ಎಂದರು.

ಹೈದರಾಬಾದ್‌-ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ 371 ಜೆ ಮೀಸಲಾತಿ ಪ್ರಮಾಣ ಪತ್ರ ಪಡೆದು ಅದರ ಸಂಖ್ಯೆ ನಮೂದಿಸಿ ಪ್ರಯೋಜನ ಪಡೆದುಕೊಳ್ಳಬೇಕು. ಅಂಗವಿಕಲರು, ಕ್ರೀಡಾಪಟುಗಳಿಗೆ ಎನ್‌ಸಿಸಿ ಬಿ ಪ್ರಮಾಣ ಪತ್ರ ಪಡೆದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕೆ ಅನೂಕುಲವಾಗುತ್ತದೆ ಎಂದು ತಿಳಿಸಿದರು.

ಮಕ್ಕಳು ಅರ್ಜಿ ತುಂಬುವಾಗ ತಪ್ಪಾಗಿದ್ದರೆ ಸರಿಪಡಿಸಬೇಕು. ಅದಕ್ಕೆ ದಿನಾಂಕ 2019 ಮಾರ್ಚ್‌ 19ರಿಂದ 25ರವರೆಗೆ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳೂ ಹೆಚ್ಚಿನ ಮಾಹಿತಿಗೆ ವಾರಕೊಮ್ಮೆಯಾದರೂ ವೆಬ್‌ಸೈಟ್‌ ನೋಡುತ್ತಿರಬೇಕು ಎಂದರು.

ಪಿಯು ಡಿಡಿ ಎಂ.ಸಿ. ಶೋಭಾ ಮಾತನಾಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಭಯ ಹೋಗಲಾಡಿಸಿ ಅವರ ಮನೋಸ್ಥೆರ್ಯ ಹೆಚ್ಚು ಮಾಡಲು ಸಿಕ್ಕ ಅವಕಾಶ ಕೈಚೆಲ್ಲಿದ್ದಾರೆ. ಜಿಲ್ಲೆಯ ವಿಜ್ಞಾನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡದಿರುವುದು ಬೇಸರದ ಸಂಗತಿ ಎಂದರು. 

 ಪದವಿ ಶಿಕ್ಷಣ ವ್ಯವಸ್ಥೆ ದಿನೇ ದಿನೇ ಕುಸಿಯುತ್ತಿದ್ದು, ಕೊನೆಯ 4 ಅಥವಾ 5ನೇ ಸ್ಥಾನಕ್ಕೆ ತಲುಪಿದೆ ಎಂದು ಪೋಷಕರು ಪಿಯು ಡಿಡಿ ವಿರುದ್ಧ ಆಕ್ಷೇಪ ವ್ಯಕ್ತ ಪಡಿಸಿದರು. ಕಾರ್ಯಕ್ರಮ ಪ್ರಾಯೋಜಕ ಇನ್ಪೊಸಿಸ್ಟಮ್‌ನ ಮಧುಕುಮಾರ್‌, ಎಜುಮಿರ್ಚಿ ಮೀಡಿಯಾ ಸಂಸ್ಥೆಯ ಕಿರಣ್‌, ಮಿಥುನ್‌, ಐಶ್ವರ್ಯ ಗ್ರೂಪ್‌ ಮಾಲೀಕ ಕಿರಣ್‌ ಕುಮಾರ್‌ ಶೆಟ್ಟಿ, ದುರ್ಗದ ಸಿರಿ ಗ್ರೂಪ್‌ನ ಉಮೇಶ್‌, ಸುಧೀಂದ್ರ, ವರದರಾಜ್‌, ಕುಮಾರ್‌, ಜೆ.ಪ್ರವೀಣ್‌, ಉಮೇಶ್‌ ಇದ್ದರು.

ಟಾಪ್ ನ್ಯೂಸ್

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

1-geeta

Udupi; ಬೃಹತ್ ಗೀತೋತ್ಸವ: ಭಗವದ್ಗೀತಾ ಯಜ್ಞ ಸಂಪನ್ನ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Court-1

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರ ಕೊ*ಲೆ ಪ್ರಕರಣ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.