ಉಪನ್ಯಾಸಕರಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
Team Udayavani, Feb 11, 2020, 2:28 PM IST
ಚಳ್ಳಕೆರೆ: ಕಳೆದ ಹಲವಾರು ವರ್ಷಗಳಿಂದ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ವೇತನ ತಾರತಮ್ಯ, ಬಡ್ತಿ ಮುಂತಾದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವಾರು ಬಾರಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರೂ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಕಪ್ಪುಪಟ್ಟಿ ಧರಿಸಿ ಪ್ರಥಮ ಪಿಯುಸಿ ಪರೀಕ್ಷಾ ಕಾರ್ಯ ಮಾಡುತ್ತಿದ್ದೇವೆ ಎಂದು ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಎಸ್. ಲಕ್ಷ್ಮಣ್ ತಿಳಿಸಿದರು.
ಸೋಮವಾರ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮುಂಭಾಗದಲ್ಲಿ ಪ್ರಥಮ ಪಿಯುಸಿ ಪ್ರಶ್ನೆಪತ್ರಿಕೆ ಸ್ವೀಕಾರ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಭವಿಷ್ಯದ ಹಿನ್ನೆಲೆಯಲ್ಲಿ ರಾಜ್ಯದ ಉಪನ್ಯಾಸಕರು ಪ್ರತಿಭಟನೆಯನ್ನು ಸೀಮಿತಗೊಳಿಸಿದ್ದಾರೆ. ಸರ್ಕಾರ ಕೂಡಲೇ ಉಪನ್ಯಾಸಕರ ಎಲ್ಲಾ ಬೇಡಿಕೆಯನ್ನು ಈಡೇರಿಸಲು ಮುಂದಾಗಬೇಕಿದೆ. ಪರೀಕ್ಷಾ ಸಂದರ್ಭ ಹಿನ್ನೆಲೆಯಲ್ಲಿ ಪರೀಕ್ಷೆಗೆ ನಿಯುಕ್ತಿಗೊಳಿಸಿದ ಎಲ್ಲಾ ಉಪನ್ಯಾಸಕರು ಕಪ್ಪುಪಟ್ಟಿ ಧರಿಸಿ ಪರೀಕ್ಷಾ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದರು.
ಮಾರ್ಚ್ ಮಾಹೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ. ಸರ್ಕಾರ ನಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸದೇ ಇದ್ದಲ್ಲಿ ಮೌಲ್ಯಮಾಪನ ಕಾರ್ಯವನ್ನು ಸಾರಾಸಗಟಾಗಿ ಬಹಿಷ್ಕರಿಸುವ ಕುರಿತು ಕಠಿಣ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಉಪನ್ಯಾಸಕರ ಸಂಘದ ತಾಲೂಕು ಅಧ್ಯಕ್ಷ ಕೆ.ಎನ್. ವಸಂತಕುಮಾರ್, ಉಪನ್ಯಾಸಕರಾದ ಎಂ. ರವೀಶ್, ಭಾರತಿ, ಕರಿಯಪ್ಪ, ಕೆ.ವಿ. ವೆಂಕಟೇಶಮೂರ್ತಿ, ಅಂಜಿನಪ್ಪ, ನಾಗರಾಜ್, ಇರ್ಫಾನ್, ಮಲ್ಲಿಕಾರ್ಜುನ್ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.