ಭಾರತ ಕ್ಷಯ ಮುಕ್ತ ದೇಶವಾಗಲಿ; ಡಾ| ಸಿ.ಒ. ಸುಧಾ

ಚಿಕಿತ್ಸಾ ಅವಧಿಯಲ್ಲಿ ಕ್ಷಯ ರೋಗಿಗಳ ಪೌಷ್ಟಿಕ ಆಹಾರಕ್ಕಾಗಿ ಪ್ರತಿ ತಿಂಗಳು 500 ರೂ.ಗಳನ್ನು ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗುತ್ತದೆ

Team Udayavani, Mar 25, 2022, 6:38 PM IST

ಭಾರತ ಕ್ಷಯ ಮುಕ್ತ ದೇಶವಾಗಲಿ; ಡಾ| ಸಿ.ಒ. ಸುಧಾ

ಚಿತ್ರದುರ್ಗ: ಭಾರತವನ್ನು 2025ರೊಳಗೆ ಕ್ಷಯಮುಕ್ತ ದೇಶವನ್ನಾಗಿ ಮಾಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ| ಸಿ.ಒ. ಸುಧಾ ಹೇಳಿದರು.

ನಗರದ ತರಾಸು ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆ, ಜಿಲ್ಲಾ  ಕ್ಷಯಯೋಗ ನಿರ್ಮೂಲನಾಧಿಕಾರಿ ಕಚೇರಿ, ಜಿಲ್ಲಾ ಆಸ್ಪತ್ರೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕ್ಷಯ ರೋಗದಿಂದ ಯಾವ ರೋಗಿಯೂ ಮರಣ ಹೊಂದಬಾರದು ಎಂಬ ಉದ್ದೇಶದಿಂದ ಚಿಕಿತ್ಸಾ ಅವಧಿಯಲ್ಲಿ ಕ್ಷಯ ರೋಗಿಗಳ ಪೌಷ್ಟಿಕ ಆಹಾರಕ್ಕಾಗಿ ಪ್ರತಿ ತಿಂಗಳು 500 ರೂ.ಗಳನ್ನು ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗುತ್ತದೆ ಎಂದರು.

ವೈದ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಸಮುದಾಯ, ಸರ್ಕಾರೇತರ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಹಾಗೂ ಪ್ರಧಾನಿ ಆಶಯದಂತೆ ಎಲ್ಲರೂ ಒಟ್ಟಾಗಿ 2025ರೊಳಗೆ ಕ್ಷಯರೋಗವನ್ನು ನಿರ್ಮೂಲನೆ ಮಾಡಬೇಕು ಹಾಗೂ ಎಲ್ಲರೂ ಒಂದಾಗಿ ಕೆಲಸ ಮಾಡಿದರೆ ದೇಶ, ರಾಜ್ಯದಿಂದ ಕ್ಷಯಮುಕ್ತ ಮಾಡಬಹುದಾಗಿದೆ ಎಂದು ಆಶಿಸಿದರು.

ಬಸವೇಶ್ವರ ಆಸ್ಪತ್ರೆಯ ಶ್ವಾಸಕೋಶ ತಜ್ಞ ಡಾ| ಬಸವರಾಜ್‌ ಸಂಗೊಳ್ಳಿ ಮಾತನಾಡಿ, ಕ್ಷಯ ರೋಗದ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ. ಕ್ಷಯ ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಸರಿಯಾದ ಮಾರ್ಗದರ್ಶನ ನೀಡುವ ಮೂಲಕ ಅವರಿಗೆ ರೋಗದ ಬಗ್ಗೆ ಮಾಹಿತಿ ನೀಡಬೇಕೆಂದು ತಿಳಿಸಿದರು.

ಎರಡು ವಾರದ ಬಳಿಕವೂ ಕೆಮ್ಮು ಇದ್ದರೆ ಅಂಥವರನ್ನು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ತಪಾಸಣೆ ಮಾಡಿಸಿ ಅವರಿಗೆ ಚಿಕಿತ್ಸೆ ಕೊಡಿಸಬೇಕು. ಇದು ವಾಸಿಯಾಗದಂತಹ ಕಾಯಿಲೆಯೇನಲ್ಲ. ಸರಿಯಾಗಿ ಚಿಕಿತ್ಸೆ ತೆಗೆದುಕೊಂಡರೆ ಸಂಪೂರ್ಣ ಗುಣಮುಖರಾಗಬಹುದು. ನಿತ್ಯ ಜೀವನದಲ್ಲಿ ಉತ್ತಮ ಆರೋಗ್ಯ ರೂಢಿಸಿಕೊಳ್ಳುವುದರಿಂದ ಯಾವುದೇ ರೋಗಗಳು ನಮ್ಮ ಬಳಿ ಸುಳಿಯುವುದಿಲ್ಲ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ವಾಯುಪುತ್ರ ಆಸ್ಪತ್ರೆಯ ಶ್ವಾಸಕೋಶ ತಜ್ಞ ಜಗದೀಶ್‌, ಹಿರಿಯೂರು ವೈದ್ಯಾಧಿಕಾರಿ ವಿದ್ಯಾಶ್ರೀ, ನಿವಾಸಿ ವೈದ್ಯಾಧಿಕಾರಿ ಆನಂದ್‌ಪ್ರಕಾಶ್‌, ಮಕ್ಕಳ ತಜ್ಞ ಡಾ| ರಾಕೇಶ್‌, ಚಳ್ಳಕೆರೆ ವೈದ್ಯಾಧಿಕಾರಿ ವೀರೇಶ್‌, ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ, ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ಜಾನಕಿ, ಮಾರುತಿ ಪ್ರಸಾದ್‌, ಆಶಾ ಕಾರ್ಯಕರ್ತೆಯರು, ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿಗಳು, ನರ್ಸಿಂಗ್‌ ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

12

Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

1-sn

Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.