ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಪೂರ್ಣಗೊಳ್ಳಲಿ
Team Udayavani, Sep 24, 2019, 2:27 PM IST
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವಂತೆ ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ತಾಲೂಕಿನ ಅನ್ನೆಹಾಳ್, ಹುಲ್ಲೂರು, ಮಾನಂಗಿ ಸಿದ್ದಾಪುರ, ಕಾಟಿಹಳ್ಳಿ, ಚಿಕ್ಕಪುರ, ಸಾದರಹಳ್ಳಿ, ಕಾತ್ರಾಳ್ ಕೆರೆಗಳು ಸುಮಾರು ಹತ್ತು ವರ್ಷಗಳಿಂದಲೂ ನೀರಿಲ್ಲದೆ ಸಂಪೂರ್ಣ ಒಣಗಿ ಹೋಗಿವೆ. ಇದರಿಂದ ಅಂತರ್ಜಲ ಬತ್ತಿ ಸುತ್ತಮುತ್ತಲಿನ ರೈತರ ತೋಟಗಳು ಬಾಡಿವೆ. ಸಾಲ ಮಾಡಿ ಕೊಳವೆಬಾವಿ ಕೊರೆಸಿರುವ ರೈತರು ಅತ್ತ ಬೆಳೆಯೂ ಇಲ್ಲ. ಇತ್ತ ನೀರೂ ಇಲ್ಲದೆ ಸಾಲ ತೀರಿಸಲು ಆಗದೆ ಮರ್ಯಾದೆಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮುಖಂಡರು ಕಳವಳ ವ್ಯಕ್ತಪಡಿಸಿದರು.
ಚಿತ್ರದುರ್ಗದಿಂದ ಭೀಮಸಮುದ್ರ ಮಧ್ಯಭಾಗದ ಕೆರೆಗಳನ್ನು ಯಾವುದಾದರೂ ಸ್ಕೀಂನಲ್ಲಿ ಸೇರಿಸಿ ನೀರು ತುಂಬಿಸಬೇಕು. ಬೆಳೆ ವಿಮೆ, ಬೆಳೆ ಪರಿಹಾರ, ಬರ ಪರಿಹಾರ ಮತ್ತು ಹಿಂದಿನ ಸರ್ಕಾರದ ಸಾಲ ಮನ್ನಾ ಯೋಜನೆ ಎಲ್ಲಾ ರೈತರಿಗೆ ವಿಸ್ತರಣೆಯಾಗಬೇಕು. ರೈತರಿಗೆ ಹೊಸ ಸಾಲ ನೀಡುವಂತೆ ರಾಷ್ಟ್ರೀಕೃತ ಬ್ಯಾಂಕುಗಳಿಗೆ ಆದೇಶ ನೀಡಬೇಕು. ಮೂರ್‍ನಾಲ್ಕು ವರ್ಷಗಳಿಂದ ಮಳೆಯಿಲ್ಲದೆ ಬೆಳೆ ವಿಮೆ ಪಾವತಿಯಾಗಿಲ್ಲ. ಬೆಳೆ ವಿಮೆಗೆ ಏಳು ವರ್ಷದ ಮಾನದಂಡವನ್ನು ತಪ್ಪಿಸಿ ಆಯಾ ಗ್ರಾಪಂ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸಿ ಒಂದು ವರ್ಷದ ಅವಧಿಗೆ ಮಿತಿಗೊಳಿಸುವಂತೆ ಒತ್ತಾಯಿಸಿದರು.
ಅಖಂಡ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಸೋಮಗುದ್ದು ರಂಗಸ್ವಾಮಿ, ಜಿಲ್ಲಾಧ್ಯಕ್ಷ ಎಲ್. ಬಸವರಾಜಪ್ಪ ಅಳಗವಾಡಿ, ಗೌರವಾಧ್ಯಕ್ಷ ಕುರುಬರಹಳ್ಳಿ ಜಿ.ಎಸ್. ಶಿವಣ್ಣ, ಉಪಾಧ್ಯಕ್ಷ ಬಸ್ತಿಹಳ್ಳಿನಾರಪ್ಪ, ಪ್ರಧಾನ ಕಾರ್ಯದರ್ಶಿ ಎಂ. ಸಿದ್ದಪ್ಪ, ಖಜಾಂಚಿ ಎನ್.ಜಿ. ಷಣ್ಮುಖಪ್ಪ, ಜಿ. ಪರಮೇಶ್ವರಪ್ಪ, ಎಚ್. ನಿರಂಜನಮೂರ್ತಿ, ವಿ. ಮಲ್ಲೇಶ್, ಎ.ಎಸ್. ಗುರುಸಿದ್ದಪ್ಪ, ಆರ್.ಎಚ್. ಮಹದೇವಪ್ಪ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.