ಸರ್ಕಾರದ ಸೌಲಭ್ಯ ಕೇಳಿ ಪಡೀರಿ: ಅಲ್ಲಾಭಕ್ಷ್
Team Udayavani, Jan 30, 2019, 9:44 AM IST
ಚಿತ್ರದುರ್ಗ: ಅವಕಾಶ ವಂಚಿತರು ಸರ್ಕಾರದ ಸೌಲಭ್ಯಗಳನ್ನು ಕೇಳಿ ಪಡೆಯಬೇಕು ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯ್ಯದ್ ಅಲ್ಲಾಭಕ್ಷ್ ಹೇಳಿದರು.
ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಜನಸಂಕರ್ಪ ಸಭೆಯಲ್ಲಿ ಸಂಧ್ಯಾಸುರಕ್ಷಾ ವೇತನಕ್ಕಾಗಿ ಮಹಿಳೆಯರಿಂದ ಅರ್ಜಿ ಸ್ವೀಕರಿಸಿ ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಡವರಿಗಾಗಿ ಜಾರಿಗೆ ತಂದಿರುವ ಹಲವಾರು ಯೋಜನೆಗಳನ್ನು ದಲಿತರು, ಅಲ್ಪಸಂಖ್ಯಾತರು, ಶೋಷಿತರು, ಹಿಂದುಳಿದವರಿಗೆ ತಲುಪಿಸುವ ಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತರು ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ. ಸಂಧ್ಯಾ ಸುರಕ್ಷಾ, ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವಿಕಲ ವೇತನ ಸೇರಿದಂತೆ ಸರ್ಕಾರದ ಹತ್ತು ಹಲವಾರು ಯೋಜನೆಗಳಿಗಾಗಿ ಅರ್ಜಿ ಸಲ್ಲಿಸುವವರನ್ನು ಸಂಬಂಧಪಟ್ಟ ಇಲಾಖೆಗೆ ಕರೆದುಕೊಂಡು ಹೋಗಿ ಸರ್ಕಾರದ ಸವಲತ್ತುಗಳನ್ನು ದೊರಕಿಸುವ ಕೆಲಸ ಮಾಡಿಕೊಂಡು ಬರಲಾಗುತ್ತಿದೆ. ಹಿಂದಿನ ಸರ್ಕಾರದ ಎಲ್ಲಾ ಯೋಜನೆಗಳು ಈಗಿನ ಸಮ್ಮಿಶ್ರ ಸರ್ಕಾರದಲ್ಲೂ ಮುಂದುವರೆಯುತ್ತಿವೆ. ಹಾಗಾಗಿ ಯಾರೂ ಆತಂಕಕ್ಕೆ ಒಳಗಾಗುವುದು ಬೇಡ ಎಂದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಾಂದ್‌ಪೀರ್, ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಹಸನ್ ತಾಹೀರ್, ನಾಸಿರುದ್ದಿನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.