Raids: ಬೆಳ್ಳಂಬೆಳಗ್ಗೆ ರಾಮನಗರ, ಚಿತ್ರದುರ್ಗದಲ್ಲಿ ಲೋಕಾಯುಕ್ತ ದಾಳಿ… ದಾಖಲೆಗಳ ಪರಿಶೀಲನೆ
Team Udayavani, Oct 30, 2023, 9:26 AM IST
ರಾಮನಗರ/ ಚಿತ್ರದುರ್ಗ: ಸೋಮವಾರ ಬೆಳ್ಳಂಬೆಳಗ್ಗೆ ರಾಮನಗರ, ಚಿತ್ರದುರ್ಗ ಸೇರಿದಂತೆ ಹಲವು ಕಡೆಗಳಲ್ಲಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಚಿತ್ರದುರ್ಗದಲ್ಲಿ ಇಬ್ಬರು ಅಧಿಕಾರಿಗಳಾದ ಅರಣ್ಯ ಇಲಾಖೆ ACF ನಾಗೇಂದ್ರ ನಾಯ್ಕ್, ಸಮಾಜ ಕಲ್ಯಾಣ ಇಲಾಖೆಯ ಎ.ಡಿ ಕೃಷ್ಣಮೂರ್ತಿ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅರಣ್ಯ ಇಲಾಖೆ ACF ನಾಗೇಂದ್ರ ನಾಯ್ಕ್ ಮನೆ ಮೇಲೆ ದಾಳಿ ನಡೆಸಿದ ತಂಡ ಹಿರಿಯೂರು ನಗರದ ಚಂದ್ರಾ ಲೇಔಟ್ ಮನೆ ಹಾಗೂ ತವಂದಿ ಗ್ರಾಮದ ಬಳಿ ಇರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಅದೇ ರೀತಿ ಚಿತ್ರದುರ್ಗದ ಸಮಾಜ ಕಲ್ಯಾಣ ಇಲಾಖೆಯ ಎಡಿ ಕೃಷ್ಣಮೂರ್ತಿ ಅವರ ಹಿರಿಯೂರಿನ ಕುವೆಂಪು ನಗರದ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಕಲೆಹಾಕುತ್ತಿದ್ದಾರೆ.
ರಾಮನಗರದಲ್ಲೂ ಲೋಕಾ ದಾಳಿ:
ರಾಮನಗರದಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕೆಆರ್ ಡಿಎಲ್ ಇಂಜಿನಿಯರ್ ಮಾವನ ಮನೆ ಮೇಲೆ ದಾಳಿ ನಡೆಸಿದ್ದಾರೆ, ಬೆಂಗಳೂರಿನಲ್ಲಿ ಕೆಆರ್‌ಡಿಎಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿರೋ ಶಶಿಕುಮಾರ್. ಶಶಿ ಕುಮಾರ್ ಮಾವ ರಾಮಲಿಂಗಯ್ಯ ಮನೆ ಮೇಲೆ ದಾಳಿ ನಡೆಸಿ ಅಗತ್ಯ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ಸ್ಪೆಕ್ಟರ್ ಕೃಷ್ಣಯ್ಯ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು. ಚನ್ನಪಟ್ಟಣ ನಗರದ ವಿವೇಕಾನಂದ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿ, ರಾಮಲಿಂಗಯ್ಯ ಮನೆಯಲ್ಲಿ ಲೆಕ್ಕಪತ್ರ, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Lokayuktha raid: ಕ್ಯಾಶುಟೆಕ್ ಯೋಜನಾ ನಿರ್ದೇಶಕ ಪಟ್ಟೇದ್ ಮನೆ ಮೇಲೆ ಲೋಕಾ ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.