ಜಿಲ್ಲಾಸ್ಪತ್ರೆಗೆ ಲೋಕಾಯುಕ್ತಎಸ್‌ಪಿ ಭೇಟಿ-ಪರಿಶೀಲನೆ
Team Udayavani, Dec 22, 2018, 5:07 PM IST
ಚಿತ್ರದುರ್ಗ: ಜಿಲ್ಲಾಸ್ಪತ್ರೆಯಲ್ಲಿ ಲಂಚ ಪಡೆಯುತ್ತಿರುವ ದೂರುಗಳು ಕೇಳಿ ಬಂದಿದ್ದು ಅದು ದೃಢಪಟ್ಟರೆ ಕೆಲಸ ಕಳೆದುಕೊಳ್ಳಬೇಕಾಗುತ್ತದೆ ಎಂದು ಚಿತ್ರದುರ್ಗ ಲೋಕಾಯುಕ್ತ ಎಸ್ಪಿ ಪುರುಷೋತ್ತಮ್ ಎಚ್ಚರಿಸಿದರು.
ಇಲ್ಲಿನ ಜಿಲ್ಲಾಸ್ಪತ್ರೆಗೆ ಶುಕ್ರವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿ ವಿವಿಧ ವಾರ್ಡ್‌ಗಳನ್ನು ಪರಿಶೀಲಿಸಿ ಅವರು ಮಾತನಾಡಿದರು. ಡಿ ಗ್ರೂಪ್ ನೌಕರರು ಲಂಚಕ್ಕಾಗಿ ಬೇಡಿಕೆ ಇಟ್ಟು ಒತ್ತಾಯಿಸುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಇತ್ತೀಚೆಗೆ ಸಾಮಾನ್ಯ ಹರಿಗೆ ಮಾಡದೆ ಶಸ್ತ್ರ ಚಿಕಿತ್ಸೆ ಮೂಲಕ ಹರಿಗೆ ಮಾಡಿ ಹೆಚ್ಚಿನ ಲಂಚ ಪಡೆಯುತ್ತಿದ್ದು, ಈ ರೀತಿಯ ಪ್ರಕರಣಗಳು ಮರುಕಳಿಸಿದರೆ ನಿರ್ಧಾಕ್ಷ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಜಿಲ್ಲಾಸ್ಪತ್ರೆಯಲ್ಲಿ ರಕ್ತ ಪರೀಕ್ಷೆಗೆ ಅವಕಾಶ ಇದ್ದರೂ ಹೊರಗಡೆ ಪರೀಕ್ಷೆ ಮಾಡಿಸಿಕೊಂಡು ಬರುವಂತೆ ಚೀಟಿ ಬರೆದು ಕೊಡಲಾಗುತ್ತಿದೆ. ಸಿಟಿ ಸ್ಕ್ಯಾನ್ ಇದ್ದರೂ ಉಪಯೋಗಕ್ಕೆ ಬರುತ್ತಿಲ್ಲ. ಯಾವುದೇ ವಾರ್ಡ್ ನಲ್ಲೂ ಸ್ವತ್ಛತೆ ಇಲ್ಲ. ಬೆಡ್‌ಗಳು ಸರಿಯಿಲ್ಲ. ಕುಡಿಯುವ ನೀರಿನ ಸೌಲಭ್ಯವಿಲ್ಲ. ರೋಗಿಗಳಿಗೆ ಹಣಕ್ಕಾಗಿ ಸಾಕಷ್ಟು ಹಿಂಸೆ ನೀಡುವುದು ಸರಿಯಲ್ಲ ಎಂದು ಜಿಲ್ಲಾಸ್ಪತ್ರೆಯ ಎಲ್ಲ ವೈದ್ಯರು, ನರ್ಸ್, ಡಿ ಗ್ರೂಪ್ ನೌಕರರಿಗೆ ಎಚ್ಚರಿಸಿದರು.
ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆ ತನಕ ಇಡೀ ಆಸ್ಪತ್ರೆಯನ್ನು ಜಾಲಾಡಿ ಪ್ರತಿಯೊಬ್ಬರಿಗೂ ಎಚ್ಚರಿಕೆ ನೀಡಿದರು. ಲೋಕಾಯುಕ್ತ ಇನ್ಸ್ ಪೆಕ್ಟರ್‌ಗಳಾದ ಕೇಶವಮೂರ್ತಿ, ಎಚ್.ಎಸ್. ರಾಷ್ಟ್ರಪತಿ ಭೇಟಿ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.