ಸ್ವಾಮೀಜಿಗಳು ಸಮಾಜಮುಖೀಯಾಗಲಿ
91ನೇ ಮಹಾಶಿವರಾತ್ರಿ ಉತ್ಸವ ! ಮೀಸಲಾತಿ ಕೊಡಿಸುವುದೇ ಮಠಗಳ ಕೆಲಸವಾಗಿದೆ
Team Udayavani, Mar 8, 2021, 6:59 PM IST
ಚಿತ್ರದರ್ಗ: ಮಠಾ ಧೀಶರು ಒಂದು ಜಾತಿ, ಧರ್ಮದ ಮುಖವಾಣಿಯಾಗದೆ ಸಮಾಜಮುಖೀಯಾಗಿ ಕೆಲಸ ಮಾಡಬೇಕಿದೆ ಎಂದು ಸಂಸದ ಎ.ನಾರಾಯಣಸ್ವಾಮಿ ಹೇಳಿದರು. ಕಬೀರಾನಂದ ಮಠದಲ್ಲಿ ಪ್ರಾರಂಭವಾದ 91ನೇ ಶಿವರಾತ್ರಿ ಮಹೋತ್ಸದವದ ಮಹಾ ಮಂಟಪ ಉದ್ಘಾಟಿಸಿ ಅವರು ಮಾತನಾಡಿದರು.
ಮಠಗಳು ಧರ್ಮ ಪ್ರಸಾರಕ್ಕಿಂತ ತಮ್ಮ ಜನಾಂಗಕ್ಕೆ ಮೀಸಲಾತಿ ತಂದು ಕೊಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಇದು ದುರಂತದ ವಿಷಯವಾಗಿದೆ. ಮಠಾ ಧೀಶರು ತಮ್ಮ ಜನಾಂಗಕ್ಕೆ ಜಾಗೃತಿ ಮೂಡಿಸಬೇಕೇ ಹೊರತು ಮೀಸಲಾತಿಗಾಗಿ ಹೋರಾಟ ಮಾಡಬಾರದು. ಧರ್ಮದಲ್ಲಿ ರಾಜಕಾರಣವನ್ನು ಬೆರೆಸುವ ಕಾರ್ಯ ಮಾಡಬಾರದು ಎಂದು ನುಡಿದರು.
ನಗರದ ಕಬೀರಾನಂದಾಶ್ರಮ ಕಳೆದ 90 ವರ್ಷಗಳಿಂದ ನಿರಂತರವಾಗಿ ಶಿವನಾಮ ಸ್ಮರಣೆಯನ್ನು ಮಾಡುತ್ತಾ ಬಂದಿದೆ ಇನ್ನೂ 9 ವಷ ಕಳೆದರೆ 100 ವರ್ಷವಾಗುತ್ತದೆ. ವರ್ಷದಲ್ಲಿ 5 ದಿನ ಶಿವ ನಾಮಸ್ಮರಣೆಯನ್ನು ಮಾಡುವುದರ ಮೂಲಕ ಜನತೆಗೆ ಶಿವನನ್ನು ತಿಳಿಸುವ ಕಾರ್ಯವನ್ನು ಮಾಡುತ್ತಿರುವುದು ಶ್ಲಾಘನೀಯ. ಶ್ರೀ ಮಠ ವರ್ಗ, ಜಾತಿ ರಹಿತವಾಗಿ ಕೆಲಸವನ್ನು ಮಾಡುತ್ತಾ ಬಂದಿದೆ. ಇದರೊಂದಿಗೆ ಗೋವುಗಳ ಸಂರಕ್ಷಣೆ ಕಾರ್ಯವನ್ನು ಮಾಡುತ್ತಾ ಬಂದಿರುವುದು ಉತ್ತಮ ಎಂದರು.
ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್.ನವೀನ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಓಬಿಸಿ ವಿಭಾಗದ ರಾಜ್ಯ ಉಪಾಧ್ಯಕ್ಷ ಸಿದ್ದೇಶ್ ಯಾದವ್, ಗ್ರಾಮಾಂತರ ಘಟಕದ ಅಧ್ಯಕ್ಷ ನಂದಿನಾಗರಾಜ್, ಯುವ ಮುಖಂಡ ಸಂದೀಪ್ ಗುಂಡಾರ್ಪಿ, ಜಿ.ಪಂ. ಮಾಜಿ ಅಧ್ಯಕ್ಷ ಮೀಸೆ ಮಹಾಲಿಂಗಪ್ಪ, ಶಿವರಾತ್ರಿ ಮಹೋತ್ಸವದಅಧ್ಯಕ್ಷ ವೆಂಕಟೇಶ್ ಭಾಗವಹಿಸಿದ್ದರು. ಹುರುಳಿ ಬಸವರಾಜ್ ಉಪನ್ಯಾಸ ಮಾಡಿದರು. ಇದೇ ಸಂದರ್ಭದಲ್ಲಿ ರಾಷ್ಟ್ರಪತಿ ಪೋಲಿಸ್ ಪದಕ ವಿಜೇತರಾದ ಬಾಲಚಂದ್ರ ನಾಯಕ್ ಅವರನ್ನು ಸನ್ಮಾನಿಸಲಾಯಿತು. ಶ್ರೀ ಶಿವಮೂರ್ತಿ ಮುರುಘಾ ಶರಣರು ಹಾಗೂ ಹುಬ್ಬಳಿಯ ಜಡಿ ಸಿದ್ದೇಶ್ವರ ಮಠದ ಶ್ರೀ ರಮಾನಂದ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು.
ಸುಬ್ರಾಯಭಟ್ ವೇದ ಘೋಷವನ್ನು ವಾಚಿಸಿದರು. ಸುಮನಾ ಪ್ರಾರ್ಥಿಸಿ, ಮಾತೃಶ್ರೀ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಿ.ಎಲ್.ಪ್ರಶಾಂತ್ ಸ್ವಾಗತಿಸಿದರು. ಮುರುಗೇಶ್ ನಿರೂಪಿಸಿದರು. ಸದ್ಗುರು ಕಬೀರಾನಂದಸ್ವಾಮಿ ವಿದ್ಯಾಪೀಠದ ಶಾಲಾ-ಕಾಳೇಜು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.