ಮಂಜುನಾಥ್ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ
Team Udayavani, May 31, 2020, 7:57 AM IST
ಚಿತ್ರದುರ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕೆ. ಮಂಜುನಾಥ್ ಆಯ್ಕೆಯಾಗಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಜಗದೀಶ್ ಗೌಡಪ್ಪ ಪಾಟೀಲ ತಿಳಿಸಿದ್ದಾರೆ.
ಈ ಹಿಂದೆ ಅಧ್ಯಕ್ಷರಾಗಿದ್ದ ಕೆ.ಜಿ. ಜಗದೀಶ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ಉಪ ಚುನಾವಣೆ ನಡೆಯಿತು. ಸರ್ಕಾರಿ ನೌಕರರ ಪ್ರತಿನಿ ಧಿಳಾದ 57 ಮತದಾರರಿದ್ದು, ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಇದರಲ್ಲಿ ಕೆ. ಮಂಜುನಾಥ್ 40 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಎಸ್.ಕೆ. ಮಂಜುನಾಥ್ 17 ಮತ ಪಡೆದರು.
ಕೋವಿಡ್ ನಿಯಂತ್ರಣಕ್ಕೆ ನೌಕರರ ಸೇವೆಗೆ ಮೆಚ್ಚುಗೆ: ಫಲಿತಾಂಶ ಘೋಷಣೆ ಬಳಿಕ, ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎ. ಷಡಕ್ಷರಿ ಮಾತನಾಡಿ, ಜಿಲ್ಲಾ ಘಟಕದ ಅಧ್ಯಕ್ಷರ ಅವ ಐದು ವರ್ಷಗಳಾಗಿದ್ದು, ಈಗಾಗಲೇ 8 ತಿಂಗಳು ಕಳೆದಿದೆ. ಉಳಿದ ಅವಧಿಗೆ ಉತ್ಸಾಹಿ ಯುವ ಸರ್ಕಾರಿ ನೌಕರ ಕೆ. ಮಂಜುನಾಥ್ ಆಯ್ಕೆಯಾಗಿದ್ದು, ಜಿಲ್ಲೆಯ ನೌಕರರ ಹಿತ ಕಾಪಾಡಲಿದ್ದಾರೆ. ಜೊತೆಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಕೇಂದ್ರ ಸಂಘದ ಗಮನಕ್ಕೆ ತಂದು ಮಾಡಿಕೊಡುವ ಪ್ರಯತ್ನಗಳು ಅವರಿಂದ ಆಗಲಿ ಎಂದರು. ಕೋವಿಡ್-19 ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರಿ ನೌಕರರು ಒಂದು ದಿನದ ವೇತನ ಸುಮಾರು ರೂ. 200 ಕೋಟಿ ನೀಡಿದ್ದಾರೆ.
ಪ್ರತಿ ವರ್ಷ ಸರ್ಕಾರಿ ನೌಕರರಿಗಾಗಿ 15 ದಿನಗಳ ಗಳಿಕೆ ರಜೆ ನಗದೀಕರಣಕ್ಕೆ ಅವಕಾಶವಿದೆ. ಇದು ಸುಮಾರು ರೂ 400 ರಿಂದ 500 ಕೋಟಿ ರೂ. ಆಗಲಿದೆ. ಆದರೆ ಈ ಬಾರಿ ಸೌಲಭ್ಯ ನೀಡಲಾಗುವುದಿಲ್ಲ ಎಂದು ಸರ್ಕಾರ ಹೇಳಿದೆ. ಇದರಿಂದ ನೌಕರರಿಗೆ ತೊಂದರೆ ಆಗಿದ್ದರೂ ರಾಷ್ಟ್ರೀಯ ವಿಪತ್ತು ಸಂದರ್ಭದಲ್ಲಿ ಮಾನವೀಯತೆ ಮೆರೆಯುವ ಉದ್ದೇಶದಿಂದ ಅತ್ಯಂತ ಗೌರವಯುತವಾಗಿ ನಿರ್ಧಾರ ಸ್ವೀಕರಿಸಿ, ಸರ್ಕಾರದ ಜೊತೆ ನಡೆದುಕೊಳ್ಳುತ್ತಿದ್ದೇವೆ ಎಂದು ಹೇಳಿದರು.
ಆರೋಗ್ಯ ಇಲಾಖೆ, ಪೌರಾಡಳಿತ ಇಲಾಖೆ, ಕಂದಾಯ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಶಿಕ್ಷಣ ಇಲಾಖೆಯ ನೌಕರರು ಸೇರಿದಂತೆ ಇತರೆ ಇಲಾಖೆ ನೌಕರರೆಲ್ಲರೂ ಕೋವಿಡ್-19 ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಕೇರಳ, ತಮಿಳುನಾಡು, ಮಹಾರಾಷ್ಟ್ರ, ದೆಹಲಿ ರಾಜ್ಯಗಳಿಗೆ ಹೋಲಿಸಿದಾಗ ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣದಲ್ಲಿದೆ.
ಇದರ ಶ್ರೇಯಸ್ಸು ರಾಜ್ಯ ಸರ್ಕಾರಿ ನೌಕರರಿಗೆ ಸಲ್ಲಬೇಕು. ವೃತ್ತಿ ಬದುಕಿನ ಸೇವೆಗಳನ್ನು ನೀಡುವುದರ ಜೊತೆಗೆ ಸರ್ಕಾರಕ್ಕೆ ಆರ್ಥಿಕ ಸಹಕಾರಗಳನ್ನು ಕೊಡುವುದರ ಜೊತೆಗೆ ಅತ್ಯಂತ ಗೌರವದಿಂದ ನೌಕರರು ನಡೆದುಕೊಳ್ಳುತ್ತಿದ್ದಾರೆ. ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಖಜಾಂಚಿ ಶ್ರೀನಿವಾಸ್, ಗೌರವಾಧ್ಯಕ್ಷ ಶಿವರುದ್ರಯ್ಯ, ಉಪಾಧ್ಯಕ್ಷ ಬಸವರಾಜ್, ಬೆಂಗಳೂರು ವಿಭಾಗದ ಉಪಾಧ್ಯಕ್ಷ ಮೋಹನ್ ಕುಮಾರ್, ಹೊಸದುರ್ಗ ತಾಲ್ಲೂಕು ಅಧ್ಯಕ್ಷ ಜಯಪ್ಪ, ಜಿಲ್ಲಾ ಶಾಖೆಯ ಪ್ರಭಾರಿ ಅಧ್ಯಕ್ಷ ಲೋಕೇಶ್, ಜಿಲ್ಲಾ ಮತ್ತು ರಾಜ್ಯ ಘಟಕದ ಪದಾ ಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.