ಗ್ರಾಮೀಣ ಜನರಿಂದಲೇ ಸಂಸ್ಕೃತಿ ರಕ್ಷಣೆ
Team Udayavani, Dec 6, 2020, 4:37 PM IST
ಚಿತ್ರದುರ್ಗ: ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸಿದ ಶ್ರೇಯಸ್ಸು ಗ್ರಾಮೀಣ ಭಾಗದ ಜನರಿಗೆ ಸಲ್ಲುತ್ತದೆ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.
ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಮತ್ತು ಎಸ್.ಜೆ.ಎಂ ಶಾಂತಿ ಮತ್ತು ಪ್ರಗತಿ ಫೌಂಡೇಶನ್‌ಸಹಯೋಗದಲ್ಲಿ ನಡೆದ ಮೂವತ್ತನೇ ವರ್ಷದ ಹನ್ನೆರಡನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿ ವ್ಯಕ್ತಿಯೂ ಬದುಕನ್ನು ಶೃಂಗರಿಸಿಕೊಳ್ಳುವ ಸಂದರ್ಭವನ್ನು ತಂದುಕೊಳ್ಳಬೇಕು. ಬಹಿರಂಗದ ಅಲಂಕಾರ ಕ್ಷಣಿಕ. ಅಂತರಂಗದ ಶೃಂಗಾರ ಮುಖ್ಯ. ಪ್ರೇರಣೆ ಉಜ್ವಲವಾದ ಬದುಕನ್ನು ಕಟ್ಟಿಕೊಡುತ್ತದೆ. ಬದುಕನ್ನು ಕಟ್ಟಿಕೊಳ್ಳಲು ಹಣ, ಶ್ರೀಮಂತಿಕೆ ಮುಖ್ಯವಲ್ಲ ಎಂದರು.
ಬಸವಣ್ಣನವರಿಗೆ ಶರಣರು, ಶರಣರ ಪ್ರೇರಣೆ ಬಸವಣ್ಣನವರಿಗಾಯಿತು. ಗುಡ್ಡಾಪುರದ ಶರಣೆ ದಾನಮ್ಮ ಸಾಮೂಹಿಕ ಕಲ್ಯಾಣ ಮಹೋತ್ಸವ ಮಾಡುತ್ತ ಅನ್ನದಾಸೋಹ ನೆರವೇರಿಸಿ ಪ್ರೇರಣೆಯಾಗಿದ್ದಾರೆ. 12ನೇ ಶತಮಾನದ ಬಸವಾದಿ ಪ್ರಮಥರು ನಮಗೆಲ್ಲ ಪ್ರೇರಣೆಯಾಗಿದ್ದಾರೆ ಎಂದು ತಿಳಿಸಿದರು.
ಕೆಆರ್‌ಐಡಿಎಲ್ ಅಧ್ಯಕ್ಷ ಎಂ. ರುದ್ರೇಶ್ ಸನ್ಮಾನ ಸ್ವೀಕರಿಸಿ ಮಾತನಾಡಿ, ಮುರುಘಾ ಶರಣರು ನಡೆಸುವ ಎಲ್ಲಾ ಚಟುವಟಿಕೆಗಳು ನಮಗೆ ಪ್ರೇರಣೆಯಾಗಿವೆ. ನಾವೆಲ್ಲ ಎಷ್ಟೇ ದುಡಿದು ಶ್ರೀಮಂತರಾದರು ಇನ್ನೊಬ್ಬರಹಸಿವಿಗೆ ಸ್ಪಂದಿಸಬೇಕು. ಕೊರೊನಾ ವೈರಾಣು ನಗರ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡು ಸಾವು ನೋವುಗಳಾಗಿವೆ. ಈ ಸಂದರ್ಭದಲ್ಲಿ ಹಳ್ಳಿ ಜನರ ಸೇವೆ ಅಮೂಲ್ಯವಾದುದು. ನಾವು ದೇಶದ ರಕ್ಷಣೆಗೆ ಮುಂದಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಕನಕಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಗನ್ನಾಥ, ಎಸ್.ಜೆ.ಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ,ಕೆಇಬಿ ಷಣ್ಮುಖಪ್ಪ, ಎಂ.ಟಿ. ಮಲ್ಲಿಕಾರ್ಜುನಸ್ವಾಮಿ,ಪೈಲ್ವಾನ್ ತಿಪ್ಪೇಸ್ವಾಮಿ, ಪಿ. ವೀರೇಂದ್ರಕುಮಾರ್, ಎನ್. ತಿಪ್ಪಣ್ಣ, ಗುತ್ತಿನಾಡು ಪ್ರಕಾಶ್ ಮೊದಲಾದವರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ 2 ಜೊತೆ ಅಂತರ್ಜಾತಿ ಸೇರಿದಂತೆ 12 ಜೋಡಿಗಳ ವಿವಾಹ ನೆರವೇರಿತು. ಜಮುರಾ ಕಲಾವಿದರು ಪ್ರಾರ್ಥಿಸಿದರು. ವೀರಭದ್ರಪ್ಪ ಸ್ವಾಗತಿಸಿದರು. ಜ್ಞಾನಮೂರ್ತಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.