ಪ್ರತಿಯೊಬ್ಬರೂ ಮಾತೃಭಾಷೆ ಪ್ರೀತಿಸಿ
Team Udayavani, Nov 6, 2020, 8:19 PM IST
ಚಿತ್ರದುರ್ಗ: ನಮ್ಮ ಮಾತೃಭಾಷೆ ಕನ್ನಡ ಅನ್ನ ಕೊಟ್ಟಂತಹ ಭಾಷೆ. ಹಾಗಾಗಿ ಕನ್ನಡಿಗರಾದ ನಾವೆಲ್ಲರೂ ಕನ್ನಡವನ್ನು ಪ್ರೀತಿಸಬೇಕು ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಕರೆ ನೀಡಿದರು.
ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಮತ್ತು ಎಸ್.ಜೆ.ಎಂ ಶಾಂತಿ ಮತ್ತು ಪ್ರಗತಿ ಫೌಂಡೇಶನ್ ಸಹಯೋಗದಲ್ಲಿ ನಡೆದ 30ನೇ ವರ್ಷದ 11ನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದ ಅಧ್ಯಕ್ಷತೆ ವಹಿಸಿ ಶರಣರು ಮಾತನಾಡಿದರು. ಕನ್ನಡ ರಾಜ್ಯೋತ್ಸವ ನಿಮಿತ್ತ ಮುರುಘಾ ಮಠದಲ್ಲಿ ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದಮುರುಘಾ ಶರಣರು, ದೇವ ಭಾಷೆ ಜನಭಾಷೆ ಆಗದೆ ಇದ್ದ ಕಾಲದಲ್ಲಿ ದೇವಭಾಷೆಯನ್ನು ಜನ ಭಾಷೆಯನ್ನಾಗಿಸಿದ್ದು 12ನೇ ಶತಮಾನದ ಬಸವಾದಿ ಶರಣರು. ಬಸವಣ್ಣ, ಅಲ್ಲಮಾದಿ ಶರಣರು ಜಾಗತಿಕ ಮಟ್ಟದಲ್ಲಿ ಕನ್ನಡದ ಕಂಪನ್ನು ಹರಡಲು ಕನ್ನಡದಲ್ಲಿ ವಚನ ರಚಿಸಿದರು. ಪ್ರಪಂಚದಾದ್ಯಂತ ಕನ್ನಡಗರಿದ್ದಾರೆ. ಅವರಿಗೆಲ್ಲ ಕನ್ನಡದ ಮೇಲೆ ಅಪಾರ ಪ್ರೀತಿ ಗೌರವ ಇದೆ ಎಂದರು.
ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ ಮಾತನಾಡಿ, ಶ್ರೀಗಳು ಸಮಾಜಮುಖೀ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಸಾಮೂಹಿಕ ವಿವಾಹ ಕಾರ್ಯಕ್ರಮ ಮೂವತ್ತು ವರ್ಷ ನಿರಂತರವಾಗಿ ನಡೆಯುತ್ತಿರುವುದು ಸಂತಸದ ವಿಚಾರ. ಇಂತಹ ಬೃಹತ್ ಅನುಭವ ಮಂಟಪದಲ್ಲಿ ವಿವಾಹ ನಡೆಯುತ್ತಿರುವುದು ನಿಮ್ಮೆಲ್ಲರಸೌಭಾಗ್ಯವಾಗಿದೆ. ಶ್ರೀಗಳು ಲೋಕ ಕಲ್ಯಾಣಕ್ಕಾಗಿ ಜ್ಞಾನ ದಾಸೋಹ, ಅನ್ನ ದಾಸೋಹದ ಮೂಲಕ ಬಡ ಕುಟುಂಬಗಳಿಗೆ ಆಧಾರವಾಗಿದ್ದಾರೆ. ಬಸವಣ್ಣನವರ ಆಶಯ ಮತ್ತು ತತ್ವಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಬಸವ ಪುತ್ಥಳಿ ನಿರ್ಮಾಣ ಆಗುವ ಮೂಲಕ ಚಿತ್ರದುರ್ಗ ಪ್ರವಾಸಿ ತಾಣವಾಗಬೇಕು ಎಂದು ಆಶಿಸಿದರು.
ದಾವಣಗೆರೆ ಪೂರ್ವವಲಯಪೊಲೀಸ್ ಮಹಾನಿರ್ದೇಶಕ ಎಸ್. ರವಿ ಮಾತನಾಡಿದರು. ಇದೇ ವೇಳೆ 3ಅಂತರ್ಜಾತಿ ವಿವಾಹ ಸೇರಿದಂತೆ 10 ಜೋಡಿಗಳು ದಾಂಪತ್ಯ ಜೀವನವನ್ನು ಪ್ರವೇಶಿಸಿದರು. ಕಾರ್ಯಕ್ರಮದಲ್ಲಿ ಎಸ್ ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಕೆಇಬಿ ಷಣ್ಮುಖಪ್ಪ, ಫಾದರ್ ಎಂ.ಎಸ್. ರಾಜು, ಪೈಲ್ವಾನ್ ತಿಪ್ಪೇಸ್ವಾಮಿ ಭಾಗವಹಿಸಿದ್ದರು.
ಬಸವಾದಿ ಶರಣರು ಕನ್ನಡದಲ್ಲಿ ವಚನಗಳನ್ನು ಕೊಟ್ಟಿದ್ದಾರೆ. ನಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಬೇಕು. ದುಂದುವೆಚ್ಚಕ್ಕೆ ಕಡಿವಾಣ ಹಾಕುವುದರಿಂದ ಒಳ್ಳೆಯ ಬದುಕನ್ನು ಕಟ್ಟಿಕೊಳ್ಳಬೇಕು. 12ನೇ ಶತಮಾನದಲ್ಲಿ ಸರಳವಾಗಿ ವಿವಾಹ ಮಾಡುತ್ತಿದ್ದರು. ಅದನ್ನೇ ಮುರುಘಾ ಶರಣರು ಮುಂದುವರಿಸಿದ್ದಾರೆ. –ಶ್ರೀ ಬಸವಲಿಂಗ ಸ್ವಾಮೀಜಿ, ಸಿದ್ಧಯ್ಯನಕೋಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.