ಸಂವಿಧಾನದ ಮೂಲ ಆಶಯ ಈಡೇರಲಿ: ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ

ಸರ್ವ ಶ್ರೇಷ್ಠ ಸಂವಿಧಾನ ನೀಡಿದ ಅಂಬೇಡ್ಕರ್‌ ತತ್ವಾದರ್ಶ ಪಾಲನೆ ಅಗತ್ಯ: ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ

Team Udayavani, Jul 22, 2022, 3:52 PM IST

22

ಚಿತ್ರದುರ್ಗ: ಸರ್ವರಿಗೂ ಸಮಬಾಳು-ಸಮಪಾಲು ಎಂಬ ಸಂವಿಧಾನದ ಆಶಯ ಹಾಗೂ ಅಂಬೇಡ್ಕರ್‌ ಅವರ ಸಿದ್ಧಾಂತ ಮತ್ತು ಹೋರಾಟಗಳನ್ನು ಪ್ರತಿಯೊಬ್ಬರಿಗೂ ಮನವರಿಕೆ ಮಾಡಿಕೊಡುವ ಅಗತ್ಯವಿದೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

ನಗರದ ತರಾಸು ರಂಗಮಂದಿರದಲ್ಲಿ ಗುರುವಾರ ಡಾ| ಬಿ.ಆರ್‌.ಅಂಬೇಡ್ಕರ್‌ ವಿದ್ಯಾರ್ಥಿ ಪರಿಷತ್‌ ಆಯೋಜಿಸಿದ್ದ ರಂಗಾಯಣ ಮೈಸೂರು ಅಭಿನಯದ “ಸೂತ್ರಧಾರ’ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಾನ್‌ ನಾಯಕರ ಜಯಂತಿಗೆ ರಜೆ ಘೋಷಣೆ ಮಾಡುತ್ತವೆ. ಇದರಿಂದ ಆ ವ್ಯಕ್ತಿಗಳ ಮಹತ್ವ ತಿಳಿಯಲು ಸಾಧ್ಯವಾಗುವುದಿಲ್ಲ. ಆದರೆ ಇಂದಿನ ಪೀಳಿಗೆಗೆ ಮಹಾತ್ಮರ ಜೀವನ ಚರಿತ್ರೆಗಳನ್ನು ಅರ್ಥ ಮಾಡಿಸುವ ಅಗತ್ಯವಿದೆ ಎಂದರು.

ಡಾ| ಬಿ.ಆರ್‌.ಅಂಬೇಡ್ಕರ್‌ ಜಾತಿ, ವರ್ಗ, ಧರ್ಮಕ್ಕೆ ಸೀಮಿತರಾದವರಲ್ಲ. ಇಡೀ ಜಗತ್ತೇ ಮೆಚ್ಚುವಂತಹ ಸರ್ವ ಶ್ರೇಷ್ಠ ಸಂವಿಧಾನ ನೀಡಿದ ಸಂವಿಧಾನ ಶಿಲ್ಪಿ. ಅವರು ಸರ್ವರ ಆಸ್ತಿ. ಸಂವಿಧಾನ ಅಧ್ಯಯನ ಮಾಡುವ ಮೂಲಕ ಅವರ ತತ್ವಾದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್‌. ರಾಜು ಮಾತನಾಡಿ, ಸಂವಿಧಾನದ ಧ್ಯೇಯಗಳಾದ ಶಿಕ್ಷಣ, ಸಂಘಟನೆ, ಹೋರಾಟವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಇಂದಿನ ವಿದ್ಯಾರ್ಥಿಗಳಿಗೆ ಸಂವಿಧಾನ ಪರಿಚಯಿಸುವ ನಿಟ್ಟಿನಲ್ಲಿ ಅಂಬೇಡ್ಕರ್‌ ವಿದ್ಯಾರ್ಥಿ ಪರಿಷತ್‌ ನಾಟಕೋತ್ಸವ ಆಯೋಜನೆ ಮಾಡಿರುವುದು ಶ್ಲಾಘನೀಯ ಎಂದರು.

ವಿದ್ಯಾರ್ಥಿ ಪರಿಷತ್‌ ಜಿಲ್ಲಾ ಸಂಚಾಲಕ ಬಿ.ಪಿ. ತಿಪ್ಪೇಸ್ವಾಮಿ ಮಾತನಾಡಿ, ಭಾರತದ ರಾಷ್ಟ್ರೀಯ ಗ್ರಂಥ ಸಂವಿಧಾನವಾದರೆ, ಪ್ರಜಾಪ್ರಭುತ್ವವೇ ರಾಷ್ಟ್ರೀಯ ಧರ್ಮ. ಸಂವಿಧಾನ ಸಮರ್ಥಿಸಿದಾಗ ಪಾರ್ಲಿಮೆಂಟಿನಲ್ಲಿ ಮಾತನಾಡಿದ ಬಾಬಾ ಸಾಹೇಬರು ಇನ್ನು ಮುಂದೆ ದೇಶವನ್ನಾಳುವ ರಾಜ, ರಾಣಿಯ ಹೊಟ್ಟೆಯಲ್ಲಿ ಜನಿಸದೆ ಮತಪೆಟ್ಟಿಗೆಯಲ್ಲಿ ಜನಿಸುತ್ತಾನೆ ಎಂದಿದ್ದರು. ಸಂವಿಧಾನ ರಚಿಸಿಕೊಳ್ಳಲು ಬ್ರಿಟಿಷರು ಭಾರತೀಯರಿಗೆ ಸೂಚಿಸಿದಾಗ ಹತ್ತಾರು ಧರ್ಮಗಳು, ನೂರಾರು ಸಂಸ್ಕೃತಿಗಳು, ಪ್ರಜಾಪ್ರಭುತ್ವದ ಅರ್ಥವೇ ತಿಳಿಯದ ಅರವತ್ತು ಸಾವಿರಕ್ಕೂ ಹೆಚ್ಚಿನ ಜಾತಿಗಳು, ಅನೇಕ ಭಾಷೆಗಳ ಸಂಕೀರ್ಣ ಪ್ರೇರಣೆಯಿಂದ ತುಂಬಿದ್ದ ಭಾರತೀಯ ಸಮಾಜದ ಸಂವಿಧಾನ ರಚಿಸುವುದು ಸವಾಲಿನ ಕೆಲಸವಾಗಿತ್ತು ಎಂದರು.

ಜಿಪಂ ಮಾಜಿ ಸದಸ್ಯ ಬಿ.ಪಿ. ಪ್ರಕಾಶ್‌ಮೂರ್ತಿ, ಹಿರಿಯ ಸಾಹಿತಿ ಪ್ರೊ| ಎಚ್‌. ಲಿಂಗಪ್ಪ, ಆರ್ಥಿಕ ವಿಶ್ಲೇಷಕ ಜಿ.ಎನ್‌. ಮಲ್ಲಿಕಾರ್ಜುನಪ್ಪ, ನಿವೃತ್ತ ಸಮಾಜ ಕಲ್ಯಾಣಾಧಿ ಕಾರಿ ಬಿ.ಪಿ. ಪ್ರೇಮನಾಥ್‌, ಸ್ಲಂ ಜನಾಂದೋಲನ ಅಧ್ಯಕ್ಷ ಕೆ. ರಾಜಣ್ಣ, ಚಳ್ಳಕೆರೆ ನಗರಸಭಾ ಸದಸ್ಯ ಕೆ. ವೀರಭದ್ರಪ್ಪ, ಪ್ರಾಚಾರ್ಯರಾದ ಗುರುಮೂರ್ತಿ, ದೇವೇಂದ್ರಪ್ಪ, ರಾಮಣ್ಣ, ಮೈಸೂರಿನ ರಂಗಕರ್ಮಿ ಶಿವಲಿಂಗಯ್ಯ ಮತ್ತಿತರರು ಇದ್ದರು.

ನ್ಯಾಯವಾದಿ ಬೆನಕನಹಳ್ಳಿ ಚಂದ್ರಪ್ಪ ಸ್ವಾಗತಿಸಿದರು. ನ್ಯಾಯವಾದಿ ಸಿ. ಕುಮಾರ್‌ ಪಾಳ್ಯ ವಂದಿಸಿದರು. ಉಪನ್ಯಾಸಕ ಡಾ| ಬಿ.ಎಂ. ಗುರುನಾಥ್‌ ನಿರೂಪಿಸಿದರು.

‌ವಿಧಾನ ಎಷ್ಟೇ ಒಳ್ಳೆಯದಿದ್ದರೂ ಅದನ್ನು ಆಚರಣೆಗೆ ತರುವವರು ಕೆಟ್ಟವರಾಗಿದ್ದರೆ ಯಾವುದೇ ಆಶಯ ಈಡೇರುವುದಿಲ್ಲ. ಆದ್ದರಿಂದ ಆಡಳಿತ ನಡೆಸುವವರು ಸಂವಿಧಾನದ ಮೂಲ ಆಶಯಗಳನ್ನು ಸರಿಯಾದ ರೀತಿಯಲ್ಲಿ ಅನುಷ್ಠಾನಗೊಳಿಸಿದರೆ ದೇಶದ ಅಭಿವೃದ್ಧಿ ಸಾಧ್ಯ ಎಂದು ಅಂಬೇಡ್ಕರ್‌ ಬಹಳ ಹಿಂದೆಯೇ ಹೇಳಿದ್ದಾರೆ. ∙ಬಿ.ಪಿ. ತಿಪ್ಪೇಸ್ವಾಮಿ, ವಿದ್ಯಾರ್ಥಿ ಪರಿಷತ್‌ ಜಿಲ್ಲಾ ಸಂಚಾಲಕ

ಟಾಪ್ ನ್ಯೂಸ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.