ಯಾದವ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಸಿಗಲಿ
Team Udayavani, Jun 9, 2020, 2:55 PM IST
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.
ಹೊಸದುರ್ಗ: ವಿಧಾನಪರಿಷತ್ ಚುನಾವಣೆಯಲ್ಲಿ ಯಾದವ ಸಮುದಾಯಕ್ಕೂ ಪ್ರಾತಿನಿಧ್ಯ ನೀಡಬೇಕು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಯಾದವ ಸಮುದಾಯದ ಮುಖಂಡ ಡಾ| ಸಾಸಲು ಸತೀಶ್ ಅವಕಾಶ ಮಾಡಿಕೊಡಬೇಕು ಎಂದು ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಟಿ. ರವೀಂದ್ರ ಒತ್ತಾಯಿಸಿದ್ದಾರೆ.
ಪಟ್ಟಣದ ಪ್ರವಾಸಿಮಂದಿರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾದವ ಸಮುದಾಯವನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯೆ ಜಯಮ್ಮ ಬಾಲರಾಜ್‌ಅವರ ಅವಧಿ ಶೀಘ್ರದಲ್ಲೇ ಮುಕ್ತಾಯವಾಗಲಿದೆ. ಅವರಿಂದ ತೆರವಾಗಲಿರುವ ಸ್ಥಾನಕ್ಕೆ ಚಿಕ್ಕನಾಯಕನಹಳ್ಳಿ ತಾಲೂಕಿನ ಡಾ| ಸತೀಶ್ ಅವರಿಗೆ ಪಕ್ಷದ ಟಿಕೆಟ್ ನೀಡಬೇಕು. ಕಳೆದ 2013 ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ, ಯಾದವ ಸಮುದಾಯದ ಯಾವೊಬ್ಬ ಮುಖಂಡನಿಗೂ ಟಿಕೆಟ್ ನೀಡದೆ ವಂಚನೆ ಮಾಡಿತು.
ಇದು ಗೊಲ್ಲ ಸಮುದಾಯದ ಆಕ್ರೋಶಕ್ಕೆಕಾರಣವಾಗಿತ್ತು. ಇದರಿಂದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿ ಹಲವು ಕಡೆ ಸೋಲು ಅನುಭವಿಸಿತು ಎಂದರು.
ಕಳೆದ ಬಾರಿ ಒತ್ತಾಯ ಮಾಡಿದ್ದರಿಂದ ಸಿದ್ದರಾಮಯ್ಯ ಅವರು ಜಯಮ್ಮ ಬಾಲರಾಜ್ ಅವರನ್ನು ನಾಮನಿರ್ದೇಶನ ಕೋಟಾದಡಿ ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದ್ದರು. ಈಗ ಕಾಂಗ್ರೆಸ್ ಸರ್ಕಾರ ಇಲ್ಲ. ಹಾಗಾಗಿ ಟಿಕೆಟ್ ನೀಡಲು ಒತ್ತಾಯ ಮಾಡಲಾಗುತ್ತಿದೆ. ಕೋಲಾರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಮುಂತಾದ ಜಿಲ್ಲೆಗಳಲ್ಲಿ ಬಹುಸಂ ಖ್ಯಾತರಾಗಿರುವ ಗೊಲ್ಲರಿಗೆ ರಾಜಕೀಯ ಪ್ರಾತಿನಿಧ್ಯ ನೀಡಿದರೆ ಪಕ್ಷಕ್ಕೆ ಅನುಕೂಲವಾಗಲಿದೆ. ಒಂದು ವೇಳೆ ಡಾ| ಸಾಸಲು ಸತೀಶ್ ಅವರಿಗೆ ಟಿಕೆಟ್ ನೀಡದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಕೆ ನೀಡಿದರು. ಸಂಘಟನಾ ಕಾರ್ಯದರ್ಶಿ ಪದ್ಮನಾಭನ್ ಮಾತನಾಡಿ, ಕಳೆದೆರೆಡು ವಿಧಾನಸಭಾ ಚುನಾವಣೆಗಳಲ್ಲಿ ಯಾದವ ಸಮುದಾಯಕ್ಕೆ ಟಿಕೆಟ್ ನೀಡದೆ ಕಾಂಗ್ರೆಸ್ ದ್ರೋಹ ಎಸಗಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಚಿಕ್ಕನಾಯಕನಹಳ್ಳಿ ಕ್ಷೇತ್ರದ ಮುಖಂಡ ಸತೀಶ್ ಅವರಿಗೆಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.