ಖರೀದಿ ಕೇಂದ್ರ ಆರಂಭಕ್ಕೆ ಒತ್ತಾಯ
Team Udayavani, Apr 19, 2020, 12:22 PM IST
ಮಾಯಕೊಂಡ: ರೈತ ಸಂಘ ಹಾಗೂ ಹಸಿರುಸೇನೆ ಮುಖಂಡರು ತಹಶೀಲ್ದಾರ್ ಗಿರೀಶ್ ಅವರಿಗೆ ಮನವಿ ಸಲ್ಲಿಸಿದರು.
ಮಾಯಕೊಂಡ: ತರಕಾರಿ ಹಾಗೂ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ರೈತ ಸಂಘ ಹಾಗೂ ಹಸಿರುಸೇನೆ ಮುಖಂಡರು ಶನಿವಾರ ಇಲ್ಲಿನ ನಾಡ ಕಚೇರಿಯಲ್ಲಿ ತಹಶೀಲ್ದಾರ್ ಗಿರೀಶ್ ಅವರಿಗೆ ಮನವಿ ಸಲ್ಲಿಸಿದರು.
ದೇಶದಲ್ಲಿ ಕೋವಿಡ್ ಸೊಂಕು ವ್ಯಾಪಕವಾಗಿ ಹರಡುತ್ತಿದೆ. ಜಿಲ್ಲೆಯ ರೈತರು ಬೆಳೆದ ಟೊಮ್ಯಾಟೋ, ಬದನೆ, ಮೆಣಸಿನಕಾಯಿ, ಕೋಸು, ಕುಂಬಳಕಾಯಿ, ಈರುಳ್ಳಿ ಇನ್ನಿತರ ಬೆಳೆಗಳ ಕಟಾವು ನಡೆಯುತ್ತಿದೆ. ಸ್ಥಳೀಯ ಮಾರಾಟಗಾರರು ಖರೀದಿ ಮಾಡಿ ಮಾರಾಟ ಮಾಡುತ್ತಿದ್ದಾರೆ. ಇನ್ನುಳಿದ ತರಕಾರಿಗಳನ್ನು ಹರ್ಯಾಣಾ, ತೆಲಂಗಾಣ ಮಾದರಿಯಲ್ಲಿ ಸರ್ಕಾರವೇ ಹೋಬಳಿ ಮಟ್ಟದಲ್ಲಿ ಖರೀದಿ ಮಾಡಿ ಮಾರಾಟ ಮಾಡಬೇಕು. ಕಲ್ಲಂಗಡಿ, ಕುಂಬಳಕಾಯಿಯಂತಹ ಬೆಳೆಗಳನ್ನು ಕೋಲ್ಡ್ ರೂಂನಲ್ಲಿ ಸಂಗ್ರಹಿಸಿ ಇಡಲು ಜಿಲ್ಲಾಡಳಿತ ರೈತರ ಮನೆಬಾಗಿಲಿಗೆ ವಾಹನ ವ್ಯವಸ್ಥೆಯನ್ನು ಮಾಡಬೇಕು. ಈಗಾಗಲೇ ಮೆಕ್ಕೆಜೋಳ ದರ ಕುಸಿತವಾಗಿರುವುದರಿಂದ ಕೂಡಲೇ ಖರೀದಿ ಕೇಂದ್ರವನ್ನು ಆರಂಭಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮನವಿ ಸ್ವೀಕರಿಸಿದ ತಹಶೀಲ್ದಾರ್ ಗಿರೀಶ್ ಮಾತನಾಡಿ, ರೈತರು ಬೆಳೆದ ತರಕಾರಿಗಳನ್ನು ಒಂದು ಕಡೆ ಸಂಗ್ರಹಣೆ ಮಾಡಿದರೆ ಮನೆ ಬಾಗಿಲಿಗೆ ಉಚಿತ ವಾಹನ ಕಳುಹಿಸಿಕೊಡಲಾಗುವುದು. ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ಈ ಸಂಬಂಧ ಸೂಚನೆ ನೀಡಲಾಗಿದೆ. ಆದ್ದರಿಂದ ರೈತರು ಬೆಳೆಗಳನ್ನು ಕಟಾವು ಮಾಡುವಾಗ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದರು.
ಉಪ ತಹಶೀಲ್ದಾರ್ ಲೋಕೇಶ್, ಕಂದಾಯ ನಿರೀಕ್ಷಕ ಅಜ್ಜಪ್ಪ ಪತ್ರಿ, ರೈತ ಮುಖಂಡರಾದ ಬಲ್ಲೂರು ರವಿಕುಮಾರ್, ಅನಗೋಡು ಭೀಮಣ್ಣ, ಪಾಮೇನಹಳ್ಳಿ ಲಿಂಗರಾಜ್, ಮಾಯಕೊಂಡ ಪ್ರತಾಪ್, ನಿಂಗಣ್ಣ, ಗೌಡ್ರ ಅಶೋಕ್, ಮೇದೆಕೆರಪ್ಪ, ಭರತ್, ಹಿಂಡಸಘಟ್ಟೆ ಹನುಮಂತಪ್ಪ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.