ಕೋವಿಡ್‌ ಸೋಂಕು ನಿಯಂತ್ರಣಕ್ಕೆ ಕ್ರಮ: ಚಂದ್ರಪ್ಪ


Team Udayavani, May 8, 2021, 4:47 PM IST

ಕೋವಿಡ್‌ ಸೋಂಕು ನಿಯಂತ್ರಣಕ್ಕೆ ಕ್ರಮ: ಚಂದ್ರಪ್ಪ

ಹೊಳಲ್ಕೆರೆ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ 50 ಬೆಡ್‌, ಬಿ.ದುರ್ಗದಲ್ಲಿ 30 ಬೆಡ್‌ಗಳ ಸುಸಜ್ಜಿತ ಕೋವಿಡ್‌ ಆಸ್ಪತ್ರೆ, ಮೊರಾರ್ಜಿವಸತಿ ಶಾಲೆಗಳಲ್ಲಿ 120 ಬೆಡ್‌ಗಳ ಕ್ವಾರಂಟೈನ್‌ ಕೇಂದ್ರ ಸ್ಥಾಪಿಸಿ ಕೋವಿಡ್‌ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಹಾಗೂ ಶಾಸಕ ಎಂ. ಚಂದ್ರಪ್ಪ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ  ಶುಕ್ರವಾರ ಅಧಿಕಾರಿಗಳೊಂದಿಗೆ ಕೋವಿಡ್‌ ನಿಯಂತ್ರಣ ಸಂಬಂಧ ಸಭೆ ನಡೆಸಿ ಅವರು ಮಾತನಾಡಿದರು. ನಮ್ಮ ಪ್ರಾಣ, ನಮ್ಮರಕ್ಷಣೆ, ಜೀವ ಇದ್ದರೆ ಜೀವನ ಎನ್ನುವುದನ್ನು ಜನರು ಅರಿತುಕೊಂಡು ಕೋವಿಡ್‌ ವಿರುದ್ಧ ಹೋರಾಟಕ್ಕೆ ಸಜ್ಜಾಗಬೇಕು.ಕೋವಿಡ್‌ ನಿಯಂತ್ರಣಕ್ಕೆ ಸರ್ಕಾರದಿಂದಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿದ್ದು, ಸೋಂಕುಬಾರದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದರು.

ತಾಲೂಕಿನಲ್ಲಿ ಕೋವಿಡ್‌ನ‌ ಗಂಭೀರತೆ ಇಲ್ಲದಿದ್ದರೂ ಮುನ್ನೆಚ್ಚರಿಕೆ ಕ್ರಮತೆಗೆದುಕೊಂಡು ಕೋವಿಡ್‌ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. 114 ಸಕ್ರಿಯಪ್ರಕರಣಗಳಲ್ಲಿ 97 ಮಂದಿ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. 8 ಸೊಂಕಿತರಿಗೆ ಬಿ.ದುರ್ಗ ಕೋವಿಡ್‌ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಾಲೂಕು ಆಸ್ಪತ್ರೆಯಲ್ಲಿ 50 ಹಾಸಿಗೆ ಕೋವಿಡ್‌ ಹೆಲ್ತ್‌ ಸೆಂಟರ್‌ ವ್ಯವಸ್ಥೆ ಮಾಡಿ, 30 ಆಕ್ಸಿಜನ್‌ ಸಿಲಿಂಡರ್‌ ನೀಡಲಾಗಿದೆ. ಜತೆಗೆ ಕಿತ್ತೂರು ರಾಣಿ ಚೆನ್ನಮ್ಮ, ಮೊರಾರ್ಜಿ ದೇಸಾಯಿಹಾಗೂ ಬೊಮ್ಮನಕಟ್ಟೆ ವಸತಿ ಶಾಲೆಯಲ್ಲಿತಲಾ 60 ಜನರಿರುವಂತೆ 120 ಬೆಡ್‌ಗಳ 3ಕ್ವಾರಂಟೈನ್‌ ಕೇಂದ್ರ ಸ್ಥಾಪಿಸಲಾಗಿದೆ. ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ಪಿಜಿಶಿಯನ್‌ ನೇಮ ಮಾಡುವುದಾಗಿ ತಿಳಿಸಿದರು.

ಪಟ್ಟಣ ಹಾಗೂ ತಾಲೂಕಿನ ಜನರಿಗೆ ಕೋವಿಡ್‌ ಡೋಸ್‌ ನೀಡಲು ಕೋವ್ಯಾಕ್ಸಿನ್‌ಹಾಗೂ ಕೊವಿಶೀಲ್ಡ್‌ 4 ಸಾವಿರ ಡೋಸ್‌ ಲಸಿಕೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ದಾಸ್ತಾನುಮಾಡಲಾಗಿದೆ. 18 ವರ್ಷದ ಮೇಲ್ಪಟ್ಟವರಿಗೆಶೀಘ್ರದಲ್ಲಿ ಲಸಿಕೆ ನೀಡಲಾಗುತ್ತದೆ ಎಂದರು. ಆಸ್ಪತ್ರೆಯಲ್ಲಿ ವೆಂಟಿಲೇಟರ್‌ ಇದ್ದು,ತಜ್ಞ ವೈದ್ಯರು, ತಾಂತ್ರಿಕ ಸಿಬ್ಬಂದಿ ನೇಮಕ ಮಾಡಬೇಕು ಎಂದು ವೈದ್ಯಾಧಿ ಕಾರಿ ಡಾ| ಕೃಷ್ಣಮೂರ್ತಿ ಮನವಿ ಮಾಡಿದರು. ಆರೋಗ್ಯಸಚಿವರೊಂದಿಗೆ ಮಾತನಾಡಿ ಇಲ್ಲಿಗೆ ಬೇಕಾದ ವೈದ್ಯಕೀಯ ಉಪಕರಣ, ವೈದ್ಯರು, ಸಿಬ್ಬಂದಿಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಶಾಸಕರು ಭರವಸೆ ನೀಡಿದರು.

ಎಲ್ಲಾ ಕಡೆ ಪೊಲೀಸ್‌ ಸಿಬ್ಬಂದಿಗಳನ್ನು ನಿಯೋಜಿಸಿ ರಸ್ತೆ ಸಂಚಾರ, ಜನಜಂಗುಳಿನಿಯಂತ್ರಿಸಿ. ಜನರಿಗೆ ಕೋವಿಡ್‌ ಅರಿವು ಮೂಡಿಸಿ ರಸ್ತೆಗೆ ಬಾರದಂತೆ ತಿಳಿಸಿ. ರಸ್ತೆಮೇಲೆ ನಿಂತು ಕಾಲಹರಣ ಮಾಡುವುದನ್ನು ನಿಲ್ಲಿಸಿ ಎಂದು ಪಿಎಸ್‌ಐ ವಿಶ್ವನಾಥ್‌ ಅವರನ್ನುತರಾಟೆಗೆ ತೆಗೆದುಕೊಂಡರು. ಪುರಸಭೆಉಪಾಧ್ಯಕ್ಷ ಕೆ.ಸಿ. ರಮೇಶ್‌, ತಹಶೀಲ್ದಾರ್‌ ರಮೇಶ ಆಚಾರಿ, ತಾಲೂಕು ಆರೋಗ್ಯಾಧಿಕಾರಿ ಡಾ| ಜಯಸಿಂಹ, ತಾಪಂ ಇಒ ಗಂಗಣ್ಣ, ಪುರಸಭೆ ಮುಖ್ಯಾಧಿಕಾರಿ ವಾಸಿಂ ಇದ್ದರು

ಟಾಪ್ ನ್ಯೂಸ್

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Vijay Hazare Trophy; Abhinav Manohar’s brilliant century; Karnataka won easily against Arunchal Pradesh

Vijay Hazare Trophy; ಅಭಿನವ್‌ ಮನೋಹರ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

12

Mangaluru: ಕಾಂಕ್ರೀಟ್‌ ರಸ್ತೆ ನಿರ್ಮಿಸಿದರೂ ಫುಟ್‌ಪಾತ್‌ ಇಲ್ಲ

11

Mangaluru: ಕರಾವಳಿ ಉತ್ಸವ; ಅರಣ್ಯ ಅನುಭವ!

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

10(1

Mangaluru: ನಗರದ 18 ಕಡೆಗಳಲ್ಲಿ ಪೇ ಪಾರ್ಕಿಂಗ್‌

9(1

Kundapura: ಟಿಟಿ ರೋಡ್‌ನ‌ಲ್ಲಿವೆ 4 ಬಾವಿ; ನೀರಿದೆ, ನಿರ್ವಹಣೆಯೇ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.