ಮೆಡಿಕಲ್‌ ಕಾಲೇಜಿಗೆ ಡೀನ್‌ ನೇಮಕಕ್ಕೆ ಆಗ್ರಹ


Team Udayavani, Feb 10, 2021, 4:27 PM IST

medical protest

ಚಿತ್ರದುರ್ಗ: ಏಳು ವರ್ಷಗಳ ಹಿಂದೆ ಚಿತ್ರದುರ್ಗಕ್ಕೆ ಸರ್ಕಾರಿ ಮೆಡಿಕಲ್‌ ಕಾಲೇಜು ಮಂಜೂರಾಗಿದ್ದರೂ, ಈವರೆಗೆ ಭೂಮಿಪೂಜೆ ನೆರವೇರಿಸಿಲ್ಲ. ಅಲ್ಲದೆ ಡೀನ್‌ ನೇಮಕ ಮಾಡಿಲ್ಲ ಎಂದು ಆರೋಪಿಸಿ ಕರ್ನಾಟಕ ನವನಿರ್ಮಾಣ ಸೇನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಗಾಂಧಿ ವೃತ್ತದಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು, ಜಿಲ್ಲೆಯ ಶಾಸಕರು, ಸಚಿವರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮೆಡಿಕಲ್‌ ಕಾಲೇಜಿಗೆ ಸರ್ಕಾರದಲ್ಲಿ ಹಣವಿಲ್ಲ. ಭಿಕ್ಷೆ ಎತ್ತಿ ಎಂದು ಹೇಳಿರುವ ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಮೊದಲು ರಾಜೀನಾಮೆ ನೀಡಲಿ. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ವಿಧಾನ ಪರಿಷತ್‌ ಸದಸ್ಯರು  ಚಿತ್ರದುರ್ಗಕ್ಕೆ ಮೆಡಿಕಲ್‌ ಕಾಲೇಜು ಮಂಜೂರಾಗಿರುವುದಕ್ಕೆ ಹಣ ಬಿಡುಗಡೆಗೊಳಿಸುವಂತೆ ಎಲ್ಲಿಯೂ ಚಕಾರ ಎತ್ತುತ್ತಿಲ್ಲ. ಮುಖ್ಯಮಂತ್ರಿ 50 ಕೋಟಿ ರೂ.ಗಳನ್ನು ಘೋಸಷಿಸಿದ್ದು, ಈವರೆಗೆ ನಯಾಪೈಸೆಯೂ ಬಿಡುಗಡೆಯಾಗದಿರುವುದು ಜಿಲ್ಲೆಯ ಜನರ ದೌರ್ಭಾಗ್ಯ ಎಂದರು.

ಇದನ್ನೂ ಓದಿ :ಜೀತ ಮುಕ್ತ ಜಿಲ್ಲೆಯಾಗಿಸಲು ಪಣ ತೊಡಿ

ದೊಡ್ಡಬಳ್ಳಾಪುರ, ಉಡುಪಿ, ಕೊಪ್ಪಳ ಜಿಲ್ಲೆಗಳಿಗೆ ಮೆಡಿಕಲ್‌ ಕಾಲೇಜಿಗೆ ಹಣ ಬಿಡುಗಡೆಗೊಳಿಸಿರುವ ರಾಜ್ಯ ಸರ್ಕಾರ, ಮಧ್ಯ ಕರ್ನಾಟಕದ ಚಿತ್ರದುರ್ಗ ಜಿಲ್ಲೆಯನ್ನು ಕಡೆಗಣಿಸುತ್ತಲೇ ಬರುತ್ತಿದೆ. ಜಿಲ್ಲೆಯ ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯೇ ಇದಕ್ಕೆ ಕಾರಣ. ಕೂಡಲೇ ಚಿತ್ರದುರ್ಗ ಮೆಡಿಕಲ್‌ ಕಾಲೇಜಿಗೆ ಹಣ ಮಂಜೂರು ಮಾಡಿ ಡೀನ್‌ ನೇಮಕ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಶಾಸಕರುಗಳ ನಿವಾಸದ ಎದುರು ಪ್ರತಿಭಟನೆ ನಡೆಸಿ ಭಿಕ್ಷೆ ಎತ್ತಿ ಸರ್ಕಾರಕ್ಕೆ ಹಣ ನೀಡುವುದಾಗಿ ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ಕೆ.ಟಿ. ಶಿವಕುಮಾರ್‌ ಎಚ್ಚರಿಸಿದರು.

ಕರ್ನಾಟಕ ನವ ನಿರ್ಮಾಣ ಸೇನೆ ತಾಲೂಕು ಅಧ್ಯಕ್ಷ ಟಿ. ಆನಂದ್‌, ಯುವ ಘಟಕದ ಅಧ್ಯಕ್ಷ ಶಶಾಂಕ್‌, ನಗರ ಘಟಕದ ಅಧ್ಯಕ್ಷ ಗೋಪಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಾ ಗೌರಣ್ಣ, ಸುನಂದಮ್ಮ, ನಾಗರತ್ನ,  ರತ್ನಮ್ಮ, ಓಬಳೇಶ, ರಘು, ಪ್ರವೀಣ್‌, ಮಾರುತಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.