ಸರ್ಕಾರವೇ ಎಲ್ಲವನ್ನೂ ಮಾಡಲು ಸಾಧ್ಯವಿಲ್ಲ,ಜನರೂ ನಿಯಂತ್ರಣ ಮಾಡಿಕೊಳ್ಳಬೇಕು: ಜಗದೀಶ್ ಶೆಟ್ಟರ್
Team Udayavani, May 6, 2021, 12:24 PM IST
ಚಿತ್ರದುರ್ಗ: ಸರ್ಕಾರ ಎಲ್ಲವನ್ನೂ ಮಾಡಲು ಆಗುವುದಿಲ್ಲ, ಸಾರ್ವಜನಿಕರು ಸ್ವತಃ ನಿಯಂತ್ರಣ ಮಾಡಿಕೊಳ್ಳಬೇಕು. ಕಡ್ಡಾಯ ಮಾಸ್ಕ್, ದೈಹಿಕ ಅಂತರದ ಕುರಿತು ಜಾಗೃತಿ ಬರಬೇಕು ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 12ರ ನಂತರ ಸಂಪೂರ್ಣ ಲಾಕ್ ಡೌನ್ ಮಾಡುವ ಕುರಿತು ಚರ್ಚೆಗೆ ಇನ್ನೂ ಆರು ದಿನ ಬಾಕಿ ಇದೆ. ಕೇಂದ್ರ ಸರ್ಕಾರವೂ ಕೂಡಾ ಆಕ್ಸಿಜನ್ ಕುರಿತು ನಿರ್ಧಾರ ಮಾಡುತ್ತದೆ. ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಆದಷ್ಟು ಬೇಗನೆ ಸರಿ ಆಗುತ್ತದೆ. ವೆಂಟಿಲೇಟರ್ ಅವಶ್ಯಕತೆ ವೈದ್ಯರು, ಜಿಲ್ಲಾಡಳಿತ ನಿರ್ಧಾರ ಮಾಡಬೇಕು. ಆಕ್ಸಿಜನ್, ರೆಮಿಡಿಸಿವಿಯರ್ ಕೊರತೆ ಆಗದಂತೆ ಎಲ್ಲವನ್ನು ಮಾಡುತ್ತಿದ್ದೇವೆ. ಎಲ್ಲವೂ ಸರಿ ಹೋಗುತ್ತದೆ ಎಂಬ ನಂಬಿಕೆಯಿದೆ ಎಂದರು.
ಇದನ್ನೂ ಓದಿ:ಮತ್ತೆ ಏರಿದ ಕೋವಿಡ್ ಸೋಂಕಿತರ ಸಂಖ್ಯೆ: ದೇಶದಲ್ಲಿ ಒಂದೇ ದಿನ 4.12 ಲಕ್ಷ ಹೊಸ ಸೋಂಕಿತರು!
ರಾಜ್ಯದ ಮುಖ್ಯಮಂತ್ರಿಗಳು ಹೆಚ್ಚಿನ ಜವಬ್ದಾರಿ ನೀಡಿದ್ದಾರೆ. ಇದರಿಂದ ರಾಜ್ಯದಲ್ಲಿ ನಾನು ಓಡಾಡುತ್ತಿದ್ದೇನೆ. ನಿನ್ನೆ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ , ಪ್ರಹ್ಲಾದ ಜೋಶಿ ಜೊತೆ ಆಕ್ಸಿಜನ್ ಕುರಿತಂತೆ ಚರ್ಚಿಸಿದ್ದೇನೆ. ನಮ್ಮ ರಾಜ್ಯಕ್ಕೆ ಹೆಚ್ಚು ಆಕ್ಸಿಜನ್ ನೀಡಬೇಕು ಎಂದು ಒತ್ತಾಯ ಮಾಡಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.