ಕಣಕುಪ್ಪೆ ಗ್ರಾಮ ಅಭಿವೃದ್ಧಿಗೆ ಬದ್ದ
ಮನೆ ಬಾಗಿಲಿಗೆ ಸೌಲಭ್ಯ ತಲುಪಿಸಲು "ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ' ಕಾರ್ಯಕ್ರಮ ಸಹಕಾರಿ: ಶ್ರೀರಾಮುಲು
Team Udayavani, Feb 22, 2021, 7:06 PM IST
ಮೊಳಕಾಲ್ಮೂರು: ಗ್ರಾಮ ವಾಸ್ತವ್ಯಕ್ಕೆ ಆಯ್ಕೆ ಮಾಡಿಕೊಂಡಿದ್ದ ಗಡಿ ಭಾಗದ ಕಣಕುಪ್ಪೆ ಗ್ರಾಮದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿ ಮೂಲ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಮಾಜಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಭರವಸೆ ನೀಡಿದರು.
ತಾಲೂಕಿನ ತಮ್ಮೇನಹಳ್ಳಿ ಗ್ರಾಪಂ ವ್ಯಾಪ್ತಿಯ ಕಣಕುಪ್ಪೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಿದ್ದ “ಜಿಲ್ಲಾ ಧಿಕಾರಿಗಳ ನಡೆ ಗ್ರಾಮದ ಕಡೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಸತಿ ರಹಿತರಿಗೆ ವಸತಿ ಸೌಲಭ್ಯ, ಪಡಿತರ ಕಾರ್ಡ್, ಭಾಗ್ಯಲಕ್ಷ್ಮೀ ಬಾಂಡ್, ಕುಡಿಯುವ ನೀರು, ರಸ್ತೆಗಳು, ಬೀದಿದೀಪಗಳು, ಗಂಗಾಕಲ್ಯಾಣ ಸೇರಿದಂತೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಈ ಗ್ರಾಮಸ್ಥರ ಮನೆ ಬಾಗಿಲಿಗೆ ತಲುಪಿಸಲಿರುವ ಈ ಕಾರ್ಯಕ್ರಮ ಉತ್ತಮ ಕಾರ್ಯಕ್ರಮವಾಗಿದೆ. ಈಗಾಗಲೇ ಅಲೆಮಾರಿ ಮತ್ತು ಅರೆ ಅಲೆಮಾರಿಗಳಿಗಾಗಿ 2,500 ಮನೆಗಳು ಮಂಜೂರಾಗಿದ್ದು, ಇದರ ಪ್ರಯೋಜನವನ್ನು ಪಡೆದುಕೊಂಡು ಪ್ರಗತಿ ಹೊಂದಬೇಕೆಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ನಂದಿನಿ ದೇವಿ,ಜಿಲ್ಲಾ ಸಮಾಜಕಲ್ಯಾಧಿ ಕಾರಿ ಮಮತಾ, ತಹಶೀಲ್ದಾರ್ ಬಿ.ಆರ್. ಆನಂದಮೂರ್ತಿ, ಉಪ ತಹಶೀಲ್ದಾರ್ ಡಿ. ಮಹಾಂತೇಶ್, ಶಿರಸ್ತೇದಾರ ಏಳುಕೋಟಿ, ತಾಪಂ ಕಾರ್ಯನಿರ್ವಹಣಾ ಧಿಕಾರಿ ಪ್ರಕಾಶ್, ಕ್ಷೇತ್ರ ಶಿಕ್ಷಣಾಧಿ ಕಾರಿ ಯುವರಾಜ್ ನಾಯ್ಕ, ಬಿಆರ್‌ಸಿ ಹನುಮಂತಪ್ಪ, ತಾಲೂಕು ಸಮಾಜ ಕಲ್ಯಾಣಾಧಿ ಕಾರಿ ಪ್ರೇಮನಾಥ, ಸಿಡಿಪಿಒ ಸವಿತಾ, ತಾಲೂಕು ಆರೋಗ್ಯಾಧಿಕಾರಿ ಡಾ| ಸುಧಾ, ಕೃಷಿ ಇಲಾಖೆಯ ಉಮೇಶ್, ಪಶು ಇಲಾಖೆಯ ಡಾ| ತಿಮ್ಮಣ್ಣ, ಕಂದಾಯ ನಿರೀಕ್ಷಕರಾದ ಗೋಪಾಲ್, ಪ್ರಾಣೇಶ್, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಓಬಣ್ಣ, ಗ್ರಾಮ ಲೆಕ್ಕಾಧಿಕಾರಿಗಳು, ಮುಖಂಡರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ಭಾನುವಾರ ಬೆಳಿಗ್ಗೆ ಜಿಲ್ಲಾಧಿ ಕಾರಿ ಕವಿತಾ ಎಸ್. ಮನ್ನಿಕೇರಿ ಕಣಕುಪ್ಪೆ ಗ್ರಾಮದಿಂದ ಜಿಲ್ಲಾ ಕೇಂದ್ರಕ್ಕೆ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.