ಬಲಿಷ್ಠ ಭಾರತಕ್ಕೆ ಮೋದಿ ನಾಯಕತ್ವ ಅಗತ್ಯ: ಚಂದ್ರಪ್ಪ

Team Udayavani, Apr 1, 2019, 5:45 PM IST

cta-1
ಹೊಳಲ್ಕೆರೆ: ವಿಶ್ವದಲ್ಲಿ ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿಸಲು ಮತ್ತೂಮ್ಮೆ ಮೋದಿ ಪ್ರಧಾನ ಮಂತ್ರಿಯಾಗಬೇಕು. ಹಾಗಾಗಿ ಬಿಜೆಪಿ ಕಾರ್ಯಕರ್ತರು ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಶಾಸಕ ಎಂ .ಚಂದ್ರಪ್ಪ ಕರೆ ನೀಡಿದರು.
ಪಟ್ಟಣದಲ್ಲಿ ಬಿಜೆಪಿ ಶಕ್ತಿ ಕೇಂದ್ರಗಳ ಪದಾಧಿಕಾರಿಗಳಿಗೆ ನಡೆದ ಚುನಾವಣಾ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ಚುನಾವಣೆಯಲ್ಲಿ ಗೆದ್ದು ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವುದು ಎಲ್ಲರ ಗುರಿ. ಹಾಗಾಗಿ ಇಲ್ಲಿ ಸ್ಪರ್ಧಿಸುತ್ತಿರುವ ವ್ಯಕ್ತಿಗಿಂತ ಪಕ್ಷವೇ ಮುಖ್ಯ. ಹಾಗಾಗಿ ದೇಶದಲ್ಲಿ ಮೋದಿ ನೇತೃತ್ವದ ಸರ್ಕಾರ ಮತ್ತೆ ಬರಬೇಕು. ಈ
ನಿಟ್ಟಿನಲ್ಲಿ ಶಕ್ತಿ ಕೇಂದ್ರ ಹಾಗೂ ಬೂತ್‌ ಮಟ್ಟದ ಕಾರ್ಯಕರ್ತರು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕೆಂದರು.
ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಜನತೆ ಬಿಜೆಪಿಗೆ 1.80 ಲಕ್ಷ ಮತಗಳನ್ನು ನೀಡಿ ಗೆಲ್ಲಿಸಿದ್ದಾರೆ. ಅದೇ ರೀತಿ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 1.50 ಲಕ್ಷ ಮತಗಳಾದರೂ ಪಕ್ಷಕ್ಕೆ ಬರಬೇಕು. ಮೋದಿ ಹಾಗೂ ಯಡಿಯೂರಪ್ಪ ಅಲೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದೆ. ಹಾಗಾಗಿ ಪಕ್ಷದ ಕಾರ್ಯಕರ್ತರು ಎಲ್ಲಾ ಮತದಾರರನ್ನು ಸಂಪರ್ಕಿಸಿ ಮತದಾನ ಮಾಡುವಂತೆ ಮನವಿ ಮಾಡಬೇಕು ಎಂದು ತಿಳಿಸಿದರು.
ಆರೆಸ್ಸೆಸ್‌ ರಾಜ್ಯ ಸಂಘಟನಾ ಸಂಚಾಲಕ ಬಸವರಾಜ್‌ ಮಾತನಾಡಿ, ಪ್ರಧಾನಿ ಮೋದಿ ದೇಶವನ್ನು ಬಲಿಷ್ಠವಾಗಿ ಕಟ್ಟುತ್ತಿದ್ದಾರೆ. ವಿಶ್ವ ಮಟ್ಟದಲ್ಲಿ ಭಾರತಕ್ಕೆ ವಿಶೇಷ ಸ್ಥಾನಮಾನ ತಂದುಕೊಟ್ಟಿದ್ದಾರೆ. ದೇಶದ ಮೇಲೆ ನಡೆಯುತ್ತಿರುವ ವಿದೇಶಿ ಉಪಟಳ, ಕಾಶ್ಮಿರ, ಚೀನಾ, ಪಾಕಿಸ್ತಾನ ಸಮಸ್ಯೆಗಳನ್ನು ಮೆಟ್ಟಿ ನಿಲ್ಲುತ್ತಿದ್ದಾರೆ. ದೇಶ ವಿರೋಧಿ ಶಕ್ತಿಗಳು ಮೋದಿಯನ್ನು ಮಟ್ಟ ಹಾಕಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿವೆ. ಅದಕ್ಕೆ ಅವಕಾಶ ನೀಡದೆ ಮತ್ತೂಮ್ಮೆ ಮೋದಿಯನ್ನು ಪ್ರಧಾನಿಯನ್ನಾಗಿಸಲು ಎಲ್ಲರೂ ಸಹಕಾರ ನೀಡಬೇಕೆಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ. ನವೀನ್‌ ಮಾತನಾಡಿ, ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ಬಿಜೆಪಿ ಭದ್ರಕೋಟೆ. ಹಾಗಾಗಿ ಕಳೆದ ಚುನಾವಣೆಗಿಂತಲೂ ಅಧಿಕ ಮತಗಳು ಬಿಜೆಪಿ ಪಕ್ಷಕ್ಕೆ ಬರಬೇಕು. ಚಿತ್ರದುರ್ಗದಲ್ಲಿ ನಡೆಯಲಿರುವ ಪ್ರಧಾನಿ ಮೋದಿಯವರ ರ್ಯಾಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದರು. ಜಿಲ್ಲಾ ಕಾರ್ಯದರ್ಶಿ ಮಲ್ಲಿಕಾರ್ಜುನ್‌, ತಾಲೂಕು ಅಧ್ಯಕ್ಷ ಮಹೇಶ್ವರಪ್ಪ, ಜಿಪಂ ಮಾಜಿ ಅಧ್ಯಕ್ಷ ಎಲ್‌.ಬಿ. ರಾಜಶೇಖರ್‌, ರಾಮಗಿರಿ
ರಾಮಣ್ಣ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.