ಜನಸಾಮಾನ್ಯರಲ್ಲಿ ಕೊರೊನಾ ಜಾಗೃತಿ ಮೂಡಿಸಿ
Team Udayavani, Apr 7, 2020, 4:29 PM IST
ಮೊಳಕಾಲ್ಮೂರು: ಆಶಾ ಕಾರ್ಯಕರ್ತೆಯರಿಗೆ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಿ. ಚಿದಾನಂದಪ್ಪ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ| ಪದ್ಮಾವತಿ ಕರಪತ್ರ ವಿತರಿಸಿದರು.
ಮೊಳಕಾಲ್ಮೂರು: ತಾಲೂಕಿನ ಸಾರ್ವಜನಿಕ ಬಸ್ ನಿಲ್ದಾಣ, ಆಸ್ಪತ್ರೆಗಳು, ಅಂಗನವಾಡಿ ಕೇಂದ್ರಗಳು
ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಕೊರೊನಾ ವೈರಸ್‌ನ ಭಿತ್ತಿ ಪತ್ರ ಹಚ್ಚುವ ಜೊತೆಗೆ ಕರ ಪತ್ರಗಳನ್ನು ಮನೆ ಮನೆಗೆ ಹಂಚುವ ಮೂಲಕ ಜನಸಾಮಾನ್ಯರಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಿ. ಚಿದಾನಂದಪ್ಪ ತಿಳಿಸಿದರು.
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಕೊರೊನಾ ವೈರಸ್ ಸೋಂಕಿನ ಬಿತ್ತಿ ಪತ್ರ ಮತ್ತು ಕರಪತ್ರ ತಾಲೂಕಿನ ಆರೋಗ್ಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರಿಗೆ ವಿತರಿಸಿ ಅವರು ಮಾತನಾಡಿದರು. ತಾಲೂಕಿನ ಆರೋಗ್ಯ ಸಹಾಯಕರು ಮತ್ತು ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಹೋಗಿ ಕೊರೊನಾ ವೈರಸ್ ನ ಕರಪತ್ರಗಳನ್ನು ಹಂಚಿ, ಕೊರೊನಾ ವೈರಸ್ ಹರಡದಂತೆ ಜಾಗೃತಿ ಮೂಡಿಸುವುದು ಆದ್ಯ ಕರ್ತವ್ಯವಾಗಿದೆ. ಜಾಗೃತಿ ಮೂಡಿಸುವಾಗ ಸಾಮಾಜಿಕ ಅಂತರ ಕಾಪಾಡುವಂತೆ ಜಾಗೃತಿ ಮೂಡಿಸಬೇಕಾಗಿದೆ ಎಂದರು.
ಗ್ರಾ.ಪಂಗಳಲ್ಲಿ 14ನೇ ಹಣಕಾಸಿನ ಅನುದಾನ ಬಳಸಿ 60 ವರ್ಷದವರು ಮತ್ತು ದೀರ್ಘ ಕಾಯಿಲೆಯವರಿಗೆ ಉಚಿತ ಮಾಸ್ಕ್ ಸೌಲಭ್ಯ ಕಲ್ಪಿಸಬಹುದಾಗಿದೆ. ತಾಲೂಕಿನಲ್ಲಿ ಸರ್ವೇ ಮಾಡಿಸಿ 1,469ರ ಜನರ ಮೇಲೆ ನಿಗಾ ವಹಿಸಲಾಗಿದೆ. ತಾಲೂಕಿಗೆ ವಿದೇಶದಿಂದ ಬಂದ 5 ಜನರ ಕ್ವಾರೆಂಟೈನ್ ಅವಧಿ ಮುಗಿದಿದೆ. ಹೊರಜಿಲ್ಲೆಗಳಿಂದ ಹಾಗೂ ಹೊರರಾಜ್ಯಗಳಿಂದ 1,469 ಜನರು ಬಂದಿದ್ದು, ಅವರ ಮೇಲೆ ನಿಗಾವಹಿಸಲಾಗುವುದು ಎಂದು ತಿಳಿಸಿದರು. ಪ್ರಭಾರೆ ತಾಲೂಕು ಆರೋಗ್ಯಾಧಿಕಾರಿ ಡಾ| ಪದ್ಮಾವತಿ, ಜಿಲ್ಲಾ ಆರೋಗ್ಯ ಮೇಲ್ವಿಚಾರಕರಾದ ತಿಪ್ಪೇಸ್ವಾಮಿ, ಶ್ರೀನಿವಾಸ್, ಆಶಾ ಮೇಲ್ವಿಚಾರಕಿ ಉಷಾ, ಎಲ್.ಎಚ್.ಎಂ. ಸವಿತಾ, ಆರ್‌ಬಿಎಸ್‌ಕೆ ವೈದ್ಯಾಧಿಕಾರಿ ಡಾ| ಗೋವಿಂದರಾಜು, ಡಾ| ರಾಘವೇಂದ್ರ ಬಾಬು, ಆರೋಗ್ಯ ಸಹಾಯಕರು ಮತ್ತು ಆಶಾ ಸುಗಮಕಾರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.