ಆಂಬ್ಯುಲೆನ್ಸ್‌ ಸೌಲಭ್ಯಕ್ಕೆ ಆಗ್ರಹ


Team Udayavani, Jun 15, 2020, 1:42 PM IST

1-June-15

ಮೊಳಕಾಲ್ಮೂರು: ಪಟ್ಟಣದ ಸರ್ಕಾರಿ ಆಸ್ಪತ್ರೆಗೆ 108 ಆಂಬ್ಯುಲೆನ್ಸ್‌ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಸಾರ್ವಜನಿಕರು ಪ್ರತಿಭಟಿಸಿದರು.

ಮೊಳಕಾಲ್ಮೂರು: ರಾಜ್ಯದ ಆರೋಗ್ಯ ಸಚಿವ ಬಿ. ಶ್ರೀರಾಮುಲು ತಮ್ಮ ಸ್ವಕ್ಷೇತ್ರದಲ್ಲಿನ ತಾಲೂಕು ಕೇಂದ್ರದ ಸರ್ಕಾರಿ ಆಸ್ಪತ್ರೆಗೆ 108 ಆಂಬ್ಯುಲೆನ್ಸ್‌ ಸೌಲಭ್ಯ ಕಲ್ಪಿಸುವಲ್ಲಿ ವಿಫಲವಾಗಿರುವುದು ಈ ಕ್ಷೇತ್ರದ ದುರಂತ ಸಂಗತಿಯಾಗಿದೆ ಎಂದು ಪ್ರತಿಭಟನಾ ನಿರತ ಮುಖಂಡ ಜಿ. ಓಬಣ್ಣ ಆರೋಪಿಸಿದ್ದಾರೆ.

ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಎದುರು 108 ಆಂಬ್ಯುಲೆನ್ಸ್‌ ಸೌಲಭ್ಯಕ್ಕಾಗಿ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ತಾಲೂಕಿನಲ್ಲಿ ರಸ್ತೆ ಅಪಘಾತದ ಗಾಯಾಳುಗಳು ಹಾಗೂ ರೋಗಿಗಳನ್ನು ಆಸ್ಪತ್ರೆಗೆ ಕರೆ ತರಲು ನಿಯೋಜಿಸಿರುವ 108 ಆಂಬ್ಯುಲೆನ್ಸ್‌ ಸೌಲಭ್ಯವಿಲ್ಲದ ಕಾರಣ ಜನತೆ ಕಂಗಾಲಾಗಿದ್ದಾರೆ. ಜೂ. 14 ರಂದು ತಾಲೂಕಿನ ನೇರ‌್ಲಹಳ್ಳಿ ಗ್ರಾಮದ ಸಮೀಪದ ಈರಣ್ಣನ ಮರಗಳ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು 108 ತುರ್ತು ವಾಹನವು ಸಕಾಲಕ್ಕೆ ಬಾರದ ಕಾರಣ ಖಾಸಗಿ ವಾಹನಗಳಲ್ಲಿ ಆಸ್ಪತ್ರೆಗೆ ಕರೆತರಲಾಗಿದೆ.

ಆಂಬ್ಯುಲೆನ್ಸ್‌ ಸೌಲಭ್ಯವಿಲ್ಲದೆ ಸುಮಾರು 6 ತಿಂಗಳಾದರೂ ಕ್ಷೇತ್ರದ ಶಾಸಕ, ಸಚಿವ ಬಿ.ಶ್ರೀರಾಮುಲು, ಅಧಿಕಾರಿಗಳು ಗಮನಹರಿಸದೆ ನಿರ್ಲಕ್ಷವಹಿಸಿದ್ದಾರೆ. ಈ ನಿರ್ಲಕ್ಷದಿಂದ ಅನಾರೋಗ್ಯಪೀಡಿತರು ಖಾಸಗಿ ವಾಹನಗಳಿಗೆ ಹೆಚ್ಚಿನ ಬಾಡಿಗೆ ಹಣ ತೆತ್ತು ದೂರದ ನಗರ ಪ್ರದೇಶದ ಆಸ್ಪತ್ರೆಗಳಿಗೆ ಹೋಗುವ ದುಸ್ಥಿತಿ ನಿರ್ಮಾಣವಾಗಿದೆ. 108 ತುರ್ತು ವಾಹನವು ರಿಪೇರಿಗೆ ಹೋಗಿದೆ ಎಂದು ಹೇಳಿಕೊಂಡು ಗರ್ಭಿಣಿ ಮತ್ತು ಬಾಣಂತಿಯರಿಗೆ ಕಲ್ಪಿಸಿದ್ದ ನಗು ಮಗು ವಾಹನವನ್ನೇ ಬಳಸಿಕೊಂಡು ಆ ವಾಹನವೂ ಸಹ ರಿಪೇರಿ ಸ್ಥಿತಿಗೆ ತಲುಪಿದೆ. ಸಚಿವರು ಕೂಡಲೇ ತಾಲೂಕಿನ ಬಡ ಜನತೆಯ ಆರೋಗ್ಯ ರಕ್ಷಣೆಗಾಗಿ ಆಂಬ್ಯುಲೆನ್ಸ್‌ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು. ಈ ಪ್ರತಿಭಟನೆಯಲ್ಲಿ ಮುಖಂಡ ಮೇಸ್ತ್ರಿ ಬೋರಣ್ಣ, ಓಬಣ್ಣ, ಮಹಮದ್‌ ರಫೀ, ಪಾಲಯ್ಯ, ಈರಣ್ಣ, ಗಣೇಶ್‌, ಮಹೇಶ್‌, ಬೋರಣ್ಣ, ಮರ‌್ಲಹಳ್ಳಿ ಓಬಣ್ಣ, ಬೋಸಯ್ಯ, ಸೂರಯ್ಯ, ರವಿ, ಮಹಾಂತೇಶ್‌, ಟ್ರ್ಯಾಕ್ಟರ್‌ ಬೋರಣ್ಣ ಹಾಗೂ ಹೆಚ್ಚಿನ ಸಾರ್ವಜನಿಕರು ಹಾಜರಿದ್ದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ನಿಯೋಜಿಸಿದ್ದ ಒಂದು ಆಂಬ್ಯುಲೆನ್ಸ್‌ ರಿಪೇರಿಗೆಂದು ತುಮಕೂರಲ್ಲಿದೆ. ಮತ್ತೊಂದು 108 ತುರ್ತು ವಾಹನದ ಚಾಲಕರು 4 ದಿನಗಳಿಗೊಮ್ಮೆ ರಜೆ ಮಾಡುವುದರಿಂದ ಲಭ್ಯವಿಲ್ಲದಾಗಿದೆ. ಈ ಕಾರಣದಿಂದ ನಗು ಮಗು ವಾಹನವನ್ನೇ ಬಳಸಿಕೊಳ್ಳಲಾಗುತ್ತಿದೆ. ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು 108 ಆಂಬ್ಯುಲೆನ್ಸ್‌ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು.
ಡಾ| ಪದ್ಮಾವತಿ, ತಾಲೂಕು
ಆರೋಗ್ಯಾಧಿಕಾರಿಗಳು,
ಮೊಳಕಾಲ್ಮೂರು

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.