ಅಂತೂ ಬೋನಿಗೆ ಬಿದ್ದ ಚಿರತೆ
Team Udayavani, May 13, 2020, 1:28 PM IST
ಮೊಳಕಾಲ್ಮೂರು: ಹಳೇಕೆರೆ ಬಳಿ ಪ್ರತ್ಯಕ್ಷವಾಗಿದ್ದ ಚಿರತೆ ಬೋನಿನಲ್ಲಿ ಸೆರೆಯಾಗಿರುವುದು.
ಮೊಳಕಾಲ್ಮೂರು: ತಾಲೂಕಿನ ಹಾನಗಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳೇಕೆರೆ ಗ್ರಾಮದ ಬಳಿ ಪ್ರತ್ಯಕ್ಷವಾಗಿದ್ದ ಚಿರತೆ ಬೋನಿನಲ್ಲಿ ಸೆರೆಯಾಗಿದೆ.
ಹಳೇಕೆರೆ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಚಿರತೆ ಪ್ರತ್ಯಕ್ಷವಾಗಿದ್ದ ಕಾರಣ ಗ್ರಾಮಸ್ಥರು ಆತಂಕಗೊಂಡು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಹಾಗಾಗಿ ಚಿರತೆ ಸೆರೆ ಹಿಡಿಯಲು ಬೋನು ಇಡಲಾಗಿತ್ತು. ಮಂಗಳವಾರ ಬೆಳಿಗ್ಗೆ 6 ಗಂಟೆ ವೇಳೆಗೆ ಆಹಾರ ಅರಸಿ ಬಂದ ಎರಡು ಚಿರತೆಗಳಲ್ಲಿ ಒಂದು ಚಿರತೆ ಬೋನಿಗೆ ಬಿದ್ದಿದ್ದು, ಮತ್ತೊಂದು ಚಿರತೆ ತಪ್ಪಿಸಿಕೊಂಡಿದೆ. ಸೆರೆಯಾದ ಚಿರತೆಯನ್ನು ಜಿಲ್ಲಾ ಅರಣ್ಯಾಧಿಕಾರಿಗಳ ನಿರ್ದೇಶನದ ಮೇರೆಗೆ ಚಿತ್ರದುರ್ಗದ ಆಡುಮಲ್ಲೇಶ್ವರ ಮೃಗಾಲಯಕ್ಕೆ ರವಾನಿಸಲಾಯಿತು.
ಈ ಸಂದರ್ಭದಲ್ಲಿ ಪಿಎಸ್‌ಐ ಎಂ.ಕೆ. ಬಸವರಾಜ್, ಎಎಸ್‌ಐಗಳಾದ ಜಯಪ್ಪ, ಜಯಣ್ಣ, ಸಿಬ್ಬಂದಿ ಬಾಷಾ, ರಮೇಶ್, ಭೀಮಣ್ಣ, ಅರುಣ್ ಕುಮಾರ್, ಅರಣ್ಯ ಇಲಾಖೆಯ ಸಿಬ್ಬಂದಿ ಮತ್ತು ಗ್ರಾಮಸ್ಥರು ಇದ್ದರು. ಮೊಳಕಾಲ್ಮೂರು ಪಟ್ಟಣದ ಕಲ್‌ಗೋಡ್ ಮೊಹಲ್ಲಾ ಬಳಿಯ ಬೆಟ್ಟದಲ್ಲಿ ಕಾಣಿಸಿಕೊಂಡಿದ್ದ 3 ಚಿರತೆಗಳ ಪೈಕಿ ಒಂದನ್ನು ಪಟ್ಟಣದಲ್ಲಿ ಹಿಡಿಯಲಾಗಿತ್ತು. ಮತ್ತೂಂದನ್ನು ಹಳೇಕೆರೆ ಗ್ರಾಮದ ಬಳಿಯಲ್ಲಿ ಸೆರೆ ಹಿಡಿಯಲಾಗಿದ್ದು, ತಪ್ಪಿಸಿಕೊಂಡಿರುವ ಮೂರನೇ ಚಿರತೆಯನ್ನು ತ್ವರಿತವಾಗಿ ಸೆರೆ ಹಿಡಿದು ಜನರ ಆತಂಕವನ್ನು ನಿವಾರಿಸಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಎಂ.ಪಿ. ನಾಗೇಂದ್ರ ನಾಯಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.