ಕೋವಿಡ್ ವ್ಯಾಪಿಸದಂತೆ ಅಗತ್ಯ ಕ್ರಮ: ಬಸವರಾಜ್
Team Udayavani, Jul 10, 2020, 3:16 PM IST
ಮೊಳಕಾಲ್ಮೂರು: ಲಾಕ್‌ಡೌನ್ ಸಡಿಲಗೊಳಿಸುವಂತೆ ರಾಂಪುರ ಗ್ರಾಮಸ್ಥರು ತಹಶೀಲ್ದಾರರಲ್ಲಿ ಮನವಿ ಮಾಡಿದರು.
ಮೊಳಕಾಲ್ಮೂರು: ತಾಲೂಕಿನಲ್ಲಿ ಕೋವಿಡ್ ಹರಡದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಎಂ. ಬಸವರಾಜ್ ತಿಳಿಸಿದರು.
ತಾಲೂಕಿನ ರಾಂಪುರ ಗ್ರಾಮದಲ್ಲಿ ಬಾಲಕಿಯೊಬ್ಬಳಿಗೆ ಕೋವಿಡ್ ಪಾಸಿಟಿವ್ ಪತ್ತೆಯಾಗಿದ್ದರಿಂದ ಈ ಗ್ರಾಮ ಹಾಗೂ ಇನ್ನಿತರ ಗ್ರಾಮಸ್ಥರಿಗೆ ಹರಡದಂತೆ ಲಾಕ್ ಡೌನ್ ಮಾಡಲಾಗಿತ್ತು. ಲಾಕ್‌ಡೌನ್ ತೆರವು ಮಾಡಬೇಕೆಂದು ಗ್ರಾಮಸ್ಥರು ಮಾಡಿದ ಮನವಿಗೆ ಅವರು ಪ್ರತಿಕ್ರಿಯಿಸಿದರು. ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ರವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಕಳೆದ ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಪತ್ತೆಯಾದ ಬಾಲಕಿಯ ಮನೆಯಲ್ಲಿಯೇ ವೃದ್ಧೆಗೆ ಕೋವಿಡ್ ಸೋಂಕು ತಗುಲಿದೆ. ಹಾಗಾಗಿ ಲಾಕ್‌ಡೌನ್ ಅನ್ನು ಮಧ್ಯಾಹ್ನ 2 ರಿಂದ ಮುಂದುವರೆಸಲಾಗುವುದು. ಮೇಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಗ್ರಾಮಸ್ಥರು ಲಾಕ್ ಡೌನ್‌ಗೆ ಸಹಕಾರ ನೀಡುವಂತೆ ಕೋರಿದರು.
ವಕೀಲ ಆರ್.ಎಂ. ಅಶೋಕ ಮಾತನಾಡಿ, ರಾಂಪುರದಲ್ಲಿ ಕಳೆದ ಹತ್ತು ದಿನಗಳಿಂದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಕಾನೂನು ಪಾಲನೆ ಮಾಡಲಾಗಿದೆ. ಈ ಗ್ರಾಮದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಜಾಸ್ತಿ ಇಲ್ಲ. ಲಾಕ್‌ಡೌನ್‌ನಿಂದ ಬೀದಿಬದಿ ವ್ಯಾಪಾರಸ್ಥರು ಮತ್ತು ಕೂಲಿ ಕಾರ್ಮಿಕರಿಗೆ ಕೆಲಸವಿಲ್ಲದೆ ಸಂಕಷ್ಟ ಎದುರಿಸುವಂತಾಗಿದೆ. ಆದ್ದರಿಂದ ಲಾಕ್‌ಡೌನ್ ಸಡಿಲಗೊಳಿಸಿ ಬೀದಿಬದಿ ವ್ಯಾಪಾರಸ್ಥರು ಮತ್ತು ಕೂಲಿ ಕಾರ್ಮಿಕರು ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಬೇಕೆಂದು ಮನವಿ ಮಾಡಿದರು. ನಾಗರಾಜ್, ಗಂಗಾರೆಡ್ಡಿ, ಕೆ.ಆರ್. ಮಲಿಕಾರ್ಜುನ, ಗಡ್ಡೆ ತಿಪ್ಪಣ್ಣ, ಎಂ.ಕೆ. ಮೂರ್ತಿ, ಮಲ್ಲಯ್ಯಸ್ವಾಮಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.