ಪೈಪ್‌ಲೈನ್ ಕಾಮಗಾರಿ ಅವೈಜ್ಞಾನಿಕ
Team Udayavani, Feb 20, 2020, 6:12 PM IST
ಮೊಳಕಾಲ್ಮೂರು: ಪಟ್ಟಣದ ಕೋನಸಾಗರ ರಸ್ತೆ ಬದಿಯಲ್ಲಿ ಕೈಗೊಂಡಿರುವ ತುಂಗಾ ಹಿನ್ನೀರು ಯೋಜನೆಯ ಪೈಪ್ ಲೈನ್ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ಪಟ್ಟಣ ಪಂಚಾಯತ್ ಸದಸ್ಯರು ಕಾಮಗಾರಿಯನ್ನು ತಡೆಯೊಡ್ಡಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪಟ್ಟಣ ಪಂಚಾಯತ್ ಸದಸ್ಯ ಎಂ. ಅಬ್ದುಲ್ಲಾ, ರಸ್ತೆ ಮಧ್ಯದಿಂದ 21 ಮೀಟರ್ ಅಂತರದಲ್ಲಿ ಪೈಪ್‌ಲೈನ್ ಅಳವಡಿಸಬೇಕೆಂಬ ನಿಯಮವಿದೆ. ಆದರೆ ರಸ್ತೆಯ ಬದಿಯ 10 ಅಡಿ ಅಂತರದಲ್ಲಿಯೇ ಪೈಪ್‌ಲೈನ್ ಹಾಕುತ್ತಿರುವುದು ಅವೈಜ್ಞಾನಿಕವಾಗಿದೆ. ಟೌನ್ ವ್ಯಾಪ್ತಿಗೆ ಬರುವ ಈ ರಸ್ತೆ ಬದಿಯ 10 ಅಡಿ ಅಂತರದಲ್ಲಿ ಪೈಪ್ ಲೈನ್ ಹಾಕಿದರೆ ವ್ಯರ್ಥವಾಗುತ್ತದೆ. ಹಾಗಾಗಿ ಮುಂದಿನ ದಿನಗಳಲ್ಲಿ ಈ ಯೋಜನೆ ವಿಫಲವಾಗಲಿದೆ. ಈ ರಸ್ತೆ ರಾಜ್ಯ ಹೆದ್ದಾರಿಗೆ ಒಳಪಟ್ಟಿದ್ದು 21 ಮೀಟರ್ ಅಂತರದಲ್ಲಿ ಕಾಮಗಾರಿ ಕೈಗೊಳ್ಳದೆ ರಸ್ತೆ ಸಮೀಪದಲ್ಲಿ ಪೈಪ್ ಲೈನ್ ಹಾಕಿದರೆ ಮುಂದಿನ ದಿನಗಳಲ್ಲಿ ರಸ್ತೆ ಅಗಲೀಕರಣವಾಗುವಾಗ ಈ ಯೋಜನೆಯಿಂದ ಜನರಿಗೆ ತೊಂದರೆಯಾಗುತ್ತದೆ. ಆದ್ದರಿಂದ ಈ ಕಾಮಗಾರಿಯನ್ನು ಸಮರ್ಪಕವಾಗಿ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ತುಂಗಾ ಹಿನ್ನೀರಿನ ಕಾಮಗಾರಿ ಯೋಜನೆಯ ಮೆಗಾ ಕನ್ಸ್ಟ್ರಕ್ಷನ್ ಯೋಜನಾ ವ್ಯವಸ್ಥಾಪಕ ಪೊನ್ನುಸ್ವಾಮಿ ಮಾತನಾಡಿ, ಈಗಾಗಲೇ ಹಾನಗಲ್ ಹಾಗೂ ಇನ್ನಿತರ ಗ್ರಾಮೀಣ ಪ್ರದೇಶಗಳ ರಸ್ತೆ ಬದಿಯಲ್ಲಿ ಕಾಮಗಾರಿ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯಿಂದ ಅನುಮತಿ ಪಡೆದು ಮಾಡಿದಂತೆ ಈ ರಸ್ತೆಯಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಈ ರಸ್ತೆಯಿಂದ ಕೋನಸಾಗರ ಗ್ರಾಮದ ಮಾರ್ಗವಾಗಿ ಹೋಗುವ ಪೈಪ್‌ಲೈನ್ ಕಾಮಗಾರಿ ಕೈಗೊಂಡಿದ್ದು, ಕೂಡಲೇ ರಸ್ತೆಯ ನಿಯಮದಂತೆ ಪಟ್ಟಣ ಪಂಚಾಯತ್ ಅನುಮತಿ ಪಡೆದು ಕಾಮಗಾರಿ ಕೈಗೊಳ್ಳಲಾಗುವುದೆಂದು ತಿಳಿಸಿದರು.
ಪಟ್ಟಣ ಪಂಚಾಯತ್ ಇಂಜಿನಿಯರ್ ರೇವಣಸಿದ್ದೇಶ್ವರ ಮಾತನಾಡಿ, ಪಟ್ಟಣದ ವ್ಯಾಪ್ತಿಗೊಳಪಡುವ ಈ ರಸ್ತೆಯಲ್ಲಿ ಕಾಮಗಾರಿ ಕೈಗೊಳ್ಳುವ ಮುನ್ನ ಪಪಂ ಗಮನಕ್ಕೆ ತಂದು ಅನುಮತಿ ಪಡೆಯಬೇಕಿದೆ. ಕುಡಿಯುವ ನೀರಿನ ಈ ಯೋಜನೆ
ಶಾಶ್ವತವಾಗಿದ್ದು, ನಿಯಮಾನುಸಾರ 21 ಮೀಟರ್ ಅಂತರದಲ್ಲಿ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದರು. ಪಟ್ಟಣ ಪಂಚಾಯತ್ ಸದಸ್ಯರಾದ ಟಿ.ಟಿ. ರವಿಕುಮಾರ್, ನಬಿಲ್ ಅನ್ಸರ್, ಗ್ರಾಮೀಣ ಕುಡಿಯುವ ನೀರಿನ ಇಲಾಖೆ ಸಹಾಯಕ ಅಭಿಯಂತರ ಪವನ್, ಮುಖಂಡರಾದ ಡಿಶ್ ರಾಜ್, ಗೋಪಾಲ್, ಓಬಣ್ಣ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.