ಕುರುಬ ಸಮಾಜಕ್ಕೆ ವಿಶೇಷ ಪ್ಯಾಕೇಜ್ ಘೋಷಣೆಗೆ ಮನವಿ
Team Udayavani, May 16, 2020, 6:23 PM IST
ಮೊಳಕಾಲ್ಮೂರು: ಹಾಲುಮತ ಮಹಾಸಭಾದ ತಾಲೂಕು ಘಟಕದ ವತಿಯಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಮೊಳಕಾಲ್ಮೂರು: ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುರಿ ಸಾಕಾಣಿಕೆ, ಕುರಿ ಉಣ್ಣೆ, ಕಂಬಳಿ ತಯಾರಿಕೆ ಮಾಡುವ ಕುರುಬ ಸಮಾಜಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ನೆರವು ನೀಡಬೇಕೆಂದು ಒತ್ತಾಯಿಸಿ ಹಾಲುಮತ ಮಹಾಸಭಾದ ತಾಲೂಕು ಘಟಕದ ವತಿಯಿಂದ ತಹಶೀಲ್ದಾರ್ ಎಂ. ಬಸವರಾಜ್ ಅವರಿಗೆ ಮನವಿ ಸಲ್ಲಿಸಲಾಯಿತು.
ಹಾಲುಮತ ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಜಿ.ಎನ್. ಜಗದಿಧೀಶ್ ಮಾತನಾಡಿ, ಕೊರೊನಾ ವೈರಸ್ ಅಟ್ಟಹಾಸವನ್ನು ಮೆಟ್ಟಿ ನಿಲ್ಲಲು ಲಾಕ್‌ಡೌನ್ ಅಸ್ತ್ರ ಬಳಸಿ ಜನರ ಪ್ರಾಣ ರಕ್ಷಣೆಗೆ ಹಲವಾರು ಕ್ರಮಗಳನ್ನು ಕೈಗೊಂಡಿರುವುದು ಸ್ವಾಗತಾರ್ಹ. ರಾಜ್ಯದಲ್ಲಿ ಶ್ರಮಿಕ ವರ್ಗಕ್ಕೆ ನೆರವು ನೀಡಿರುವುದು ಪ್ರಯೋಜನಕಾರಿಯಾಗಿದೆ. ಆದರೆ ಹಾಲುಮತದ ಕುಲಕಸುಬಾದ ಕುರಿ ಉಣ್ಣೆ, ಕಂಬಳಿ ತಯಾರಿಕೆ, ಕುರಿ ಮತ್ತು ಗೋಪಾಲಕರನ್ನು ನಿರ್ಲಕ್ಷಿಸಲಾಗಿದೆ. ಲಾಕ್‌ಡೌನ್ ಸಂದರ್ಭದಲ್ಲಿ ಜೀವನ ಸಾಗಿಸುವುದು ಕಷ್ಟಕರವಾಗಿರುವುದರಿಂದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ನೆರವು ನೀಡಬೇಕು. ಕುರಿಗಳು ಮತ್ತು ಇನ್ನಿತರ ಜಾನುವಾರುಗಳು ಆಕಸ್ಮಿಕವಾಗಿ ಮರಣ ಹೊಂದಿದ್ದಲ್ಲಿ ಹಿಂದಿನ ಸರ್ಕಾರ ನೀಡುತ್ತಿದ್ದ ಸಹಾಯಧನವನ್ನು ಮುಂದುವರಿಸಬೇಕೆಂದು ಒತ್ತಾಯಿಸಿದರು. ಎಂ.ಬಿ. ತಿಪ್ಪೇಸ್ವಾಮಿ, ದೊಡ್ಡವೀರಣ್ಣ, ವೆಂಕಟೇಶ್, ನಾಗರಾಜ್, ಮಂಜು, ನಾಗೇಶ್, ಟಿ. ಈಶ್ವರಪ್ಪ, ಶಿವಣ್ಣ, ಓಂಕಾರಪ್ಪ, ಮಹಾಂತೇಶ್, ಎಂ.ಬಿ. ಮಂಜುನಾಥ, ವಿರೂಪಾಕ್ಷಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.