ಲಾರಿ – ಕಾರು ಅಪಘಾತ: ಲಾರಿ ಚಾಲಕನ ಮೇಲೆ ಮೊಳಕಾಲ್ಮೂರು ತಹಶಿಲ್ದಾರ್ ಹಲ್ಲೆ
Team Udayavani, Sep 6, 2020, 10:14 AM IST
ಚಿತ್ರದುರ್ಗ: ಲಾರಿ ಮತ್ತು ಕಾರಿನ ನಡುವೆ ಢಿಕ್ಕಿಯಾಗಿದ್ದು, ಕಾರು ಚಾಲನೆ ಮಾಡುತ್ತಿದ್ದ ಮೊಳಕಾಲ್ಮೂರು ತಹಶಿಲ್ದಾರ್ ಮಲ್ಲಿಕಾರ್ಜುನ್ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.
ಶನಿವಾರ ರಾತ್ರಿ ಚಿತ್ರದುರ್ಗ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಖಾಸಗಿ ಕಾರನ್ನು ಸ್ವತಃ ಚಾಲನೆ ಮಾಡಿಕೊಂಡು ಬರುತ್ತಿದ್ದ ತಹಶೀಲ್ದಾರ್ ಮಲ್ಲಿಕಾರ್ಜುನ್ ಲಾರಿಗೆ ಢಿಕ್ಕಿಯಾದ ಬಳಿಕ ಲಾರಿ ಚಾಲಕನ ಮುಖಕ್ಕೆ ಕಲ್ಲಿನಿಂದ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: ಎಡನೀರು ಸ್ವಾಮೀಜಿ ಕೃಷ್ಣೈಕ್ಯ: ಏನಿದು ದೇಶದ ಗಮನ ಸೆಳೆದಿದ್ದ ಕೇಶವಾನಂದ ಭಾರತಿ ಪ್ರಕರಣ
ಸ್ಥಳದಲ್ಲಿದ್ದವರು ಲಾರಿ ಚಾಲಕನ ಸಹಾಯಕ್ಕೆ ಬಂದಿದ್ದು, ತಹಶೀಲ್ದಾರ್ ಮಲ್ಲಿಕಾರ್ಜುನ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮಗೆ ಹಲ್ಲೆ ಮಾಡುವ ಅಧಿಕಾರ ಕೊಟ್ಟವರು ಯಾರು ಎಂದು ಪ್ರಶ್ನಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bettampady: ಶಾಲಾ ಮಕ್ಕಳಿಂದ ಮನೆಯಲ್ಲಿ ಭತ್ತದ ಕೃಷಿ ಅಭಿಯಾನ ಯಶಸ್ವಿ
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.