ಫೆ.8ರಿಂದ ವಾಲ್ಮೀಕಿ ಜಾತ್ರೋ ತ್ಸವ
ವಾಲ್ಮೀಕಿ-ನಾಯಕ ಸಮುದಾಯ ಪಕ್ಷಾತೀತವಾಗಿ ಸಂಘಟಿತವಾಗಲಿ
Team Udayavani, Jan 12, 2020, 4:21 PM IST
ಮೊಳಕಾಲ್ಮೂರು: ರಾಜ್ಯದಲ್ಲಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ, ಐತಿಹಾಸಿಕ ಪರಂಪರೆ ಹೊಂದಿರುವ ವಾಲ್ಮೀಕಿ, ನಾಯಕ ಸಮುದಾಯವು ಪಕ್ಷಾತೀತವಾಗಿ ಸಂಘಟಿತರಾಗಬೇಕು ಎಂದು ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಕರೆ ನೀಡಿದರು.
ಪಟ್ಟಣದ ಹೊರವಲಯದಲ್ಲಿರುವ ವಾಲ್ಮೀಕಿ ಸಮುದಾಯ ಭವನದಲ್ಲಿ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ನಡೆಯುವ ಮಹರ್ಷಿ ವಾಲ್ಮೀಕಿ ಜಾತ್ರೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಾಯಕ ಸಮುದಾಯದ ಆದಿಕವಿ ಮಹರ್ಷಿ ವಾಲ್ಮೀಕಿ ಮಹರ್ಷಿಯವರು ನಾಯಕ ಸಮುದಾಯದ ಶ್ರೇಯೋಭಿವೃದ್ಧಿಗಾಗಿ ಮಹತ್ತರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಸಮಾಜದಲ್ಲಿ ಅತ್ಯಂತ ಹಿಂದುಳಿದ ಹೆಚ್ಚು ಜನಸಂಖ್ಯೆಯಲ್ಲಿ ನಾಲ್ಕನೇ ಸ್ಥಾನ ಹೊಂದಿರುವ ನಾಯಕ ಜನಾಂಗವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ,ಧಾರ್ಮಿಕವಾಗಿ ಅಭಿವೃದ್ಧಿ ಹೊಂದಿ ಮುಖ್ಯವಾಹಿನಿಗೆ ಬರಬೇಕಾಗಿದೆ. ನಾಯಕ ಸಮುದಾಯದ ಏಳ್ಗೆಗಾಗಿ ಲಿಂಗೈಕ್ಯ ಪುಣ್ಯಾನಂದಪುರಿ ಸ್ವಾಮೀಜಿಯವರೂ ಸಹ ಶ್ರಮಿಸಿರುವುದರಿಂದ ಪುಣ್ಯಾನಂದಪುರಿ ಸ್ವಾಮೀಜಿಯವರ ಪುಣ್ಯಾರಾಧನೆಯ ವಾಲ್ಮೀಕಿ ಜಾತ್ರೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯಾದ್ಯಂತವಿರುವ ನಾಯಕ ಸಮುದಾಯವು ತಪ್ಪದೇ ಫೆ.8 ಮತ್ತು 9 ರಂದು ನಡೆಯುವ ಜಾತ್ರೋತ್ಸವಕ್ಕೆ ಆಗಮಿಸಬೇಕಾಗಿದೆ ಎಂದರು.
ರಾಜ್ಯದಲ್ಲಿ ಹೆಚ್ಚು ಜನಸಂಖ್ಯೆಯಲ್ಲಿರುವ ನಾಯಕ ಸಮುದಾಯದ ಅಭಿವೃದ್ಧಿಗಾಗಿ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಲು ಸಂಘಟಿತರಾಗಬೇಕಾಗಿದೆ. ರಾಜ್ಯದಲ್ಲಿ ಬೇರೆ ಜನಾಂಗದವರು ನಾಯಕ ಸಮುದಾಯದ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು
ಸೌಲಭ್ಯಗಳಿಂದ ವಂಚಿಸುವ ಬಗ್ಗೆ ಅರಿತು ತಡೆಯಬೇಕಾಗಿದೆ. ಈ ರಾಜ್ಯದ ನಾಯಕ ಜನಾಂಗದ ಅಭಿವೃದ್ಧಿಗಾಗಿ ಮೀಸಲಿಟ್ಟ 30 ಕೋಟಿ ರೂ. ಅನುದಾನದಲ್ಲಿ ಕೇವಲ
11 ಕೋಟಿ ರೂ. ಮಾತ್ರ ಖರ್ಚು ಮಾಡಿ ಉಳಿದ 19 ಕೋಟಿ ರೂ. ಬೇರೆ ಇಲಾಖೆಗಳಿಗೆ ವರ್ಗಾವಣೆ ಮಾಡಲಾಗಿದೆ. ಹಾಗಾಗಿ ಈ ನಾಯಕ ಸಮುದಾಯದ ಪ್ರಗತಿಗಾಗಿ ಮಂಜೂರಾದ ಅನುದಾನ ಸದ್ಬಳಕೆ ಮಾಡಿಕೊಳ್ಳಲು ಪ್ರತ್ಯೇಕ ಸಚಿವಾಲಯ ಆರಂಭಿಸಬೇಕಾಗಿದೆ. ಹಂಪಿ ವಿಶ್ವವಿದ್ಯಾಲಯಕ್ಕೆ ವಾಲ್ಮೀಕಿ ಹೆಸರನ್ನು ನಾಮಕರಣ ಮಾಡಬೇಕಾಗಿದೆ. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದ ಬಳಿಯಲ್ಲಿಯೇ ಮಹರ್ಷಿ ವಾಲ್ಮೀಕಿಯವರ ಮಂದಿರವನ್ನು ನಿರ್ಮಾಣ ಮಾಡಬೇಕಾಗಿದೆ.
ವಾಲ್ಮೀಕಿ ಯವರ ಜಾತ್ರೋತ್ಸವದಲ್ಲಿ ನಾಯಕ ಸಮುದಾಯದ ಪರಂಪರೆಯನ್ನು
ಜನಾಂಗದವರಲ್ಲಿ ಜಾಗೃತಿ ಮೂಡಿಸಿ ಜಲ್ವಂತ ಸಮಸ್ಯೆಗಳನ್ನು ನಿವಾರಿಸಬೇಕಾಗಿದೆ. ರಾಜ್ಯದಲ್ಲಿ ಸುಮಾರು 60 ಲಕ್ಷ ಜನಸಂಖ್ಯೆ ಹೊಂದಿರುವ ನಾಯಕ ಸಮುದಾಯಕ್ಕೆ
ಹಲವಾರು ಬೇಡಿಕೆ ಈಡೇರಿಸಬೇಕಾಗಿದೆ ಎಂದರು.
ತಾಪಂ ಸದಸ್ಯ ಎಸ್.ತಿಪ್ಪೇಸ್ವಾಮಿ, ಮಾಜಿ ಸದಸ್ಯ ಕಲ್ಲೇಶ್, ತಾಲೂಕು ಅಧ್ಯಕ್ಷ
ಕೆ.ಜಗಲೂರಯ್ಯ, ಮುಖಂಡರಾದ ವಿ.ಮಾರನಾಯಕ, ವೈ.ಡಿ.ಬಸವರಾಜ್, ಗೋವಿಂದಪ್ಪ, ಪರಮೇಶ್ವರಪ್ಪ, ಬಿ.ಸತ್ಯನಾರಾಯಣ, ವೀರೇಂದ್ರಸಿಂಹ, ಎಸ್.ಇ. ದೇವಯ್ಯ, ಗುರುರಾಜ್,
ರಾಮದಾಸ್, ಭಕ್ತ ಪ್ರಹ್ಲಾದ, ಸಂಜೀವ, ಮಂಜುನಾಥ, ಪಾಪೇಶ್, ಪಾಲಯ್ಯ, ಟೈಲರ್ ತಿಪ್ಪೇಸ್ವಾಮಿ, ನಾಯಕ ಸಮುದಾಯದ ಮುಖಂಡರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.