ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು!
Team Udayavani, Jun 19, 2020, 7:57 AM IST
ಚಿತ್ರದುರ್ಗ: ಕೋವಿಡ್ ಆತಂಕದ ನಡುವೆಯೂ ಜಿಲ್ಲೆಯಲ್ಲಿ ಬಾಕಿ ಉಳಿದಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪತ್ರಿಕೆಯ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ಆದರೆ ಪರೀಕ್ಷೆಗೆ ಗೈರುಹಾಜರಾದ ವಿದ್ಯಾರ್ಥಿಗಳ ಸಂಖ್ಯೆ ಅಚ್ಚರಿ ಮೂಡಿಸಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಆಂಗ್ಲಭಾಷೆ ವಿಷಯದಲ್ಲಿ ಜಿಲ್ಲೆಯ ಹಾಗೂ ಹೊರ ಜಿಲ್ಲೆ ಸೇರಿದಂತೆ ಒಟ್ಟು 15,385 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 14,345 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 1040 ವಿದ್ಯಾರ್ಥಿಗಳು ಗೈರಾಗಿದ್ದರು. ಜಿಲ್ಲೆಯ 13,532 ವಿದ್ಯಾರ್ಥಿಗಳು ಹಾಗೂ ಹೊರ ಜಿಲ್ಲೆಯ 813 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಗೈರುಹಾಜರಾದವರ ಪೈಕಿ ಜಿಲ್ಲೆಯ 1031 ವಿದ್ಯಾರ್ಥಿಗಳಾದರೆ, 9 ವಿದ್ಯಾರ್ಥಿಗಳು ಹೊರ ಜಿಲ್ಲೆಯವರು. ಜಿಲ್ಲೆಯಲ್ಲಿ ಯಾವುದೇ ಡಿಬಾರ್ ಪ್ರಕರಣ ವರದಿಯಾಗಿಲ್ಲ. ಈ ವಿಷಯದೊಂದಿಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2020 ಮುಕ್ತಾಯಗೊಂಡಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಶೋಭಾ ಮಾಹಿತಿ ನೀಡಿದ್ದಾರೆ.
ಬೆಳಗ್ಗೆ ಪರೀಕ್ಷೆಯ ಆರಂಭಕ್ಕೂ ಮುನ್ನ ಅಂದರೆ 8 ಗಂಟೆಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಆಗಮಿಸುತ್ತಿದ್ದರು. ಎಲ್ಲಾ ಕೇಂದ್ರಗಳಲ್ಲೂ ಸ್ಯಾನಿಟೈಸ್ ಮಾಡಿ, ಮಾಸ್ಕ್ ಹಾಕಿಸಿ ಒಳಗೆ ಕಳುಹಿಸಲಾಯಿತು. ಕೆಲವೆಡೆ ಸಾಮಾಜಿಕ ಅಂತರ ಪಾಲನೆಯಾಗಲಿಲ್ಲ. ಯಾವುದೇ ಪರೀಕ್ಷಾ ಕೇಂದ್ರದಲ್ಲೂ ಜ್ವರ ಅಥವಾ ಅನಾರೋಗ್ಯದ ಕಾರಣಕ್ಕೆ ಪ್ರತ್ಯೇಕವಾಗಿ ಪರೀಕ್ಷೆ ಬರೆಸಿದ ಪ್ರಕರಣಗಳು ಕಂಡು ಬಂದಿಲ್ಲ ಎಂದು ಪಿಯು ಡಿಡಿಪಿಐ ತಿಳಿಸಿದ್ದಾರೆ. ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿ ಪಿಯುಸಿ ಪರೀಕ್ಷೆ ಸುಸೂತ್ರವಾಗಿ ನಡೆಯಲು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.