ನಾಲ್ಕೇ ತಿಂಗಳಲ್ಲಿ 25.54 ಲಕ್ಷ ರೂ.ಕಾಣಿಕೆ

ತಿಪ್ಪೇರುದ್ರಸ್ವಾಮಿ ದೇಗುಲ ಹುಂಡಿ ಹಣ ಎಣಿಕೆಕಳೆದ ವರ್ಷಕ್ಕಿಂತ ಈ ಬಾರಿ 9,09,863 ರೂ. ಹೆಚ್ಚು ಸಂಗ್ರಹ

Team Udayavani, Feb 28, 2020, 1:18 PM IST

28-Febraury-13

ನಾಯಕನಹಟ್ಟಿ: ತಿಪ್ಪೇರುದ್ರಸ್ವಾಮಿ ದೇವಾಲಯದ ಹುಂಡಿಯಲ್ಲಿ ನಾಲ್ಕು ತಿಂಗಳ ಅವ ಧಿಯಲ್ಲಿ ಒಟ್ಟು 25.54 ಲಕ್ಷ ರೂ. ಕಾಣಿಕೆ ಸಂಗ್ರಹವಾಗಿದೆ. ಗುರುವಾರ ದೇವಾಲಯದ ಹುಂಡಿ ಹಣದ ಎಣಿಕಾ ಕಾರ್ಯ ಜರುಗಿತು. ಒಳಮಠದ ಹುಂಡಿಗಳಲ್ಲಿ 18,82,105, ರೂ., ಹೊರಮಠದಲ್ಲಿ 5,15,509 ರೂ. ಹಾಗೂ ದಾಸೋಹ ಭವನದ ಹುಂಡಿಯಲ್ಲಿ 1,57,344 ರೂ. ಸಂಗ್ರಹವಾಗಿದೆ.

ಒಟ್ಟಾರೆ ಎರಡೂ ದೇವಾಲಯದ ಹುಂಡಿಗಳಲ್ಲಿ 25,54,958 ರೂ.ಗಳು ಸಂಗ್ರಹವಾಗಿವೆ. ಕಳೆದ ವರ್ಷ ಮಾರ್ಚ್‌ 16 ರಂದು ನಡೆದಿದ್ದ ಜಾತ್ರೆಗೆ ಮುಂಚಿತವಾಗಿ ನಡೆದ ಹುಂಡಿ ಎಣಿಕೆಯಲ್ಲಿ 16,45,095 ರೂ. ಸಂಗ್ರಹವಾಗಿತ್ತು. ಈ ಬಾರಿ ಸಂಗ್ರಹವಾದ ಕಾಣಿಕೆ 9,09,863 ರೂ. ದಷ್ಟು ಹೆಚ್ಚಾಗಿದೆ. ಹೊರಮಠದಲ್ಲಿ 27,574
ರೂ ನಾಣ್ಯಗಳು ಸಂಗ್ರಹವಾಗಿತ್ತು.

ಒಳಮಠದಲ್ಲಿ 87,100 ರೂ. ನಾಣ್ಯಗಳು ಸಂಗ್ರಹವಾಗಿದೆ. 5ರೂ. ನಾಣ್ಯಗಳನ್ನು ಎಣಿಸಲಾಯಿತು. 1ಹಾಗೂ 2 ರೂ. ನಾಣ್ಯಗಳನ್ನು ತೂಕದ ರೀತಿಯಲ್ಲಿ ಎಣಿಸಲಾಯಿತು. ಇತ್ತೀಚಿನ ದಿನಗಳಲ್ಲಿ ನಾಣ್ಯಗಳ ಬಳಕೆ ಕಡಿಮೆಯಾಗಿದೆ. ಎರಡು ವರ್ಷಗಳ ಹಿಂದಿನ ಅವಧಿಯಲ್ಲಿ ಸುಮಾರು 1 ಲಕ್ಷ ರೂ. ಚಿಲ್ಲರೆ ಸಂಗ್ರಹವಾಗುತ್ತಿತ್ತು. ಆದರೆ ಈ ಬಾರಿ ನೋಟುಗಳ ಪ್ರಮಾಣ ಹೆಚ್ಚಾಗಿದೆ.

100 ಹಾಗೂ 500 ರೂ ನೋಟುಗಳ ಪ್ರಮಾಣ ಜಾಸ್ತಿ ಇದೆ. ಕಂದಾಯ ಇಲಾಖೆಯ 100ಕ್ಕೂ ಹೆಚ್ಚು ಸಿಬ್ಬಂದಿ, ಕೆನರಾ ಬ್ಯಾಂಕ್‌ ಹಾಗೂ ದೇವಾಲಯ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಬೆಳಿಗ್ಗೆ ಆರಂಭವಾದ ಎಣಿಕಾ ಕಾರ್ಯ ಸಂಜೆ ಮುಕ್ತಾಯಗೊಂಡಿತು. ಎಣಿಕೆ ಕಾರ್ಯವನ್ನು ವೀಡಿಯೋ ಚಿತ್ರೀಕರಣ ಮಾಡಲಾಯಿತು.

ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ, ಕಾರ್ಯ ನಿರ್ವಹಣಾಧಿಕಾರಿ ಎಸ್‌ .ಪಿ.ಬಿ ಮಹೇಶ್‌, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜೆ.ಪಿ. ರವಿಶಂಕರ್‌, ಕೆನರಾ ಬ್ಯಾಂಕ್‌ ವ್ಯವಸ್ಥಾಪಕ ಈಶ್ವರಪ್ಪ, ಬ್ಯಾಂಕ್‌ ಅಧಿ ಕಾರಿ ಸಂತೋಷ್‌, ಸಿಬ್ಬಂದಿ ಮಂಜುನಾಥ್‌, ಉಪ ತಹಶೀಲ್ದಾರ್‌ ಜಗದೀಶ್‌, ಪಿಎಸ್‌ಐ ರಘುಪ್ರಸಾದ್‌, ವ್ಯವಸ್ಥಾಪನ ಸಮಿತಿ ಸದಸ್ಯರಾದ ಗೋವಿಂದರಾಜ್‌, ರುದ್ರಮುನಿ, ನಾಗಣ್ಣ, ಹಂಸವೇಣಿ, ಮುನಿಯಪ್ಪ, ಟಿ. ರುದ್ರಮುನಿ, ವಿರೂಪಾಕ್ಷಪ್ಪ ಮತ್ತಿತರರು ಇದ್ದರು.

ಹುಂಡಿಯಲ್ಲಿದ್ದವು ವಿದೇಶಿ ನಾಣ್ಯ
ಹೊರಮಠದ ಹುಂಡಿಯಲ್ಲಿ ಮಲೇಷಿಯಾ, ವಿಯೆಟ್ನಾಂ ದೇಶದ ನೋಟುಗಳು ಕಂಡು ಬಂದಿವೆ. ಜತೆಗೆ ಕೊರಿಯಾ ಹಾಗೂ ಅಮೆರಿಕ ದೇಶದ ನಾಣ್ಯಗಳೂ ಇದ್ದವು. ದೇವರ ಹುಂಡಿಯಲ್ಲಿ ತೊಟ್ಟಿಲು, ಮುಖಪದ್ಮ, ಕರಡಿಗೆ, ನಂದಿ, ಪಾದುಕೆ ಜತೆಗೆ ಚಿನ್ನದ ನಾಣ್ಯ ಸೇರಿದಂತೆ ನಾನಾ ವಸ್ತುಗಳನ್ನು ಹಾಕಲಾಗಿದೆ. ಸುಮಾರು 40ಕ್ಕೂ ಹೆಚ್ಚು ನಾಗರ ಹೆಡೆಗಳ ಚಿತ್ರವಿರುವ ತಾಮ್ರದ ನಾಣ್ಯಗಳು ಹುಂಡಿಯಲ್ಲಿದ್ದವು.

ಟಾಪ್ ನ್ಯೂಸ್

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.