ಕೋವಿಡ್ ನಿಯಂತ್ರಣ ತನಕ ಶಾಲಾರಂಭ ಬೇಡ: ಹೊರಟ್ಟಿ
Team Udayavani, Jun 12, 2020, 8:39 AM IST
ಚಿತ್ರದುರ್ಗ : ಕೋವಿಡ್ ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಶಾಲೆಗಳನ್ನು ತೆರೆಯಬಾರದು ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದೆ ಶಾಲೆ ತೆರೆದಾಗ ಒಂದು ಶನಿವಾರ ಮಾತ್ರ ರಜೆ ನೀಡಿ, ಉಳಿದಂತೆ ಎಲ್ಲಾ ಶನಿವಾರಗಳಲ್ಲೂ ಇಡೀ ದಿನ ತರಗತಿ ನಡೆಸಲಿ. ಶಾಲಾ ಸಮಯವನ್ನು ಅರ್ಧ ಗಂಟೆ ಹೆಚ್ಚು ಮಾಡಬೇಕು. ದಸರಾ ರಜೆ ರದ್ದುಪಡಿಸಬೇಕು. ಜಯಂತಿ ಮತ್ತಿತರೆ ರಜಾ ದಿನಗಳನ್ನು ರದ್ದು ಮಾಡಿ ಶಾಲೆಗಳನ್ನು ನಡೆಸಬಹುದು ಎಂದು ಸಲಹೆ ನೀಡಿದರು.
ಒಂದರಿಂದ ಪಿಯುವರೆಗೆ ಆನ್‌ಲೈನ್ ಶಿಕ್ಷಣ ನೀಡುವುದು ಸಾಧ್ಯವಿಲ್ಲ. ಪ್ರಾಥಮಿಕ ಹಂತದ ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ಅಪಾಯಕಾರಿ ಎಂದು ಅಭಿಪ್ರಾಯಪಟ್ಟರು. ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳನ್ನು ದುಪ್ಪಟ್ಟು ಮಾಡಿ ಅಂತರ ಕಾಪಾಡಲಿ. ರಾಜ್ಯದಲ್ಲಿ ಶಿಕ್ಷಣ ಸಚಿವರು ಸಾಕಷ್ಟು ಓಡಾಡುತ್ತ ಸಭೆ ಮಾಡುತ್ತಿದ್ದಾರೆ. ಆದರೆ ಶಿಕ್ಷಣ ಇಲಾಖೆ ಮಾತ್ರ ಬೇಜವಾಬ್ದಾರಿ ಹೊಂದಿದೆ. ಶಿಕ್ಷಣ ಇಲಾಖೆಯ ಯಾವ ಅಧಿಕಾರಿಗಳಿಗೂ ಕಳಕಳಿ ಇಲ್ಲ ಎಂದು ದೂರಿದರು.
ನಮ್ಮ ಸಲಹೆ ಕೇಳಿಲ್ಲ: ಅಧಿಕಾರಿಗಳು ಹಾಗೂ ನಮ್ಮಂಥವರನ್ನು ಸೇರಿಸಿ ಸಮಿತಿ ರಚಿಸಬೇಕು. ಆದರೆ ರಾಜ್ಯ ಸರ್ಕಾರ ಇದುವರೆಗೆ ನಮ್ಮ ಸಲಹೆ-ಸೂಚನೆ ಕೇಳಿಲ್ಲ ಎಂದು ಹೊರಟ್ಟಿ ಬೇಸರ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.