ಫುಟ್‌ಪಾತ್‌ ವ್ಯಾಪಾರ ತೆರವುಗೊಳಿಸಲು ಸೂಚನೆ

Team Udayavani, Jul 4, 2017, 12:25 PM IST

CT-1.jpg

ಚಳ್ಳಕೆರೆ: ನಗರದ ಚಿತ್ರದುರ್ಗ ರಸ್ತೆ ಹಾಗೂ ಪಾವಗಡ ರಸ್ತೆಯನ್ನು ಅಗಲೀಕರಣ ಮಾಡಲಾಗಿದ್ದು, ಫುಟ್‌ಪಾತ್‌ ವ್ಯಾಪಾರಿಗಳು ಪ್ರಧಾನ ರಸ್ತೆಗಳನ್ನೇ ಅತಿಕ್ರಮಣ ಮಾಡಿದ್ದರು. ಇದರಿಂದ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು.
ಈ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ನಗರಸಭೆ, ಫುಟ್‌ಪಾತ್‌ ವ್ಯಾಪಾರಿಗಳ ತೆರವಿಗೆ ಕ್ರಮ ಕೈಗೊಂಡಿದೆ.

ನಗರಸಭೆ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷ ಟಿ.ಜೆ. ವೆಂಕಟೇಶ್‌, ನಗರಸಭೆ ಸದಸ್ಯರಾದ ಬಿ.ಟಿ. ರಮೇಶ ಗೌಡ, ಪೌರಾಯುಕ್ತ ಜೆ.ಟಿ. ಹನುಮಂತರಾಜು, ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ನರೇಂದ್ರಬಾಬು, ಆರೋಗ್ಯ ನಿರೀಕ್ಷಕರಾದ ಮಹಲಿಂಗಪ್ಪ, ನಿರ್ಮಲಾ, ರುಕ್ಮಿಣಿ ಅವರು ಫುಟ್‌ಪಾತ್‌ನಲ್ಲಿ ವ್ಯಾಪಾರ ಮಾಡುತ್ತಿರುವವರಿಗೆ
ತೆರವುಗೊಳಿಸುವಂತೆ ಸೂಚನೆ ನೀಡಿದರು. 

ಜು.4ರಂದು ನಗರಸಭೆಯಲ್ಲಿ ನಡೆಯಲಿರುವ ವಿಶೇಷ ಸಭೆಯಲ್ಲಿ ಫುಟ್‌ಪಾತ್‌ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು. ಪೌರಾಯುಕ್ತ ಜೆ.ಟಿ. ಹನುಮಂತರಾಜು ಮಾತನಾಡಿ, ಖಾಸಗಿ ಬಸ್‌ನಿಲ್ದಾಣ ಮತ್ತು ಪಾವಗಡ, ಬಳ್ಳಾರಿ ರಸ್ತೆಗಳಲ್ಲಿ ನಗರಸಭೆಯಿಂದ ಯಾವುದೇ ರೀತಿಯ ಅನುಮತಿ ಪಡೆಯದೆ 
ಫುಟ್‌ಪಾತ್‌ ವ್ಯಾಪಾರಿಗಳು ವ್ಯಾಪಾರದಲ್ಲಿ ತೊಡಗಿದ್ದಾರೆ. ತೆರವುಗೊಳಿಸುವಂತೆ ಮೌಖೀಕವಾಗಿ ಸೂಚನೆ ನೀಡಿದ್ದರೂ
ಪ್ರಯೋಜನವಾಗಿಲ್ಲ. ಆದ್ದರಿಂದ ನಗರಸಭೆ ಸಿಬ್ಬಂದಿಯೊಂದಿಗೆ ತೆರವುಗೊಳಿಸುವ ಕಾರ್ಯವನ್ನು ಪ್ರಾರಂಭಿಸಲಾಗಿದೆ ಎಂದರು.

ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ನರೇಂದ್ರಬಾಬು ಮಾತನಾಡಿ, ಪ್ಲಾಸ್ಟಿಕ್‌ ಕವರ್‌ಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದ್ದರೂ ನಗರಸಭೆಯ ಕಣ್ಣು ತಪ್ಪಿಸಿ ಈ ದಂಧೆ ನಡೆಸಲಾಗುತ್ತಿದೆ. ದಾಳಿಯ
ಸಂದರ್ಭದಲ್ಲಿ ಕೆಲವು ಅಂಗಡಿಗಳಲ್ಲಿದ್ದ ಪ್ಲಾಸ್ಟಿಕ್‌ ಕವರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾರ್ವಜನಿಕರ ಆಕ್ಷೇಪಣೆ ಮೇರೆಗೆ ತೆರವು ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿಸಿದರು. 

ಟಾಪ್ ನ್ಯೂಸ್

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.