ಒನಕೆ ಓಬವ್ವ ಜಯಂತಿ ಸರ್ಕಾರಿ ಆಚರಣೆಯಾಗಲಿ
Team Udayavani, Dec 23, 2018, 11:39 AM IST
ಚಿತ್ರದುರ್ಗ: ನಾಡಿನ ಮಹಿಳೆಯರ ಗೌರವದ ಪ್ರತೀಕವಾಗಿ ಒನಕೆ ಓಬವ್ವ ಜಯಂತಿಯನ್ನು ರಾಜ್ಯ ಸರ್ಕಾರವೇ ಆಚರಿಸುವ ನಿಟ್ಟಿನಲ್ಲಿ ಗಟ್ಟಿ ತೀರ್ಮಾನ ಕೈಗೊಳ್ಳಬೇಕು ಎಂದು ಛಲವಾದಿ ಗುರುಪೀಠದ ಶ್ರೀ ಬಸವನಾಗಿದೇವ ಸ್ವಾಮೀಜಿ ಒತ್ತಾಯಿಸಿದರು.
ಇಲ್ಲಿನ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಒನಕೆ ಓಬವ್ವ ಕೇವಲ ಛಲವಾದಿ
ಸಮುದಾಯಕ್ಕಷ್ಟೇ ಮೀಸಲಾಗಿಲ್ಲ. ಇಡೀ ಮಹಿಳಾ ಸಮುದಾಯದ ಸ್ಫೂರ್ತಿಯಾಗಿದ್ದಾರೆ. ಇಂತಹ ಧೀರ ಮಹಿಳೆಯ ಜಯಂತಿಯನ್ನು ಆಚರಿಸದೇ ಇರುವುದಕ್ಕೆ ಕಾರಣವಾದರೂ ಏನು ಎಂದು ಸ್ವಾಮೀಜಿ ಪ್ರಶ್ನಿಸಿದರು.
ಓಬವ್ವ ವಂಶಸ್ಥರೂ ಈಗಲೂ ಚಿತ್ರದುರ್ಗದಲ್ಲಿದ್ದಾರೆ. ನಾವೂ ಕೂಡ ಓಬವ್ವಳ ವಂಶಸ್ಥರೇ. ಮೂರನೇ ತಲೆಮಾರಿನವರಾಗಿದ್ದಾರೆ. ಓಬವ್ವಳ ವಂಶಸ್ಥರಿದ್ದಾರೆ ಎಂಬುದಕ್ಕೆ ಅನೇಕ ದಾಖಲೆಗಳಿವೆ. ಸರ್ಕಾರಿ ಗೆಜೆಟಿಯರ್‌ನಲ್ಲಿ ಇತಿಹಾಸ ಪ್ರಕಟಿಸಲಾಗಿದೆ. ಒನಕೆ ಓಬವ್ವ
ಸ್ಮಾರಕಕ್ಕೆ ರಾಜ್ಯ ಸರ್ಕಾರ ಐದು ಕೋಟಿ ರೂ. ಗಳನ್ನು ಮೀಸಲಿಟ್ಟಿದೆ. ಚಿತ್ರದುರ್ಗದಲ್ಲಿ ಎಲ್ಲಿಯಾದರೂ ಒಂದು ಎಕರೆ ಜಾಗ ಸಿಕ್ಕ ಕೂಡಲೇ ಸ್ಮಾರಕ ಸಿದ್ಧವಾಗಲಿದೆ ಎಂದರು.
ವೀರವನಿತೆ ಒನಕೆ ಓಬವ್ವ ಜಯಂತ್ಯುತ್ಸವ ಸಮಿತಿ ಕಾರ್ಯಾಧ್ಯಕ್ಷ ಎಚ್.ಸಿ. ನಿರಂಜನಮೂರ್ತಿ ಮಾತನಾಡಿ ಒನಕೆಯಿಂದ ಶತ್ರುಗಳನ್ನು ಸದೆಬಡಿದು ಐತಿಹಾಸಿಕ ಚಿತ್ರದುರ್ಗದ ಕೋಟೆಯನ್ನು ರಕ್ಷಿಸಿದ ವೀರವನಿತೆ ಒನಕೆ ಓಬವ್ವಳ ರಾಜ್ಯ ಮಟ್ಟದ ಜಯಂತ್ಯುತ್ಸವವನ್ನು ಡಿ. 30 ರಂದು ನಗರದ ಹಳೆ ಮಾಧ್ಯಮಿಕ ಶಾಲೆ ಆವರಣದಲ್ಲಿ ನಡೆಸಲಾಗುವುದು. ಬೆಳಿಗ್ಗೆ ಹೊಳಲ್ಕೆರೆ ರಸ್ತೆಯ ಕನಕ ವೃತ್ತದಿಂದ ವಿವಿಧ ಜಾನಪದ ಕಲಾ ತಂಡಗಳ ಮೆರವಣಿಗೆ ಆರಂಭವಾಗಲಿದೆ.
ಎಲ್ಲರನ್ನೂ ಒಗ್ಗೂಡಿಸುವ ಉದ್ದೇಶದಿಂದ ಒನಕೆ ಓಬವ್ವ ಜಯಂತಿ ಆಚರಿಸುತ್ತಿದ್ದೇವೆ. ಉಪಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್ ಸೇರಿದಂತೆ ಛಲವಾದಿ ಸಮುದಾಯದ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಈ ಹಿಂದೆ 2007ರಲ್ಲಿ ರಾಜ್ಯ ಮಟ್ಟದ ಒನಕೆ ಓಬವ್ವ ಜಯಂತಿಯನ್ನು ಚಿತ್ರದುರ್ಗದಲ್ಲೇ ಆಚರಿಸಿದ್ದೆವು. ಇನ್ನು ಮುಂದೆ ಪ್ರತಿ ವರ್ಷ ಸರ್ಕಾರವೇ ಒನಕೆ ಓಬವ್ವ ಜಯಂತಿಯನ್ನು ಆಚರಿಸಲಿ ಎಂಬುದು ನಮ್ಮ ಬೇಡಿಕೆ ಎಂದರು.
ಛಲವಾದಿ ಗುರುಪೀಠ ಟ್ರಸ್ಟ್ ಅಧ್ಯಕ್ಷ ಎನ್. ಲಕ್ಷ್ಮೀನರಸಯ್ಯ ಮಾತನಾಡಿದರು. ಶಾರದ ಬ್ರಾಸ್ ಬ್ಯಾಂಡ್‌ನ ಎಸ್.ವಿ.
ಗುರುಮೂರ್ತಿ, ಮುಖಂಡರಾದ ಎಸ್.ಎನ್. ರವಿಕುಮಾರ್, ಎಸ್.ಎಚ್.ಪರಮೇಶ್, ಪ್ರೊ| ಡಿ.ಎಚ್.ನಟರಾಜ್, ತಿಪ್ಪೇಸ್ವಾಮಿ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.