Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Team Udayavani, Apr 26, 2024, 11:40 PM IST
ಚಿತ್ರದುರ್ಗ: ಗ್ರಾಮಕ್ಕೆ ಮೂಲ ಸೌಲಭ್ಯ ಕಲ್ಪಿಸಿಲ್ಲ ಎಂದು ಮತದಾನ ಬಹಿಷ್ಕಾರ ಮಾಡಿದ್ದ ಚಿತ್ರದುರ್ಗ ತಾಲೂಕಿನ ಗಡಿ ಗ್ರಾಮ ಯರೇಹಳ್ಳಿಯಲ್ಲಿ ಕೇವಲ 18 ಮಂದಿ ಮಾತ್ರ ಮತ ಚಲಾಯಿಸಿದ್ದಾರೆ.
ಗುರುವಾರ ಸಂಜೆಯಿಂದಲೇ ಯರೇಹಳ್ಳಿ ಗ್ರಾಮಸ್ಥರು ಮತದಾನ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಶುಕ್ರವಾರ ಬೆಳಗ್ಗಿನಿಂದ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಮತದಾನ ಮಾಡುವಂತೆ ಮನವೊಲಿಸುವ ಪ್ರಯತ್ನ ಮಾಡಿದ್ದರು. ಮಧ್ಯಾಹ್ನ 2 ಗಂಟೆಗೆ ಜಿಪಂ ಸಿಇಒ ಎಸ್.ಜೆ. ಸೋಮಶೇಖರ್ ಹಾಗೂ ಉಪವಿಭಾಗಾ ಧಿಕಾರಿ ಕಾರ್ತಿಕ್ ಗ್ರಾಮಕ್ಕೆ ತೆರಳಿ ಗ್ರಾಮದ ಸಮಸ್ಯೆಗಳಿಗೆ ಸ್ಪಂದಿಸಿ ಮತದಾನ ಮಾಡುವಂತೆ ಮನವೊಲಿಸಿದ್ದರು.
ಆದರೆ ಅಧಿಕಾರಿಗಳು ಮನವೊಲಿಸಿದ ಬಳಿಕವೂ, ಯರೇಹಳ್ಳಿಯಲ್ಲಿ 18 ಮತಗಳು ಮಾತ್ರ ಚಲಾವಣೆಯಾಗಿವೆ. ಈ ಗ್ರಾಮದಲ್ಲಿ ಒಟ್ಟು 577 ಮತದಾರರಿದ್ದಾರೆ.
ಗ್ರಾಮದ ಸಮಸ್ಯೆಗಳೇನು?
ಯರೇಹಳ್ಳಿಗೆ ಇಂದಿಗೂ ಮೊಬೈಲ್ ನೆಟ್‌ವರ್ಕ್ ಸಿಗುವುದಿಲ್ಲ. ವಿದ್ಯುತ್ ಕೂಡ ಸಮರ್ಪಕವಾಗಿಲ್ಲ ಎಂಬುದು ಗ್ರಾಮಸ್ಥರ ದೂರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.